ಗ್ರಾಮ ಸಹಾಯಕರ ಅರೆಬೆತ್ತಲೆ ಪ್ರತಿಭಟನೆ
Team Udayavani, Feb 10, 2018, 12:07 PM IST
ಬೆಂಗಳೂರು: ಗ್ರಾಮ ಸಹಾಯಕರನ್ನು ಡಿ ಗ್ರೂಪ್ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರು ಶುಕ್ರವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.
ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಗಮನ ಸೆಳೆಯಲು ಮುಷ್ಕರ ಹಮ್ಮಿಕೊಂಡಿರುವ ಗ್ರಾಮ ಸಹಾಯಕರು ತಾವು ಕಳೆದ 30-40 ವರ್ಷಗಳಿಂದ ಹಳ್ಳಿಗಳಲ್ಲಿ ಸೇವೆಸಲ್ಲಿಸುತ್ತಿದ್ದರೂ ಸರ್ಕಾರ ಕನಿಷ್ಠ ವೇತನ ನಿಗದಿಪಡಿಸಿಲ್ಲವೆಂದು ದೂರಿದ್ದಾರೆ.
ಹಗಲಿರಳು ಕೆಲಸ ಮಾಡಿದರೂ ಯಾವುದೇ ಸರ್ಕಾರಿ ಸೌಲಭ್ಯಗಳಿಲ್ಲ. ತಮ್ಮನ್ನು ಡಿ ಗ್ರೂಪ್ ನೌಕರರನ್ನಾಗಿ ಪರಿಗಣಿಸಬೇಕೆಂದು ಸಾವಿರಾರು ಪ್ರತಿಭಟನಾ ನಿರತ ನೌಕರರು ಒತ್ತಾಯಿಸಿದ್ದಾರೆ. ಈ ಸಂಬಂಧ ಶುಕ್ರವಾರ ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಎನ್.ಎಚ್.ಕೋನರೆಡ್ಡಿ ಹಾಗೂ ವಿಪಕ್ಷನಾಯಕ ಜಗದೀಶ್ ಶೆಟ್ಟರ್ ಪ್ರಸ್ತಾಪಿಸಿದ್ದು, ನೌಕರರಿಗೆ ನ್ಯಾಯ ಒದಗಿಸಬೇಕು.
ವೇತನ ನಿಗದಿಪಡಿಸಿ ಅವರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿದರು. ಈ ಬೇಡಿಕೆಗೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಗ್ರಾಮ ಸಹಾಯಕರನ್ನು ಡಿ ಗ್ರೂಪ್ ನೌಕರರನ್ನಾಗಿ ಪರಿಗಣಿಸುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿದೆ.
ಗ್ರಾಮ ಸಹಾಯಕರ ಬೇಡಿಕೆಗಳ ವಿಚಾರವನ್ನು ಬಜೆಟ್ ಪೂರ್ವ ಸಿದ್ಧತಾ ಸಭೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತರಲಾಗಿದೆ. ಬಜೆಟ್ ಮಂಡನೆ ವೇಳೆ ಸೂಕ್ತ ನಿರ್ಧಾರ ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದರು.
ಸರ್ಕಾರ ಗ್ರಾಮ ಸಹಾಯಕರ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಧರಣಿಯನ್ನು ಕೈ ಬಿಡಬೇಕು ಎಂದು ಮನವಿ ಮಾಡಿದರು. ಇದಕ್ಕೂ ಮೊದಲು ಶಾಸಕ ಕೋನರೆಡ್ಡಿ ಮಾತನಾಡಿ, ಈಗಾಗಲೇ ಬೇರೆ ಬೇರೆ ಇಲಾಖೆ ನೌಕರರನ್ನು ಸರ್ಕಾರ ಖಾಯಂಗೊಳಿಸಿದೆ.
ಅದರಂತೆ ಗ್ರಾಮ ಸಹಾಯಕರ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಕಾಂಗ್ರೆಸ್ ಶಾಸಕ ಕೆ.ಎನ್.ರಾಜಣ್ಣ ಕೂಡ ಧ್ವನಿಗೂಡಿಸಿ ಗ್ರಾಮ ಸಹಾಯಕರಿಗೆ ವೇತನ ನಿಗದಿ ಮಾಡಿಲ್ಲ. ಕೇವಲ ಗೌರವಧನ ನೀಡಲಾಗುತ್ತಿದೆ. ಇವರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಾತನಾಡಿ, ಕಂದಾಯ ಇಲಾಖೆಯ ಬಹುತೇಕ ಕೆಲಸವನ್ನು ಗ್ರಾಮ ಸಹಾಯಕರೇ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಈ ನೌಕರರ ಗೌರವ ಧನ ಹೆಚ್ಚಳ ಮಾಡಲಾಗಿತ್ತು. ಇವರಿಗೆ ಯಾವುದೇ ಸೇವಾ ಭದ್ರತೆ ಇಲ್ಲ. ಹೀಗಾಗಿ 23 ಸಾವಿರ ಮಂದಿ ನೌಕರರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.