10 ರಂದು ರಾಷ್ಟ್ರೀಯ ಲೋಕ ಅದಾಲತ್‌: ನ್ಯಾ| ಪಾಟೀಲ


Team Udayavani, Feb 7, 2018, 2:45 PM IST

bid-1.jpg

ಬೀದರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲಾ ನ್ಯಾಯಾಲಯ ಸೇರಿದಂತೆ ಎಲ್ಲಾ ತಾಲೂಕಿನ ನ್ಯಾಯಾಲಯಗಳಲ್ಲಿ ಫೆ.10ರಂದು ರಾಷ್ಟ್ರೀಯ ಲೋಕ ಅದಾಲತ್‌ ನಡೆಸಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಪ್ರಾಧಿಕಾರದ ಅಧ್ಯಕ್ಷ ಎಂ.ಎಸ್‌. ಪಾಟೀಲ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕ್‌ ಅದಾಲತ್‌ ಕಾರ್ಯಕ್ರಮವನ್ನು ದೇಶದಾದ್ಯಂತ ಏಪ್ರಿಲ್‌ 14, ಜುಲೈ 14, ಸೆಪ್ಟೆಂಬರ್‌ 8 ಮತ್ತು ಡಿಸೆಂಬರ್‌ 8ರಂದು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈ ಅದಾಲತ್‌ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಎನ್‌ಐ ಆ್ಯಕ್ಟ್ ಕಲಂ 138, ಬ್ಯಾಂಕ್‌ ವಸೂಲಾತಿ ಪ್ರಕರಣಗಳು, ಕಾರ್ಮಿಕರ ತಕರಾರು, ವಿದ್ಯುತ್‌ ಹಾಗೂ ನೀರಿನ ಬಿಲ್‌ಗ‌ಳ ಪ್ರಕರಣ, ಇನ್ನಿತರ ಕ್ರಿಮಿನಲ್‌ ಕಂಪೌಂಡೆಬಲ್‌ ಪ್ರಕರಣಗಳು, ವಿವಾಹ ಸಂಬಂಧಿತ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುತ್ತದೆ. 

ಅಲ್ಲದೇ ನ್ಯಾಯಾಲಯದಲ್ಲಿ ಬಾಕಿ ಇರುವ ಕ್ರಿಮಿನಲ್‌ ಕಂಪೌಂಡೆಬಲ್‌ ಅಪರಾಧಗಳು, ಎನ್‌ಐ ಆ್ಯಕ್ಟ್ ಕಲಂ 138, ಬ್ಯಾಂಕ್‌ ವಸೂಲಾತಿ ಪ್ರಕರಣ, ಎಂಎಸಿಟಿ ಪ್ರಕರಣ, ಕಾರ್ಮಿಕರ ತಕರಾರು ಪ್ರಕರಣ, ವಿದ್ಯುತ್‌ ಹಾಗೂ ನೀರಿನ ಬಿಲ್‌ಗ‌ಳ ಪ್ರಕರಣ, ಕೌಟುಂಬಿಕ ತಕರಾರು ಪ್ರಕರಣ, ಭೂ-ಸ್ವಾಧೀನ ಪ್ರಕರಣ, ನೌಕರರ ಸೇವೆಗಳ ತಕರಾರು, ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಕರಣಗಳು ಸೇರಿದಂತೆ ಇತರೆ ಸಿವಿಲ್‌ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ವಿಲೇವಾರಿ ಮಾಡಲಾಗುತ್ತದೆ ಎಂದು
ಹೇಳಿದರು.

ಲೋಕ ಅದಾಲತ್‌ನಲ್ಲಿ ಪ್ರಕರಣಗಳು ರಾಜೀ ಮೂಲಕ ಇತ್ಯರ್ಥಗೊಳ್ಳುವುದರಿಂದ ಉಭಯ ಪಕ್ಷಗಾರರಿಗೆ ಹಣ ಉಳಿತಾಯದ ಜತೆಗೆ ಮಾನಸಿಕ ನೆಮ್ಮದಿಯೂ ಉಳಿಯಲಿದೆ. ಅಲ್ಲದೇ ಇಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡ ಕಕ್ಷಿದಾರರಿಗೆ ನ್ಯಾಯಾಲಯದ ಶುಲ್ಕವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ಹೇಳಿದರು. 

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ. ನಂಜುಂಡಯ್ನಾ, ಹಿರಿಯ ಸಿವಿಲ್‌ ನ್ಯಾಯಾಧೀಶ ಆರ್‌.ರಾಘವೇಂದ್ರ, ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶ ನಿರ್ಮಲಾದೇವಿ, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ ಉಪಸ್ಥಿತರಿದ್ದರು. 

ಪ್ರಕರಣ ವಿಲೇವಾರಿ ಗುರಿ ಬೀದರ ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 2017ರ ಜನವರಿಯಿಂದ ಡಿಸೆಂಬರ್‌ ವರೆಗೆ ಒಟ್ಟು 14,437 ಪ್ರಕರಣಗಳನ್ನು ವಿಲೇವಾರಿ ಮಾಡಿ, 5.96 ಕೋಟಿ ರೂ. ವಸೂಲಿ ಮಾಡಲಾಗಿತ್ತು. ಪ್ರಸಕ್ತ ಸಾಲಿನಲ್ಲಿ 20 ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡುವ ಗುರಿ ಹೊಂದಿದ್ದೇವೆ.
 ಎಂ.ಎಸ್‌ ಪಾಟೀಲ, ಜಿಲ್ಲಾ ನ್ಯಾಯಾಧೀಶ

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.