ಬೀದಿಗೆ ಬಂತು ಯುವ ಕಾಂಗ್ರೆಸ್‌ ಭಿನ್ನಮತ

Team Udayavani, Feb 7, 2018, 6:42 PM IST

9.jpg

ಚಿತ್ರದುರ್ಗ: ನಿರುದ್ಯೋಗಿಗಳಾಗಿರುವುದಕ್ಕಿಂತ ಪಕೋಡಾ ಮಾರುವುದು ಒಳ್ಳೆಯದು ಎಂಬ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ಪಕೋಡಾ ಯಾತ್ರೆಗೆ ಸ್ವಪಕ್ಷೀಯರೇ ಅಡ್ಡಿಪಡಿಸಿ ಕೈಕೈ ಮಿಲಾಯಿಸಿದ ಘಟನೆ ಮಂಗಳವಾರ ನಡೆಯಿತು.

ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಧು ಪಾಲೇಗೌಡ ನೇತೃತ್ವದಲ್ಲಿ ಕಾಂಗ್ರೆಸ್‌ ಕಚೇರಿ ಎದುರೇ ಇರುವ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಂಗಳವಾರ ಬೆಳಿಗ್ಗೆ ಶಾಮಿಯಾನಾ ಹಾಕಿ ಪಕೋಡ ಕರಿಯಲು ಹಸಿಮೆಣಸಿಕಾಯಿ, ಕಡಲೆಹಿಟ್ಟು, ಬಾಣಲಿ, ಸ್ಟೌವ್‌ ಸಿದ್ಧಪಡಿಸಿಕೊಳ್ಳಲಾಗಿತ್ತು. ಕಾಂಗ್ರೆಸ್‌ ಕಚೇರಿ ಮುಂದೆ ನಿಂತು ಇದನ್ನು ಗಮನಿಸಿದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಅಧ್ಯಕ್ಷ ಎಂ.ಡಿ. ಹಸನ್‌ ತಾಹೀರ್‌, ಶೌಕತ್‌, ರಫಿ, ರೆಹಮಾನ್‌ ಅವರು ಏಕಾಏಕಿ ಮಧು ಪಾಲೇಗೌಡ ವಿರುದ್ಧ ತಿರುಗಿ ಬಿದ್ದರು.

ನಮ್ಮ ಗಮನಕ್ಕೆ ತಾರದೆ ಏಕೆ ಪಕೋಡ ಯಾತ್ರೆ ಮಾಡುತ್ತಿದ್ದೀರಿ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು. ಎರಡು ಗುಂಪುಗಳ ಮಧ್ಯೆ ಮಾತಿನ
ಜಟಾಪಟಿ ನಡೆಯಿತು. ಕೈಕೈ ಮಿಲಾಯಿಸುವ ಮಟ್ಟಕ್ಕೆ ಹೋಯಿತು. ಕೆಲವರು ಪಕೋಡಕ್ಕೆ ತಂದಿದ್ದ ಹಸಿಮೆಣಸಿನಕಾಯಿಯನ್ನು ತೂರಾಡಿದರು. ಸದ್ಯ ಬಾಣಲಿಯಲ್ಲಿ ಎಣ್ಣೆ ಕಾದಿರಲಿಲ್ಲ. ಹಾಗಾಗಿ ದೊಡ್ಡ ಅನಾಹುತ ತಪ್ಪಿತು. ಯುವ ಕಾಂಗ್ರೆಸ್‌ ಕಾರ್ಯಕರ್ತರು ಗಲಾಟೆ ನಡೆಸುತ್ತಿರುವುದನ್ನು ನೋಡಿದ ಕೆಲವರು ಉಭಯ ಗುಂಪಿನವರನ್ನು ಸಮಾಧಾನಪಡಿಸಲು ಯತ್ನಿಸಿದರು. ನಗರ ಠಾಣೆ ಇನ್ಸ್‌ಪೆಕ್ಟರ್‌ ಒಡೆಯರ್‌ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಅಧ್ಯಕ್ಷ ಎಂ.ಡಿ. ಹಸನ್‌ ತಾಹೀರ್‌, ಎಲ್ಲ ಕಾರ್ಯಕ್ರಮಗಳಲ್ಲೂ ನಮ್ಮನ್ನು ಕಡೆಗಣಿಸಲಾಗುತ್ತಿದೆ. ಏನೇ ಪ್ರತಿಭಟನೆ ಮಾಡಿದರೂ ಎಲ್ಲರೂ ಸೇರಿ ಮಾಡೋಣ ಎಂದು ನಾಲ್ಕೈದು ಬಾರಿ ಹೇಳಿದ್ದರೂ ಮಧು ಪಾಲೇಗೌಡ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಅಮಿತ್‌ ಶಾ ಮತ್ತು ಮೋದಿ  ವಿರುದ್ಧ ಹಮ್ಮಿಕೊಂಡಿರುವ ಪಕೋಡಾ ಪ್ರತಿಭಟನೆ ನಮಗೆ ಗೊತ್ತೇ ಇಲ್ಲ. ಈ ವಿಚಾರವನ್ನು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಅಧ್ಯಕ್ಷ ಬಸವನಗೌಡ ಬಾದರ್ಲಿ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಯುವ ಕಾಂಗ್ರೆಸ್‌ ಕಾರ್ಯಕರ್ತರು ಬೆಳಿಗ್ಗೆ ಕಿತ್ತಾಡಿಕೊಂಡಿದ್ದರಿಂದ ಪಕೋಡಾ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಸಂಜೆ ವೇಳೆಗೆ
ಉಭಯ ಬಣದವರು ಸೇರಿಕೊಂಡು ಪ್ರತಿಭಟನೆ ನಡೆಸಿದ್ದು ಅಚ್ಚರಿ ಮೂಡಿಸಿತು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

BYV-yathnal

Talk Fight: ಬಿ.ಎಸ್‌.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ

BYV-1

Waqf Property: ಸಚಿವ ಜಮೀರ್‌ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.