ಕಮಿಲ ರೋಡ್: ಹತ್ತೇ ದಿನಗಳಲ್ಲಿ ಕಾಂಕ್ರೀಟ್ ರಸ್ತೆಗೆ ತೇಪೆ
Team Udayavani, Feb 8, 2018, 11:20 AM IST
ಸುಬ್ರಹ್ಮಣ್ಯ: ಗುತ್ತಿಗಾರು ಕಮಿಲ ಬಳ್ಪದ ಸುಮಾರು 5 ಕಿಮೀ ಸಂಪರ್ಕ ರಸ್ತೆಯಲ್ಲಿ 1.5 ಕಿಮೀ ದೂರದ ರಸ್ತೆಯನ್ನು 1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಮ್ಮ ಗ್ರಾಮ ನಮ್ಮ ರಸ್ತೆಯ ಮೂಲಕ ಅಭಿವೃದ್ಧಿ ಪಡಿಸಲು ಕ್ರಮವಹಿಸುವುದಾಗಿ ಪಿಎಂಜಿಎಸ್‌ವೈ ವಿಭಾಗ ಇಂಜಿನಿಯರ್ ಹನುಮಂತಪ್ಪ ತಿಳಿಸಿದ್ದಾರೆ.
ಗುತ್ತಿಗಾರು- ಕಮಿಲ ರಸ್ತೆಯ ಅರ್ಧ ಕಿಲೋ ಮೀಟರ್ ಕಾಂಕ್ರೀಟು ಕಾಮಗಾರಿ ನಡೆದು 10 ದಿನದಲ್ಲಿ ಬಿರುಕು ಬಿಟ್ಟಿರುವ ಕುರಿತು ಸ್ಥಳಿಯರು ಅಸಮಧಾನ ವ್ಯಕ್ತಪಡಿಸಿದ್ದು ಅಲ್ಲದೆ ಬುಧವಾರ ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು. ಬೆನ್ನಲ್ಲೆ ಈ ಕ್ರಮ ಜರಗಿಸಿದ್ದಾರೆ. ಬುಧವಾರ ಗುತ್ತಿಗೆದಾರರ ಜತೆ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.
ಅಭಿವೃದ್ಧಿಗೆ ಯೋಜಿಸಿರುವ ರಸ್ತೆ ಅಗಲೀಕರಣ ಹಾಗೂ ರಸ್ತೆ ಸಮತಟ್ಟು ಮಾಡುವ ಕಾರ್ಯ ಮುಗಿದು ಅರ್ಧ ಕಿಲೋ
ಮೀಟರ್ ಕಾಂಕ್ರೀಟ್ ರಸ್ತೆ ಹಾಗೂ ಉಳಿದ 1 ಕಿಲೋ ಮೀಟರ್ ಡಾಮರೀಕರಣದ ಕೆಲಸ ನಡೆಯುತ್ತಿದೆ. ಆದರೆ ಇಲ್ಲಿ
ಮಾಡಿರುವ ಕಾಂಕ್ರೀಟು ಕಾಮಗಾರಿ ನಡೆಸಿ 10 ದಿನದಲ್ಲೇ ಬಿರುಕು ಬಿಟ್ಟಿರುವ ಬಗ್ಗೆ ಮಂಗಳವಾರ ಸಾರ್ವಜನಿಕರು ಪಿಎಂಜಿ ಎಸ್‌ವೈ ವಿಭಾಗ ಇಂಜಿನಿಯರ್ ಗಮನಕ್ಕೆ ತಂದಿದ್ದರು ಹಾಗೂ ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು.
ಈಗಾಗಲೇ 3 ಕಡೆ ಬಿರುಕು ಬಿಟ್ಟಿರುವುದು ಕಂಡುಬಂದಿದ್ದು, ಇದರಿಂದ ಯಾವುದೇ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗುವುದು ಹಾಗೂ ಬಿರುಕು ಬಿಟ್ಟ ಕಡೆಗಳಲ್ಲೂ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಮುಂದೆ 5 ವರ್ಷಗಳ ಕಾಲ ನಿರ್ವಹಣೆಯೂ ಇರುವುದ ರಿಂದ ಈ ನಡುವೆ ಯಾವುದೇ ಸಮಸ್ಯೆ ಬಂದರೂ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕರಿಗೆ ಭರವಸೆ ನೀಡಿದರು.
ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಬಂದರೂ ತತ್‌ಕ್ಷಣವೇ ಸಂಪರ್ಕಿಸುವಂತೆ ಸಾರ್ವಜನಿಕರಿಗೆ ಇಂಜಿನಿಯರ್ ತಿಳಿಸಿದರು. ಈ ಸಂದರ್ಭ ಕಮಿಲದ ನಿವಾಸಿಗಳು ಉಪಸ್ಥಿತರಿದ್ದರು. ಕಮಿಲ ರಸ್ತೆ ಕಳಪೆ ಕುರಿತು ಸುದಿನದಲ್ಲಿ ಬುಧವಾರ ಸುದ್ದಿ ಪ್ರಕಟವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.