8 ಸಾವಿರ ಮಕ್ಕಳು ಶಾಲೆಯಿಂದ ದೂರ
Team Udayavani, Feb 8, 2018, 6:00 AM IST
ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲೇ ವಿದ್ಯಾರ್ಥಿಗಳು ಶಾಲೆ ಬಿಡುತ್ತಿದ್ದಾರೆ. ಸರ್ವಶಿಕ್ಷಾ ಅಭಿಯಾನ ನಡೆಸಿದ ಸಮೀಕ್ಷೆಯಲ್ಲಿ ಇದು ಬಹಿರಂಗಗೊಂಡಿದೆ. ಸುಮಾರು 8 ಸಾವಿರ ಮಕ್ಕಳು ಇನ್ನೂ ಕೂಡ ಶಾಲಾ ಶಿಕ್ಷಣದಿಂದಲೇ ಹೊರಗಿದ್ದಾರೆನ್ನಲಾಗಿದೆ.
ಜಿಲ್ಲಾ ಹಂತದ ಎಲ್ಲಾ ಶಾಲೆಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳ ಮಾಹಿತಿ ಆಧರಿಸಿ ಸರ್ವಶಿಕ್ಷಾ ಅಭಿಯಾನದ ಅಧಿಕಾರಿಗಳು ಈ ಸಮೀಕ್ಷೆ ನಡೆಸಿದ್ದಾರೆ. ಈ ಕುರಿತು ಸರ್ವಶಿಕ್ಷಾ ಅಭಿಯಾನದ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದು, “ಜಿಲ್ಲಾ ಉಪನಿರ್ದೇಶಕರಿಂದ ಸಮೀಕ್ಷೆಯ ಮಾಹಿತಿ ಸಂಗ್ರಹಿಸಲಾಗಿದೆ. ರಾಜ್ಯದ ಸುಮಾರು 8 ಸಾವಿರ ಮಕ್ಕಳು ಶಾಲಾ ಶಿಕ್ಷಣದಿಂದ ದೂರ ಉಳಿದಿರುವುದು ಸಮೀಕ್ಷೆಯಿಂದ ಕಂಡುಬಂದಿದೆ’ ಎಂದಿದ್ದಾರೆ.
ಶಾಲೆಯ ಮೆಟ್ಟಿಲನ್ನೇ ತುಳಿದಿಲ್ಲ
ರಾಯಚೂರು, ಯಾದಗಿರಿ, ಕುಲಬುರಗಿ ಸೇರಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಲಾ 500ಕ್ಕೂ ಅಧಿಕ ಮಕ್ಕಳು ಶಾಲಾ ಶಿಕ್ಷಣದಿಂದ ಹೊರಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಲೆಗೆ ಸೇರಿ ಅರ್ಧಕ್ಕೆ ಬಿಟ್ಟ ಮತ್ತು ಶಾಲೆಯ ಮೆಟ್ಟಿಲು ಏರದೇ ಇರುವ ಮಕ್ಕಳನ್ನು ಸಮೀಕ್ಷೆಯ ವೇಳೆ ಪತ್ತೆಹಚ್ಚಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳಲ್ಲಿ ಸುಮಾರು ಒಂದು ಸಾವಿರ ಮಕ್ಕಳು ಶಾಲೆಯ ಮೆಟ್ಟಿಲನ್ನೇ ತುಳಿದಿಲ್ಲ ಎನ್ನುವ ಅಂಶವನ್ನು ಸಮೀಕ್ಷೆಯಲ್ಲಿ ಉಲ್ಲೇಖೀಸಲಾಗಿದೆ.
2016ರಲ್ಲಿ ಸರ್ವಶಿಕ್ಷಾ ಅಭಿಯಾನ ನಡೆಸಿದ ಸಮೀಕ್ಷೆಯಲ್ಲಿ 8,318 ಮಕ್ಕಳು ಶಾಲೆಯಿಂದ ಹೊರಗಿದ್ದರು. ಅದರಲ್ಲಿ ಬೆಂಗಳೂರು ನಗರ ಜಿಲ್ಲೆಯ 1795, ಕಲಬುರಗಿ ಜಿಲ್ಲೆಯ 1389 ಹಾಗೂ ಯಾದಗಿರಿ ಜಿಲ್ಲೆಯ 635 ಮಕ್ಕಳು ಸೇರಿದ್ದರು. ಆ ಎಲ್ಲಾ ವಿದ್ಯಾರ್ಥಿಗಳನ್ನು ವಿವಿಧ ಕಾರ್ಯಕ್ರಮದ ಮೂಲಕ ಪುನರ್ ಶಾಲೆಗೆ ಕರೆತರಲಾಗಿದೆ. ವಲಸೆ ಕುಟುಂಬ ಜಾಸ್ತಿ ಇರುವ ಬೆಂಗಳೂರು ನಗರ ಜಿಲ್ಲೆಯಲ್ಲಿ ಈ ವರ್ಷ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಶಿಕ್ಷಣ ವಂಚಿತ ಮಕ್ಕಳು ಇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಶಾಲೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹ
2017 -18ನೇ ಸಾಲಿನಲ್ಲಿ ಶಾಲಾ ಶಿಕ್ಷಣದಿಂದ ಹೊರಗುಳಿದ ವಿದ್ಯಾರ್ಥಿಗಳ ಸಮೀಕ್ಷೆಗೆ ಸರ್ವಶಿಕ್ಷಾ ಅಭಿಯಾನದಿಂದ ಎನ್‌ಜಿಒಗಳ ಸಹಕಾರ ಪಡೆದುಕೊಂಡಿಲ್ಲ. ಡಿಸೆಂಬರ್ ತಿಂಗಳಲ್ಲಿ ಎಸ್‌ಎಸ್‌ಎ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಮತ್ತು ಸ್ಥಳೀಯ ಸಂಸ್ಥೆಗಳ ಆಡಳಿತಕ್ಕೆ ಒಳಪಟ್ಟ ಶಾಲೆಗಳಿಗೆ ಭೇಟಿ ನೀಡಿದ್ದಾರೆ. 2ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಮಾಹಿತಿ ಪಡೆದಿದ್ದಾರೆ.
ಕಳೆದ ವರ್ಷ ಒಂದನೇ ತರಗತಿಗೆ ಸೇರಿದ ಮಗು ಈ ವರ್ಷ ಎರಡನೇ ತರಗತಿಯಲ್ಲಿ ಇದೆಯೋ? ಇಲ್ಲವೋ? ಎಂಬುದನ್ನು ಪರಿಶೀಲಿಸಲಾಗಿದೆ. ಮಗು ಬೇರೆ ಕಡೆ ವರ್ಗಾವಣೆ ಪಡೆದಿದ್ದರೆ ಅದರ ಮಾಹಿತಿಯನ್ನೂ ಶಾಲೆಗಳಿಂದ ಪಡೆಯಲಾಗಿದೆ. ವಿದ್ಯಾರ್ಥಿಗಳ ಹಾಜರಿ ಪಟ್ಟಿಯನ್ನು ಕೂಲಂಕಷವಾಗಿ ಪರಿಶೀಲಿಸಿ, ಶಾಲೆಗೆ ಸತತವಾಗಿ ಗೈರಾಗಿರುವ ವಿದ್ಯಾರ್ಥಿಗಳ ವಿವರ ಪಡೆದು ಜಿಲ್ಲಾವಾರು ವರದಿ ಸಿದ್ಧಪಡಿಸಲಾಗಿದೆ. ಈ ಎಲ್ಲಾ ಮಾಹಿತಿಯನ್ನು ಬೆಂಗಳೂರಿನ ಎಸ್‌ಎಸ್‌ಎ ಕೇಂದ್ರ ಕಚೇರಿಗೆ ಸಲ್ಲಿಸಲಾಗುತ್ತಿದೆ.
2013ರಲ್ಲಿ ಸಮೀಕ್ಷೆ ನಡೆದಿತ್ತು
2013ರಲ್ಲಿ ರಾಜ್ಯದ ಶಾಲಾ ಶಿಕ್ಷಣ ವಂಚಿತ ಮಕ್ಕಳ ಸಮಗ್ರ ಸಮೀಕ್ಷೆ ನಡೆಸಲಾಗಿತ್ತು. ಆಗ 40 ಸಾವಿರ ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ಕಂಡುಬಂದಿತ್ತು. ಆ ಎಲ್ಲಾ ಮಕ್ಕಳಿಗೆ ವಿಶೇಷ ತರಬೇತಿ ಮತ್ತು ಕಾರ್ಯಕ್ರಮದ ಮೂಲಕ ಪುನರ್ ಶಾಲಾ ಶಿಕ್ಷಣ ನೀಡಲಾಗಿದೆ. ಈ ವರ್ಷದ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಮತ್ತೆ ಸಮಗ್ರ ಸಮೀಕ್ಷೆ ನಡೆಯಲಿದೆ.
ಶಾಲಾ ಶಿಕ್ಷಣ ವಂಚಿತ ಮಕ್ಕಳ ಸಮೀಕ್ಷೆಯನ್ನು ಡಿಸೆಂಬರ್ ತಿಂಗಳಲ್ಲಿ ಪ್ರತಿ ಶಾಲೆಗೆ ಹೋಗಿ ನಡೆಸಿದ್ದೇವೆ. ಎಲ್ಲಾ ಜಿಲ್ಲೆಗಳಿಂದ ವರದಿ ಸಂಗ್ರಹಿಸುತ್ತಿದ್ದೇವೆ. ಸುಮಾರು 8 ಸಾವಿರ ಮಕ್ಕಳು ಶಾಲಾ ಶಿಕ್ಷಣದಿಂದ ವಂಚಿತರಾಗಿರುವುದು ಸಮೀಕ್ಷೆಯಿಂದ ತಿಳಿದುಬಂದಿದೆ.
– ಎಂ.ಆರ್.ಮಾರುತಿ, ಹಿರಿಯ ಕಾರ್ಯಕ್ರಮಾಧಿಕಾರಿ, ಸರ್ವಶಿಕ್ಷಾ ಅಭಿಯಾನ
– ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kannada: ವೀರ ಕನ್ನಡಿಗ: ತನು ಕನ್ನಡ, ಮನ(ನೆ) ಕನ್ನಡ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.