ಅಫಜಲಪುರದಲ್ಲಿ ಕುಮಾರಪರ್ವ
Team Udayavani, Feb 10, 2018, 11:43 AM IST
ಕಲಬುರಗಿ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಅಫಜಲಪುರ ಪಟ್ಟಣದಲ್ಲಿ ಫೆ. 27ರಂದು ಕುಮಾರಪರ್ವ ಕಾರ್ಯಕ್ರಮದ ಅಡಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆಗಮಿಸುವರು. ಅಂದು ನೂರಾರು ಜನ ಬಿಜೆಪಿ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಲಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಸದಸ್ಯ ಹಾಗೂ ಹಿರಿಯ ಮುಖಂಡ ಕೇದಾರಲಿಂಗಯ್ಯ ಹಿರೇಮಠ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ. 27ರ ಕಾರ್ಯಕ್ರಮಕ್ಕೆ 25ಸಾವಿರಕ್ಕೂ ಅಧಿಕ ಜನ ಆಗಮಿಸಲಿದ್ದು, ಪಕ್ಷದ ಯುವ ಮುಖಂಡ ಶಿವಕುಮಾರ ನಾಟೀಕಾರ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಅದೇ ಕಾರ್ಯಕ್ರಮದಲ್ಲಿ ಅಫಜಲಪುರ ವಿಧಾನಸಭಾ ಕ್ಷೇತ್ರದ ಅಧಿಕೃತ ಅಭ್ಯರ್ಥಿ ಘೋಷಣೆಯೂ ಆಗಲಿದೆ ಎಂದು ತಿಳಿಸಿದರು.
ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳ ಪೈಕಿ, ಜೇವರ್ಗಿಗೆ ತಮ್ಮ(ಕೇದಾರಲಿಂಗಯ್ಯ), ಆಳಂದ ಸೂರ್ಯಕಾಂತ ಕೋರಳ್ಳಿ, ಕಲಬುರಗಿ ಉತ್ತರ ನಾಸೀರ್ ಹುಸೇನ್, ಚಿಂಚೋಳಿ ಸುಶೀಲಾಬಾಯಿ ಕೊರವಿ ಅವರ ಹೆಸರು ಬಹುತೇಕ ಈಗಾಗಲೇ ಘೋಷಣೆ ಆದಂತಾಗಿದೆ. ಇನ್ನುಳಿದಂತೆ ಅಫಜಲಪುರ, ಕಲಬುರಗಿ ದಕ್ಷಿಣ, ಸೇಡಂಗಳಲ್ಲಿ ಘೋಷಣೆ ಆಗಿಲ್ಲ. ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದಿಂದ ಮಲ್ಲಿಕಾರ್ಜುನ ಕುಸ್ತಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚಿತ್ತಾಪುರ ಮತ್ತು ಕಲಬುರಗಿ ಗ್ರಾಮೀಣ ಎರಡನ್ನು ಬಿಎಸ್‌ಪಿಯವರು ಕೇಳಿದ್ದಾರೆ.
ನಾವು ಕಲಬುರಗಿ ಗ್ರಾಮೀಣ ಬಿಟ್ಟು ಕೊಡುವುದಿಲ್ಲ ಎಂದು ತಿಳಿಸಿದರು. ಅಫಜಲಪುರ ಕ್ಷೇತ್ರದಲ್ಲಿ ಗೋವಿಂದ ಭಟ್ ಅವರಿಗೆ ಟಿಕೆಟ್ ಸಿಗುವುದರ ಕುರಿತು ಗಾಳಿ ಸುದ್ದಿ ಹರಡಿತ್ತಷ್ಟೆ.. ಈ ಹಿನ್ನೆಲೆಯಲ್ಲಿ ಫೆ. 27ರಂದು ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರೇ ಘೋಷಣೆ ಮಾಡಲಿದ್ದಾರೆ. ಭಟ್ ಅವರಿಗೆ ಸಿಗುವುದು ಕಷ್ಟ. ಕಳೆದ ಬಾರಿ ಕೋಲಿ ಸಮಾಜದ ಧೀಮಂತ ನಾಯಕ ದಿ| ವಿಠ್ಠಲ ಹೇರೂರು ಅವರಿಗೆ ನೀಡಲಾಗಿತ್ತು. ಅವರು ನಮ್ಮ ಪಕ್ಷದ ತಂತ್ರ ಹಾಗೂ ಕುಮಾರಸ್ವಾಮಿ ಅವರ ಪ್ರಚಾರದ ದಿನಾಂಕ ಮತ್ತು ಸಮಯ ಹೊಂದಾಣಿಕೆಯಲ್ಲಿ ಉಂಟಾದ ವ್ಯತ್ಯಯದಿಂದಾಗಿ ಸೋಲು ಕಾಣಬೇಕಾಯಿತು. ಇಲ್ಲದೆ ಹೋಗಿದ್ದರೆ ಹೇರೂರು ಖಂಡಿತ ಗೆಲುವು ಸಾಧಿಸುತ್ತಿದ್ದರು. ಆದರೆ, ಈ ಬಾರಿ ಹಾಗೆ ಆಗುವುದಿಲ್ಲ ಎನ್ನುವ ಭರವಸೆಯನ್ನು ಪಕ್ಷದ ಹಿರಿಯರು ನೀಡಿದ್ದಾರೆ ಎಂದು ತಿಳಿಸಿದರು.
ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜೇವರ್ಗಿ ಪಟ್ಟಣದಲ್ಲಿ ಪ್ರಮುಖ ರಸ್ತೆ ಮಧ್ಯೆ ಅಲಂಕಾರಿಕ ಗಿಡ ನೆಡಲಾಗುತ್ತಿದೆ.ಈ ಹಿಂದೆ ಮುಖ್ಯಮಂತ್ರಿ ಕಾರ್ಯಕ್ರಮಕ್ಕಾಗಿ ಯಡ್ರಾಮಿಯಲ್ಲಿ ಸಾವಿರಾರು ರೂ. ವೆಚ್ಚ ಮಾಡಿ ಹಚ್ಚಿದ ಇಂತಹದೇ ಅಲಂಕಾರಿಕ ಗಿಡಗಳು ಒಣಗಿವೆ. ಆದರೂ ಈಗ ಅಂತಹದೇ ಸಾಹಸವನ್ನು ಶಾಸಕ ಅಜಯಸಿಂಗ್ ಮಾಡುತ್ತಿದ್ದಾರೆ. ಇದು ನಿಜಕ್ಕೂ ತುಗಲಕ್ ದರ್ಬಾರ್ ಎಂದು ಟೀಕಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಕುಸ್ತಿ, ಶಿವಕುಮಾರ ನಾಟೀಕಾರ, ಮಾಶ್ಯಾಳದ ಶರಣಗೌಡ ಪಾಟೀಲ, ಜಮೀಲಗೌಡ ಅಫಜಲಪುರ, ರೇವಣಸಿದ್ದಯ್ಯ ಹಿರೇಮಠ, ಮಹಿಬೂಬ್ ಇನಾಂದಾರ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.