ಪ್ರಧಾನಿ ಮೋದಿ ಪತ್ನಿ ಜಶೋದಾಬೆನ್ ಕಾರು ಅಪಘಾತ: ಪಾರು
Team Udayavani, Feb 7, 2018, 12:06 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾಬೆನ್ ಅವರು ಇಂದು ಬೆಳಗ್ಗೆ ಕಾರು ಅಪಘತದಲ್ಲಿ ಗಾಯಗೊಂಡಿದ್ದು ಅವರನ್ನು ಚಿತ್ತೋರ್‌ಗಢ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕಾರು ಅಪಘಾತದಲ್ಲಿ ವಸಂತಭಾಯಿ ಮೋದಿ ಎಂಬ ನಿಕಟ ಸಂಬಂಧಿಯೋರ್ವರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೋದಿ ಪತ್ನಿ ಜಶೋದಾಬೆನ್ ಅವರು ಕೋಟ ಸಮೀಪದ ಬಾರಾನ್ ಜಿಲ್ಲೆಯಲ್ಲಿನ ತಮ್ಮ ಬಂಧುಗಳನ್ನು ಭೇಟಿಯಾಗಿ ಗುಜರಾತ್‌ಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತಕ್ಕೆ ಕಾರಣವೇನು ಎಂಬುದು ತತ್‌ಕ್ಷಣಕ್ಕೆ ಗೊತ್ತಾಗಿಲ್ಲ.
ಪಾರ್‌ಸೋಲಿ ಪೊಲೀಸ್ ಠಾಣೆಯ ಎಸ್‌ಎಚ್‌ಓ ಶ್ಯಾಮ್‌ಸಿಂಗ್ ಅವರ ಪ್ರಕಾರ ಜಶೋದಾಬೆನ್ ಅವರಿಗೆ ಯಾವುದೇ ರೀತಿಯ ಗಂಭೀರ ಗಾಯಗಳಾಗಿಲ್ಲ. ಅವರು ತಮ್ಮ ಬಂಧುಗಳೊಂದಿಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಕತುಂಡಾ ಎಂಬಲ್ಲಿಗೆ ಸಮೀಪ ಅಪಘಾತಕ್ಕೆ ಗುರಿಯಾಯಿತು.
ಜಶೋದಾಬೆನ್ ಅವರು ತಮ್ಮ ಸಹೋದರ ಅಶೋಕ್ ಮೋದಿ ಅವರೊಂದಿಗೆ ಮೆಹಸಾನಾ ಜಿಲ್ಲೆಯ ಉಂಜಾ ಪಟ್ಟಣದಲ್ಲಿ ವಾಸವಾಗಿದ್ದಾರೆ. ಆಕೆಗೆ ಮೆಹಸಾನಾ ಪೊಲೀಸ್ ಪಡೆಯಿಂದ ರಕ್ಷಣೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.