ಖ್ಯಾತ ಯಕ್ಷಗಾನ ಸಾಧಕ ಪಡುಮಲೆ ಅವರಿಗೆ ಜಾನಪದ ಲೋಕ ಪ್ರಶಸ್ತಿ
Team Udayavani, Feb 10, 2018, 9:20 AM IST
ಬದಿಯಡ್ಕ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಹಾಗೂ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಫೆ. 10 ಹಾಗೂ 11ರಂದು ರಾಮನಗರದ ಜಾನಪದ ಲೋಕದಲ್ಲಿ ಪ್ರವಾಸಿ ಜಾನಪದ ಲೋಕೋತ್ಸವ 2018 ಕಾರ್ಯಕ್ರಮ ಆಯೋಜಿಸಿದೆ. ಸಮಾರಂಭದ ಅಂಗವಾಗಿ ಫೆ. 11ರಂದು ಸಂಜೆ 5.30 ರಿಂದ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನದ ಹಿರಿಯ ಖ್ಯಾತ ವೇಷಧಾರಿ ಜಯರಾಮ ಪಾಟಾಳಿ ಪಡುಮಲೆಯವರಿಗೆ ಪ್ರಸಕ್ತಸಾಲಿನ ಜಾನಪದ ಲೋಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಆದಿಚುಂಚನಗಿರಿ ಮಹಾಸಂಸ್ಥಾನದ ಡಾ| ನಿರ್ಮಲಾನಂದ ಶ್ರೀಗಳ ಉಪಸ್ಥಿತಿಯಲ್ಲಿ ಬೆಂಗಳೂರು ಕೃಷಿಕ್ ಸರ್ವೋದಯ ಫೌಂಡೇಶನ್ ಅಧ್ಯಕ್ಷ ಡಾ| ವೈ.ಕೆ. ಪುಟ್ಟಸೋಮೇ ಗೌಡ ಪ್ರಶಸ್ತಿ ಪ್ರದಾನಗೈಯುವರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನ ಪರಿಷತ್ ಸದಸ್ಯ ವಿ. ಸೋಮಣ್ಣ, ಕರ್ನಾಟಕದ ಪ್ರವಾಸೋದ್ಯಮ ಇಲಾಖೆಯ ಅಧ್ಯಕ್ಷೆ ಎನ್. ಮಂಜುಳಾ, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಟಿ. ತಿಮ್ಮೇಗೌಡ ಮೊದಲಾದವರು ಉಪಸ್ಥಿತರಿರುವರು. ಕರ್ನಾಟಕ ಜಾನಪದ ಪರಿಷತ್ ಕೇರಳ ಗಡಿನಾಡ ಘಟಕದ ಅಧ್ಯಕ್ಷರಾದ ಎ.ಆರ್. ಸುಬ್ಬಯ್ಯಕಟ್ಟೆ ಜಯರಾಮ ಪಾಟಾಳಿಯವರನ್ನು ಪ್ರಶಸ್ತಿಗೆ ಶಿಫಾರಸು ಮಾಡಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.