ದೇಶಿ ಗುಣಮಟ್ಟದ ಶಿಕ್ಷಣ ಸೃಷ್ಟಿ ಅಗತ್ಯ
Team Udayavani, Feb 9, 2018, 11:28 AM IST
ಬೆಂಗಳೂರು: ದೇಶಿ ವಿಶ್ವವಿದ್ಯಾಲಯಗಳಲ್ಲಿ ಅಂತಾರಾಷ್ಟ್ರೀಯ ಶೈಕ್ಷಣಿಕ ಗುಣಮಟ್ಟ ಸೃಷ್ಟಿಸಿದಾಗ ಮಾತ್ರ ಭಾರತದ ಪ್ರತಿಭಾವಂತ ವಿದ್ಯಾರ್ಥಿಗಳು ವಿದೇಶಕ್ಕೆ ಪಲಾಯನವಾಗದಂತೆ ತಡೆಯಲು ಸಾಧ್ಯ ಎಂದು ಇಸ್ರೋ ಮಾಜಿ ಅಧ್ಯಕ್ಷ ಎ.ಎಸ್.ಕಿರಣ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಗುರುವಾರ ಬೆಂಗಳೂರು ವಿಶ್ವವಿದ್ಯಾಲಯದ 53ನೇ ಘಟಿಕೋತ್ಸವ ಭಾಷಣ ಮಾಡಿದ ಅವರು, ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ. ಭಾರತದಲ್ಲಿಯೇ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಕಲ್ಪಿಸುವ ಮೂಲಕ ವಿದೇಶಿ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಭಾರತಕ್ಕೆ ಬರುವಂತೆ ಮಾಡಬೇಕು. ಜ್ಞಾನ ಮತ್ತು ಕೌಶಲ್ಯಾಧಾರಿತ ಯುವಶಕ್ತಿಯಿಂದ ಯಾವ ಸವಾಲನ್ನಾದರೂ ಎದುರಿಸಬಹುದು ಎಂದು ಹೇಳಿದರು.
ತಂತ್ರಜ್ಞಾನದ ಬೆಳವಣೆಗೆಯಿಂದ ಹಲವು ರೀತಿಯ ಅವಕಾಶಗಳು ಸೃಷ್ಟಿಯಾಗುತ್ತಿದೆ. ಸವಾಲುಗಳನ್ನು ಎದುರಿಸುವ ಮೂಲಕ ಹೊಸ ದಾರಿಯನ್ನು ಕಂಡುಕೊಳ್ಳಬಹುದು. ಬಹುತೇಕ ರಾಷ್ಟ್ರಗಳಲ್ಲಿ ತಂತ್ರಜ್ಞಾನವನ್ನು ಸೂಕ್ತವಾಗಿ ಬಳಸಿಕೊಂಡು ಅಭಿವೃದ್ಧಿಯಾಗಿರುವ ಉದಾಹರಣೆ ಇದೆ. ಹೀಗಾಗಿ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಅಟೋಮೆಷನ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ನಮ್ಮ ನಿತ್ಯ ಜೀವನ ಭಾಗವಾಗುತ್ತಿದೆ ಎಂದು ಹೇಳಿದರು.
ಉನ್ನತ ಶ್ರೇಣಿಯ 23,846, ಪ್ರಥಮ ಶ್ರೇಣಿಯ 19,704, ದ್ವಿತೀಯ ಶ್ರೇಣಿಯ 6,168, ಉತ್ತೀರ್ಣರಾದ 5,904 ವಿದ್ಯಾರ್ಥಿಗಳಿಗೆ ಮತ್ತು 158 ಅಭ್ಯರ್ಥಿಗಳಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಯಿತು. ಬೆಂವಿವಿ ಕುಲಪತಿ ಪ್ರೊ.ವಿ.ಸುದೇಶ್, ಕುಲಸಚಿವ ಪ್ರೊ.ಬಿ.ಕೆ.ರವಿ, ಮೌಲ್ಯಮಾಪನ ಕುಲಸಚಿವ ಪ್ರೊ.ಸಿ.ಶಿವರಾಜು, ಸಿಂಡಿಕೇಟ್ ಸದಸ್ಯರು ಉಪಸ್ಥಿತರಿದ್ದರು.
ಗಣ್ಯರ ಗೈರು: ಬೆಂವಿವಿ 53ನೇ ಘಟಕೋತ್ಸವಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಬಂದಿರಲಿಲ್ಲ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದಿನ ಎರಡು ದಿನಗಳಲ್ಲಿ ಕೊಪ್ಪಳಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಚಿವ ಬಸವರಾಜ ರಾಯರೆಡ್ಡಿಯವರು ಕೊಪ್ಪಳದಲ್ಲಿ ಕಾರ್ಯಕ್ರಮ ಸಿದ್ಧತೆಯಲ್ಲಿದ್ದರಿಂದ ಬಂದಿರಲಿಲ್ಲ. ರಾಜ್ಯಪಾಲರ ಬಿಡುವಿನ ದಿನಾಂಕದಂದೇ ಘಟಿಕೋತ್ಸವ ನಿಗದಿಯಾಗುತ್ತದೆ.
ಘಟಿಕೋತ್ಸವಕ್ಕೆ ರಾಜ್ಯಪಾಲರು ಬಾರದೇ ಇರಲು ಸ್ಪಷ್ಟ ಕಾರಣ ತಿಳಿದುಬಂದಿಲ್ಲ ಎಂದು ವಿವಿ ಅಧಿಕಾರಿಗಳು ಸ್ಪಷ್ಟಪಡಿಸಿದರು. ಬೆಂವಿವಿ ಕುಲಾಧಿಪತಿ ಮತ್ತು ಸಹ ಕುಲಾಧಿಪತಿಗಳ ಅನುಪಸ್ಥಿತಿಯಲ್ಲಿ ಮುಖ್ಯ ಅತಿಥಿ ಎ.ಎಸ್.ಕಿರಣ್ ಕುಮಾರ್ ಸೇರಿದಂತೆ ವಿವಿಯ ಕುಲಪತಿ, ಕುಲಸಚಿವರು, ಸಿಂಡಿಕೇಟ್ ಸದಸ್ಯರು ಗೌನ್ ಧರಿಸಿ ಘಟಿಕೋತ್ಸವ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.