ಕೆಎಸ್‌ಒಯು ಮಾನ್ಯತೆಗೆ ಸರ್ಕಾರದ ಹೋರಾಟ ಅಗತ್ಯ


Team Udayavani, Feb 10, 2018, 12:07 PM IST

ksou.jpg

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ (ಕೆಎಸ್‌ಒಯು) ಪದವಿ ಪಡೆದ ಲಕ್ಷಾಂತರ ಪದವೀಧರರಿಗೆ ನ್ಯಾಯಕೊಡಿಸುವಲ್ಲಿ  ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿರುವುದು ದುರಂತ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ.ಎನ್‌.ಆರ್‌.ಶೆಟ್ಟಿ ಕಳವಳ ವ್ಯಕ್ತಪಡಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಅಂಚೆತೆರಪು ಮತ್ತು ದೂರಶಿಕ್ಷಣ ನಿರ್ದೇಶನಾಲಯ ಶುಕ್ರವಾರ ಸೆಂಟ್ರಲ್‌ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದೂರಶಿಕ್ಷಣ ಕುರಿತು ಅರಿವು ಮೂಡಿಸುವ ಸಿಡಿ ಬಿಡುಗಡೆ ಮಾಡಿ ಮಾತನಾಡಿದರು.

ಹಲವು ಕಾರಣಗಳಿಗಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗವು ಕೆಎಸ್‌ಒಯು ಮಾನ್ಯತೆ ರದ್ದು ಮಾಡಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೆಎಸ್‌ಒಯುನಲ್ಲಿ ಪದವಿ ಪಡೆದ ಅಭ್ಯರ್ಥಿಗಳ ಪ್ರಮಾಣ ಪತ್ರವನ್ನು ಉದ್ಯೋಗವಕಾಶಗಳಲ್ಲಿ ಪರಿಗಣಿಸದೇ ಇರುವುದು ಸರಿಯಲ್ಲ. ಕೆಎಸ್‌ಒಯು ಮಾನ್ಯತೆ ರದ್ದಾಗಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಹೈಕೋರ್ಟ್‌ ಸಹ ಸೂಕ್ತವಾದ ನಿರ್ದೇಶನ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಿತ್ಯ ಕಾಲೇಜಿಗೆ ಹೋಗಿ ಪದವಿ ಪಡೆಯಲು ಸಾಧ್ಯವಿಲ್ಲದ ಆರ್ಥಿಕವಾಗಿ ಹಿಂದುಳಿದವರಲ್ಲಿ ಬಹುತೇಕರು ದೂರ ಶಿಕ್ಷಣದ ಮೂಲಕ ಕೋರ್ಸ್‌ಗಳ ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡುತ್ತಾರೆ. ಕೆಎಸ್‌ಒಯುನಿಂದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗದ ನಿಯಮ ಉಲ್ಲಂಘನೆಯಾಗಿದೆ. ಪದವೀಧರರ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಸಮಸ್ಯೆಗೆ ಪರಿಹಾರ ನೀಡಬೇಕು. ಎಲ್ಲಾ ಅಭ್ಯರ್ಥಿಗಳ ಪದವಿ ಮಾನ್ಯ ಮಾಡಬೇಕಿದೆ ಎಂದರು. 

ಪ್ರೊ.ಬಿ.ಸಿ.ಮೈಲಾರಪ್ಪ ಅವರನ್ನು ಸಾಕಷ್ಟು ವರ್ಷಗಳಿಂದ ಬಲ್ಲವನಾಗಿದ್ದೇನೆ. ಕೆಎಸ್‌ಒಯು ಕುಲಪತಿ ನೇಮಕಾತಿ ಪಟ್ಟಿಯಲ್ಲಿ ಇವರ ಹೆಸರು ಇತ್ತು. ಕೊನೆ ಕ್ಷಣದಲ್ಲಿ ಬಿಟ್ಟು ಹೋಗಿದೆ. ವಿದ್ಯಾರ್ಥಿಗಳಿಗೆ ದೂರಶಿಕ್ಷಣದ ಅರಿವು ಮೂಡಿಸಲು ಹೊಸ ಅಭಿಯಾನದ ಈ ಕಾರ್ಯಕ್ರಮ ಶ್ಲಾಘನೀಯ ಎಂದು ಹೇಳಿದರು.

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಟಿ.ಶ್ಯಾಮ್‌ಭಟ್‌ ಮಾತನಾಡಿ, ಕೆಎಸ್‌ಒಯು ಮಾನ್ಯತೆ ಕಳೆದುಕೊಂಡ ವರ್ಷದಲ್ಲಿ ಪದವಿ ಪಡೆದ ಅಭ್ಯರ್ಥಿಗಳ ಅಂಕಪಟ್ಟಿಯನ್ನು ಸರ್ಕಾರಿ ಉದ್ಯೋಗಕ್ಕೆ ಪರಿಗಣಿಸಲು ಸಾಧ್ಯವಿಲ್ಲ. ಆದರೆ, ಬೆಂವಿವಿ ಅಂಕಪಟ್ಟಿಯನ್ನು ನಾವು ಪರಿಗಣಿಸುತ್ತೇವೆ. ರೆಗ್ಯೂಲರ್‌ ವಿದ್ಯಾರ್ಥಿಗಳಿಂತ ದೂರಶಿಕ್ಷಣದ ಮೂಲಕ ಶಿಕ್ಷಣ ಪಡೆದವರೇ ಉತ್ತಮವಾಗಿ ಪ್ರಗತಿ ಕಾಣುತ್ತಿದ್ದಾರೆ ಎಂದರು.  

ಬೆಂವಿವಿ ಅಂಚೆ ತೆರಪು ಮತ್ತು ದೂರಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಬಿ.ಸಿ.ಮೈಲಾರಪ್ಪ ಮಾತನಾಡಿ, ದೂರ ಶಿಕ್ಷಣದಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳ ಕಷ್ಟವನ್ನು ಅರಿತಿದ್ದೇನೆ. ಉನ್ನತ ಶಿಕ್ಷಣ ಎಲ್ಲರಿಗೂ ಸಿಗುವಂತಾಗಬೇಕೆಂಬ ಉದ್ದೇಶದಿಂದ ಈ ವಿನೂತನ ಸಿಡಿ ಹೊರ ತಂದಿದ್ದೇವೆ ಎಂದರು. ಬೆಂವಿವಿ ಮೌಲ್ಯಮಾಪನ ಕುಲಸಚಿವ ಸಿ.ಶಿವರಾಜು, ಸಿಂಡಿಕೇಟ್‌ ಸದಸ್ಯರಾದ ರವಿ, ಮಂಜುನಾಥ್‌, ವಿಜಯಸಿಂಹ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

15

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಆಮಿಷ; 21 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.