ಮೂರ್ಜೆ: ಕಾರು ಢಿಕ್ಕಿ, ಮಗು ಸಾವು: ಮಹಿಳೆಗೂ ಗಾಯ, ಹಲವು ವಾಹನ ಜಖಂ
Team Udayavani, Feb 8, 2018, 6:00 AM IST
ಪುಂಜಾಲಕಟ್ಟೆ: ರಸ್ತೆ ಬದಿ ನಿಂತಿದ್ದ ತಾಯಿ-ಮಗುವಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಮೂರ್ಜೆಯಲ್ಲಿ ಸಂಭವಿಸಿದೆ.
ಮಂಗಳೂರು ವಾಮಂಜೂರು ನಿವಾಸಿ ಲೋಹಿತಾಕ್ಷ ಅವರ ಪುತ್ರಿ ವೈಷ್ಣವಿ (3) ಮೃತಪಟ್ಟ ಮಗು. ಪ್ರಮೀಳಾ (26) ಅವರು ಮೂರ್ಜೆ ಸಮೀಪದ ಮಣ್ಣೂರಿನಲ್ಲಿ ಬುಧವಾರ ನಡೆಯಲಿದ್ದ ಸಂಬಂಧಿಕರ ಸೀಮಂತ ಕಾರ್ಯಕ್ರಮಕ್ಕೆ ಪುತ್ರಿ ವೈಷ್ಣವಿ ಜತೆ ಆಗಮಿಸಿದ್ದರು. ಮಣ್ಣೂರಿಗೆ ತೆರಳಲು ರಸ್ತೆ ಬದಿ ನಿಂತಿದ್ದಾಗ ಕಾವಳಕಟ್ಟೆ ಕಡೆಯಿಂದ ಬಂದ ನ್ಯಾನೋ ಕಾರು ಅವರಿಗೆ ಹಾಗೂ ರಸ್ತೆ ಬದಿ ನಿಲ್ಲಿಸಿದ್ದ 5-6 ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದಿತ್ತು. ಅಪಘಾತದಿಂದ ತಾಯಿ ಮತ್ತು ಮಗು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಣ್ಣೂರಿನ ಸುರೇಶ್ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾರು ಚಾಲಕ ಪುಂಜಾಲಕಟ್ಟೆ ನಿವಾಸಿ ಮೊದಿನ್ ಸಾಹೇಬ್ನನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.