ಮುಳುಗಡೆ ಸಂತ್ರಸ್ತರ ಧರಣಿ


Team Udayavani, Feb 9, 2018, 6:19 PM IST

1.jpg

ಹೊಸನಗರ: ವರಾಹಿ, ಚಕ್ರಾ, ಸಾವೆಹಕ್ಕಲು ವಿದ್ಯುತ್‌ ಯೋಜನೆಗಳ ಮುಳುಗಡೆ ಸಂತ್ರಸ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ವಿದ್ಯುತ್‌ ನಿಗಮದ ಮಾಸ್ತಿಕಟ್ಟೆ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

4 ದಶಕಗಳಿಂದ ನನೆಗುದಿಯಲ್ಲಿರುವ ಮುಳುಗಡೆ ಸಂತಸ್ತರ ಸಮಸ್ಯೆಗಳನ್ನು ಬಗೆ ಹರಿಸುವಲ್ಲಿ ಜನಪ್ರತಿನಿಧಿ ಗಳು ಹಾಗೂ ಕರ್ನಾಟಕ ವಿದ್ಯುತ್‌ ನಿಗಮದ ಅ ಧಿಕಾರಿಗಳು ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ಭೂಮಿ, ಮನೆ ಮುಳುಗಡೆಯಾದ ಸಂತ್ರಸ್ತರ ಕುಟುಂಬಕ್ಕೆ ಉದ್ಯೋಗ ನೀಡಬೇಕು ಎಂಬ ಹೈಕೋರ್ಟ್‌ ಆದೇಶವನ್ನು ವಿದ್ಯುತ್‌ ನಿಗಮವು ಸಂಪೂರ್ಣವಾಗಿ ಪಾಲಿಸಿಲ್ಲ ಎಂದು ಆರೋಪಿಸಿದರು.

ಮುಳುಗಡೆಯಾದ ಭೂಮಿಗೆ ಪರ್ಯಾಯವಾಗಿ ಜಮೀನು ವಿತರಿಸಬೇಕು. ಹಿನ್ನೀರಿನ ಮೇಲುಗಡೆ ಕೃಷಿ ಭೂಮಿ ಸಾಗುವಳಿ ಮಾಡುತ್ತಿರುವವರಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು. ವಾರಾಹಿ ವಿದ್ಯುತ್‌ ಯೋಜನೆಯಲ್ಲಿ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋದ ರೈತರ ಮೇಲೆ ಕರ್ನಾಟಕ ವಿದ್ಯುತ್‌ ನಿಗಮವು ಹಾಕಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಅವರು ಒತ್ತಾಯಿಸಿದರು. ಪ್ರವೇಶ ನಿರಾಕರಣೆ: ವಿದ್ಯುತ್‌ ಯೋಜನೆಗಾಗಿ ಮನೆ, ಜಮೀನು ಕಳೆದುಕೊಂಡ ಸಂತ್ರಸ್ತರ ನ್ಯಾಯವಾದ ಪ್ರತಿಭಟನೆಗೆ ಯೋಜನಾ ಪ್ರದೇಶದಲ್ಲಿ ಪ್ರವೇಶ ನಿರಾಕರಣೆ ಮಾಡಿದ ಕಾರಣ ಸುಡು ಬಿಸಿಲಿನಲ್ಲಿ ರಸ್ತೆಯ ಪಕ್ಕದಲ್ಲಿ ಧರಣಿ ಪ್ರತಿಭಟನೆ ನಡೆಸಬೇಕಾಯಿತು ಎಂದು ಸಂತ್ರಸ್ತರು ದೂರಿದರು.

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ. ಮಂಜುನಾಥ ಗೌಡ ಸ್ಥಳಕ್ಕೆ ಭೇಟಿ ನೀಡಿ, ಕಳೆದ 25 ವರ್ಷಗಳಿಂದ ಸಮಸ್ಯೆ ಬಗೆ ಹರಿಸದ ಶಾಸಕ ಕಿಮ್ಮನೆ ರತ್ನಾಕರ ಹಾಗೂ ಮಾಜಿ ಶಾಸಕ ಆರಗ ಜ್ಞಾನೇಂದ್ರ ಅವರ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿದರು. ಪ್ರತಿಭಟನೆಯಲ್ಲಿ ಉಳುಕೊಪ್ಪ ಭಾಸ್ಕರ,
ರೈತ ಸಂಘದ ಅಧ್ಯಕ್ಷ ರವೀಂದ್ರ, ಪಚ್ಚಪ್ಪ, ಜಯಶೀಲಪ್ಪ ಗೌಡ ಮತ್ತಿತರರು ಇದ್ದರು.  

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.