ವಂದನಾ ನಿರ್ಣಯವಲ್ಲ, ವಂದನಾರ್ಪಣಾ ಸಭೆ!
Team Udayavani, Feb 9, 2018, 6:30 AM IST
ವಿಧಾನಸಭೆ: ಇದು ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲ. ಸರ್ಕಾರ ಐದು ವರ್ಷ ಪೂರೈಸುತ್ತಿರುವುದರಿಂದ ನಡೆಯುತ್ತಿರುವ ವಂದನಾರ್ಪಣೆ.
ಕಾರ್ಯಕ್ರಮ ಮುಗಿದಾಗಿದೆ ಇನ್ನೇಕೆ ಸಚಿವರು, ಶಾಸಕರು ಸದನಕ್ಕೆ ಬರುತ್ತಾರೆ? ಗುರುವಾರ ಭೋಜನಾನಂತರ ಕಲಾಪ ಆರಂಭವಾಗಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ತಾವು ಮಾತನಾಡುವಾಗ ಸಚಿವರು ಮತ್ತು ಅಧಿಕಾರಿಗಳು ಸದನದಲ್ಲಿ ಇಲ್ಲದೇ ಇರುವುದನ್ನು ಗಮನಿಸಿ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಆಕ್ಷೇಪ ವ್ಯಕ್ತಪಡಿಸಿದಾಗ ಜೆಡಿಎಸ್ ಉಪನಾಯಕ ವೈ.ಎಸ್.ವಿ.ದತ್ತ ಪ್ರತಿಕ್ರಿಯಿಸಿದ್ದು ಹೀಗೆ. ಮಂತ್ರಿಗಳೂ ಇಲ್ಲ. ಅಧಿಕಾರಿಗಳೂ ಇಲ್ಲ. ಕೋಣನ ಮುಂದೆ ಕಿನ್ನರಿ ಬಾರಿಸಿದಂತೆ ಯಾರಿಗೆ ನಾವು ಮಾತನಾಡಬೇಕು? ಸಚಿವ ಕಾಗೋಡು ತಿಮ್ಮಪ್ಪ ಅವರು ವಯಸ್ಸಾದರೂ ಕ್ರಿಯಾಶೀಲರಾಗಿ ಇಡೀ ದಿನ ಸದನದಲ್ಲಿ ಇರುತ್ತಾರೆ. ಇತರ ಸಚಿವರಿಗೆ ಜವಾಬ್ದಾರಿ ಇಲ್ಲವೇ? ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಚರ್ಚೆಗೆ ಬೆಲೆ ಇಲ್ಲವೇ ಎಂದು ಜಗದೀಶ ಶೆಟ್ಟರ್ ಪ್ರಶ್ನಿಸಿದರು. ಇದು ವಂದನಾ ನಿರ್ಣಯದಂತೆ ಕಾಣಿಸುತ್ತಿಲ್ಲ.
ಐದು ವರ್ಷ ಆಗಿದ್ದಕ್ಕೆ ಸರ್ಕಾರಕ್ಕೆ ವಂದನಾರ್ಪಣೆ ಸಲ್ಲಿಸುವ ಹಂತಕ್ಕೆ ಬಂದಿದ್ದೇವೆ. ಕಾರ್ಯಕ್ರಮ ಮುಗಿದು ಎಲ್ಲರೂ
ಎದ್ದುಹೋಗಿದ್ದಾರೆ. ವಂದನಾರ್ಪಣೆ ಮಾಡಬೇಕು ಅಷ್ಟೆ ಎಂದು ವೈ.ಎಸ್.ವಿ.ದತ್ತ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.