5 ನ್ಯಾಯಮೂರ್ತಿಗಳ ನೇಮಕಾತಿಗೆ ಚಾಲನೆ?
Team Udayavani, Feb 8, 2018, 6:35 AM IST
ಬೆಂಗಳೂರು: ರಾಜ್ಯ ಹೈಕೋರ್ಟ್‌ನಲ್ಲಿ ಖಾಲಿಯಿರುವ ನ್ಯಾಯಮೂರ್ತಿಗಳ ಹುದ್ದೆ ಭರ್ತಿಗೆ ಆಗ್ರಹಿಸಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಹೋರಾಟದ ಬೆನ್ನಲ್ಲೇ ಹೈಕೋರ್ಟ್‌ಗೆ ಐವರು ನ್ಯಾಯಮೂರ್ತಿಗಳ ನೇಮಕ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ ಎಂದು ಹೇಳಲಾಗಿದೆ.
ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಕೊಲಿಜಿಯಂ ಮಾಡಿದ ಶಿಫಾರಸಿ ನಂತೆ ಹಿರಿಯ ವಕೀಲರಾದ ದೀಕ್ಷಿತ್ ಕೃಷ್ಣ ಶ್ರೀಪಾದ್,ಶಂಕರ್ ಗಣಪತಿ ಪಂಡಿತ್, ರಾಮಕೃಷ್ಣ ದೇವದಾಸ್,ಬಿ.ಎಚ್.ಮಲ್ಲಿಕಾರ್ಜುನ ಶ್ಯಾಮ್ ಪ್ರಸಾದ್, ಸುನೀಲ್ ದತ್ ಯಾದವ್ ಅವರ ನೇಮಕಕ್ಕೆ ಬುಧವಾರ ಕೇಂದ್ರ ಕಾನೂನು ಇಲಾಖೆ ಸಮ್ಮತಿಸಿದ್ದು, ಐವರು ನ್ಯಾಯ ಮೂರ್ತಿಗಳ ನೇಮಕಾತಿ ಕಡತವನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಶಿಫಾರಸು ಮಾಡಿದೆ ಎಂದು ಮೂಲಗಳು “ಉದಯವಾಣಿ’ಗೆ ತಿಳಿಸಿವೆ.
ರಾಜ್ಯ ಕೊಲಿಜಿಯಂ ಕಳುಹಿಸಿ ಕೊಟ್ಟಿದ್ದ 10 ಮಂದಿ ಹಿರಿಯ ವಕೀಲರ ಪಟ್ಟಿಯಲ್ಲಿ ಈ ಐವರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಕಗೊಳಿಸುವಂತೆ ಸುಪ್ರೀಂಕೋರ್ಟ್ ಕೊಲಿಜಿಯಂ ಡಿ.4ರಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಇನ್ನುಳಿದ ಐವರ ಹೆಸರನ್ನು ಹಲವು ಕಾರಣಗಳಿಗೆ ತಿರಸ್ಕರಿಸಿತ್ತು.
ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಸಾಥ್: ಬೆಂಗಳೂರು ವಕೀಲರ ಸಂಘ ಹಾಗೂ ರಾಜ್ಯ ವಕೀಲರ ಪರಿಷತ್ ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಬುಧವಾರ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಭೇಟಿ ನೀಡಿ ಸಾಂಕೇತಿಕ ಬೆಂಬಲ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.