ಅನ್ನಭಾಗ್ಯಕ್ಕೆ ನೆಟ್‌ವರ್ಕ್ ಪ್ರಾಬ್ಲಿಂ
Team Udayavani, Feb 8, 2018, 6:05 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿಯ “ಅನ್ನಭಾಗ್ಯ’ ಯೋಜನೆ ಯಡಿ ಶೇ.20 ರಿಂದ 25ರಷ್ಟು ಬಿಪಿಎಲ್ ಕುಟುಂಬಗಳಿಗೆ ಪಡಿತರವೇ ಸಿಗುತ್ತಿಲ್ಲ! ಗ್ರಾಮೀಣ ಭಾಗದಲ್ಲಿ ಇಂಟರ್‌ನೆಟ್ ಹಾಗೂ ಸರ್ವರ್ ಸಮಸ್ಯೆಯಿಂದ ಬಿಪಿಎಲ್ ಕಾರ್ಡ್ ಇದ್ದರೂ ಪಡಿತರ ಸಿಗದೇ ಪರದಾಡುವಂತಾಗಿದೆ. ಪಡಿತರ ಪಡೆಯಬೇಕಾದರೆ ಕುಟುಂಬದಲ್ಲಿ ಸದಸ್ಯರೊಬ್ಬರು ಬಯೋಮೆಟ್ರಿಕ್ (ಬೆರಳಚ್ಚು) ನೀಡುವುದು ಕಡ್ಡಾಯ. ಆದರೆ, ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಜತೆಗೆ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಬಯೋಮೆಟ್ರಿಕ್ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪಡಿತರವೂ ಕೈಸೇರುತ್ತಿಲ್ಲ.
ಅನ್ನಭಾಗ್ಯ ಯೋಜನೆಯಡಿ ರಾಜ್ಯದಲ್ಲಿ 1.08 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು ಪಡಿತರ ವಿತರಿಸಲಾಗುತ್ತಿದ್ದು, ಬಯೋಮೆಟ್ರಿಕ್ ವ್ಯವಸ್ಥೆ ಜಾರಿಗೊಳಿಸಿದ ಪರಿಣಾಮ ರಾಜ್ಯಾದ್ಯಂತ ಶೇ.20 ರಿಂದ 25ರಷ್ಟು ಕುಟುಂಬಗಳಿಗೆ ಪಡಿತರ ವಿತರಿಸಲು ಸಾಧ್ಯವಾಗುತ್ತಿಲ್ಲ.
ಇದಕ್ಕೆ ಇಂಟರ್‌ನೆಟ್ ಹಾಗೂ ಸರ್ವರ್ ಸಮಸ್ಯೆ ಪ್ರಮುಖ ಕಾರಣವಾಗಿದೆ. ಇದರಲ್ಲಿ ನಮ್ಮದೇನೂ ತಪ್ಪಿಲ್ಲ ಎಂದು ಗ್ರಾಮೀಣ ಭಾಗದ ನ್ಯಾಯಬೆಲೆ ಅಂಗಡಿ ಮಾಲೀಕರು ಅವಲತ್ತುಕೊಳ್ಳುತ್ತಾರೆ.
ಈ ಹಿಂದೆ ಪಡಿತರದಾರರ ಮೊಬೈಲ್‌ಗೆ ಸಂದೇಶ ರವಾನೆಯಾಗುತ್ತಿತ್ತು. ನಂತರ ಕೂಪನ್ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ಆ ವ್ಯವಸ್ಥೆಯಡಿ ದುರುಪಯೋಗದ ದೂರುಗಳು ಕೇಳಿ ಬಂದಿದ್ದರಿಂದ ಬಯೋಮೆಟ್ರಿಕ್ ಕಡ್ಡಾಯಗೊಳಿಸಲಾಗಿತ್ತು.
ಬೆರಳಚ್ಚು ಸಾಧ್ಯವಾಗುತ್ತಿಲ್ಲ: ಗ್ರಾಮೀಣ ಭಾಗದಲ್ಲಿ ಬಯೋಮೆಟ್ರಿಕ್‌ನಲ್ಲಿ ತಂಬ್ ಪ್ರಿಂಟ್ ಪಡೆಯಲು ಕೈ ಚರ್ಮಗಳು ಒರಟಾಗಿರುವುದೂ ಸಮಸ್ಯೆಯಾಗಿ ಪರಿಣಮಿಸಿದೆ.
ನಿರಂತರ ಕೆಲಸ ಮಾಡುವ ರೈತರು ಹಾಗೂ ಕೂಲಿಗಳ ಕೈಗಳು ಒರಟಾಗಿರುತ್ತವೆ. ಅಲ್ಲದೆ, ರೇಖೆಗಳೂ ಸವೆದಿರುತ್ತವೆ. ಇದರಿಂದಾಗಿ ಬಯೋಮೆಟ್ರಿಕ್ ಯಂತ್ರ ತಂಬ್ ಪ್ರಿಂಟ್ ಸ್ವೀಕರಿಸುತ್ತಲೇ ಇಲ್ಲ ಎನ್ನುವ ದೂರುಗಳೂ ಇವೆ. ಹೀಗಾಗಿ ಸಮಸ್ಯೆ ಎದುರಾದಾಗಲೆಲ್ಲ ಪಡಿತರ ಪಡೆಯಲು ಆಹಾರ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಲೇಬೇಕು ಎನ್ನುವ ಸ್ಥಿತಿ ನಿರ್ಮಾಣವಾಗಿದೆ.
ಕಾಯುವ ಸ್ಥಿತಿ ಅನಿವಾರ್ಯ: ಜನಸಂಖ್ಯೆಗೆ ಅನುಗುಣವಾಗಿ 400-500 ಜನರಿಗೆ ಒಂದರಂತೆ ನ್ಯಾಯಬೆಲೆ ಅಂಗಡಿಯಿದ್ದು, ರಾಜ್ಯ ದಲ್ಲಿ ಒಟ್ಟು 22,503 ನ್ಯಾಯಬೆಲೆ ಅಂಗಡಿಗಳಿವೆ. ಆದರೆ, ನೆಟ್‌ವರ್ಕ್ ಸಮಸ್ಯೆ ಯಿಂದಾಗಿ ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ಪಡೆಯುವ ವ್ಯವಸ್ಥೆಯಿಲ್ಲ. 20-30 ಹಳ್ಳಿಗಳಿಗೆ ಸಮೀಪದ ಕೇಂದ್ರವೊಂದರಲ್ಲಿ ಬಯೋಮೆಟ್ರಿಕ್ ಕೇಂದ್ರ ತೆರೆಯಲಾಗಿದೆ. ಹೀಗಾಗಿ ಗಂಟೆಗಟ್ಟಲೇ ಕಾಯಬೇಕಾದ ಸ್ಥಿತಿ ಇದೆ.
ಹೊಸ ವ್ಯವಸ್ಥೆ ಜಾರಿಗೊಳಿಸಿದಾಗ ಕೆಲವೊಂದು ಗೊಂದಲಗಳಾಗುವುದು ಸಾಮಾನ್ಯ. ಆದರೆ, ಇಂಟರ್‌ನೆಟ್, ಸರ್ವರ್ ಸಮಸ್ಯೆಯಿರುವ ಕಡೆಗಳಲ್ಲಿ ಬಯೋಮೆಟ್ರಿಕ್ ಪಡೆಯದೇ ಪಡಿತರ ನೀಡುವಂತೆ ತಿಳಿಸಲಾಗಿದೆ. ಆದರೆ, ಕೆಲವರು ವಿನಾಕಾರಣ ಸಮಸ್ಯೆ ನೆಪದಲ್ಲಿ ಜನರನ್ನು ಕಾಯಿಸುತ್ತಿದ್ದಾರೆ ಎನ್ನುವ ಆರೋಪ ಇದೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು.
– ಯು.ಟಿ.ಖಾದರ್, ಸಚಿವ
ಪಡಿತರ ಚೀಟಿಯಲ್ಲಿರುವ ಒಬ್ಬರು ಸದಸ್ಯರಿಂದ ಕಡ್ಡಾಯವಾಗಿ ಬಯೋಮೆಟ್ರಿಕ್ ಪಡೆದು ಪಡಿತರ ನೀಡಬೇಕೆಂದು ಸರ್ಕಾರ ಆದೇಶಿಸಿದೆ. ಆದರೆ, ಬೆರಳಚ್ಚು ಪಡೆಯಲು ಕೆಲವು ಸಮಸ್ಯೆಗಳಿವೆ. ಇದರಿಂದಾಗಿ ಬಯೋಮೆಟ್ರಿಕ್ ಪಡೆದು ಪಡಿತರ ನೀಡುವ ವ್ಯವಸ್ಥೆ ಜಾರಿಯಾದಾಗಿನಿಂದ ಶೇ.20ರಷ್ಟು ಕುಟುಂಬಗಳಿಗೆ ಪಡಿತರವೇ ಸಿಕ್ಕಿಲ್ಲ.
– ಟಿ.ಕೃಷ್ಣಪ್ಪ, ಅಧ್ಯಕ್ಷ, ಸರ್ಕಾರಿ ನ್ಯಾಯಬೆಲೆ
ಅಂಗಡಿ ಮಾಲೀಕರ ಸಂಘ
– ವೆಂ. ಸುನೀಲ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ಲಾಕಪ್‌ಡೆತ್: ಹೆಡ್ ಕಾನ್‌ಸ್ಟೆಬಲ್ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.