ಸಚಿವರ ವರ್ತನೆ ಬಗ್ಗೆ ಪ್ರತಿಪಕ್ಷ ಸದಸ್ಯರ ಆಕ್ರೋಶ


Team Udayavani, Feb 9, 2018, 6:25 AM IST

180208kpn79.jpg

ವಿಧಾನಪರಿಷತ್‌: ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡದ ಸಚಿವರ ವರ್ತನೆ ಬಗ್ಗೆ ಪ್ರತಿಪಕ್ಷ ಸದಸ್ಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಪ್ರಶ್ನೋತ್ತರ ವೇಳೆಯಲ್ಲಿ ಬಹುತೇಕ ಸದಸ್ಯರ ಪ್ರಶ್ನೆಗಳಿಗೆ ಮಾಹಿತಿ ಬಂದಿಲ್ಲ, ಪ್ರಶ್ನೆ ಬೇರೆ ಇಲಾಖೆಗೆ ವರ್ಗಾವಣೆಯಾಗಿದೆ
ಎಂದು ಸಭಾಪತಿಯವರು ಹೇಳುತ್ತಿದ್ದರು. ಈ ಸಂದರ್ಭದಲ್ಲಿ ಬಿಜೆಪಿಯ ಅಮರನಾಥ ಪಾಟೀಲ್‌,ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ 371ಜೆ ಕಾನೂನು ಜಾರಿಯಾದ ಮೇಲೆ ಎಷ್ಟು ಹುದ್ದೆಗಳು ಸೃಷ್ಠಿಯಾಗಿವೆ.

ಎಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ಪ್ರಶ್ನೆ ಕೇಳಿದ್ದರು. ಉತ್ತರ ಬಂದಿಲ್ಲ ಎಂದಾಗ ನೇರವಾಗಿ ಸದನದ ಬಾವಿಗಿಳಿದು ಮುಖ್ಯಮಂತ್ರಿ ಎದುರು ಧರಣಿ ಕುಳಿತರು. ಪ್ರತಿಪಕ್ಷದ ಸದಸ್ಯರು ಅವರಿಗೆ ಬೆಂಬಲ ವ್ಯಕ್ತಪಡಿಸಿ ಸಭಾನಾಯಕರನ್ನು ತರಾಟೆಗೆ ತೆಗೆದುಕೊಂಡರು. 

ವಾರ್ತಾ ಇಲಾಖೆಗೆ ಸಂಬಂಧಿಸಿದಂತೆ ಬಿಜೆಪಿಯ ಮಹಾಂತೇಶ್‌ ಕವಠಗಿ ಮಠ ಕೇಳಿದ ಚುಕ್ಕೆ ಗುರುತಿನ(ಸದನದಲಿ ಉತ್ತರಿಸಬೇಕಾದ) ಪ್ರಶ್ನೆಗೆ ಉತ್ತರ ಬಂದಿಲ್ಲ ಎಂದು ಹೇಳಲಾಗಿತ್ತು. ಜೆಡಿಎಸ್‌ನ ರಮೇಶ್‌ ಬಾಬು ಅವರ ಅದೇ ರೀತಿಯ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರ ನೀಡಲಾಗಿತ್ತು. ಇದರಿಂದ ಆಕ್ರೋಶಗೊಂಡ ಕೆ.ಎಸ್‌. ಈಶ್ವರಪ್ಪ ಈ ಸರ್ಕಾರದ ಬಗ್ಗೆ ಅಧಿಕಾರಿಗಳಿಗೆ ಭಯ ಇಲ್ಲ. ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಆಗುವುದಿಲ್ಲ ಎಂದರೆ, ನಾವು ಸದನಕ್ಕೆ ಯಾಕೆ ಬರಬೇಕು. ರಾಜೀನಾಮೆ ನೀಡಿ ಹೋಗಬೇಕೆ ಎಂದು ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಭಾಪತಿ ಡಿ.ಎಚ್‌. ಶಂಕರ ಮೂರ್ತಿ, ಸರ್ಕಾರ ಸರಿಯಾದ ಸಮಯಕ್ಕೆ ಉತ್ತರ
ಕೊಡುವುದು ಜವಾಬ್ದಾರಿ. ಅಧಿಕಾರಿಗಳಿಂದ ಸರಿಯಾದ ಸಮಯಕ್ಕೆ ಉತ್ತರ ಕೊಡಿಸಲು ಸಭಾ ನಾಯಕರು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಸಭಾ ನಾಯಕ ಎಂ.ಆರ್‌. ಸೀತಾರಾಂ ಮಾತನಾಡಿ, ಉತ್ತರ ನೀಡುವಲ್ಲಿ ತಾರತಮ್ಯ ಮಾಡಿರುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

1(1

Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್‌ ದೀಪಗಳಿಂದ ಶೃಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.