ಸ್ವಚ್ಛತಾ ರಾಯಭಾರಿಗಳಿಗೆ ಪ್ರತಿಜ್ಞಾವಿಧಿ ಬೋಧನೆ
Team Udayavani, Feb 10, 2018, 5:17 PM IST
ಮಹಾನಗರ : ಸ್ವಚ್ಛತಾ ಕಾರ್ಯಕ್ರಮವು ದೇವತಾ ಕಾರ್ಯ ಮಾಡಿದಷ್ಟೇ ಪವಿತ್ರವಾದುದು. ಪ್ರತಿಯೊಬ್ಬರು ಸ್ವಚ್ಛತೆಯ ಸಂಕಲ್ಪ ಕೈಗೊಂಡು ದೇಶ ಸೇವಾ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದು ಲಂಡನ್ ರಾಮಕೃಷ್ಣ ವೇದಾಂತ ಸೊಸೈಟಿಯ ಮುಖ್ಯಸ್ಥ ಸ್ವಾಮಿ ಸರ್ವಸ್ಥಾನಂದಜೀ ಹೇಳಿದರು.
ರಾಮಕೃಷ್ಣ ಮಿಷನ್‌ನ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಸ್ವಚ್ಛತಾ ರಾಯ ಭಾರಿಗಳಿಗೆ ಪ್ರತಿಜ್ಞಾವಿಧಿ ಬೋಧನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಚ್ಛತಾ ಮಂಥನ
ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರೊ| ರಘೋತ್ತಮ ರಾವ್ ಬೆಂಗಳೂರು ಅವರು ಸ್ವಚ್ಛತಾ ಮಂಥನ ಎಂಬ ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಆಶಯ ನುಡಿಗಳನ್ನಾಡಿದರು. ಪೂರ್ಣಕಾಮಾನಂದ ಸ್ವಾಮೀಜಿ, ಡಾ| ವಿರೂಪಾಕ್ಷ ದೇವರಮನೆ ಉಡುಪಿ ಉಪಸ್ಥಿತರಿದ್ದರು. ಬಳಿಕ ಸ್ವಚ್ಛತೆಯ ಕುರಿತಂತೆ ವಿಶೇಷ ಮಾಹಿತಿ ಶಿಬಿರವನ್ನು ಆಯೋಜಿಸಲಾಯಿತು.
ಆಂತರಿಕ ಸ್ವಚ್ಛತೆ ಅಗತ್ಯ
ಮನುಷ್ಯನಾದವನು ಬಾಹ್ಯ ಸ್ವಚ್ಛತೆಯೊಂದಿಗೆ ಆಂತರಿಕ ಸ್ವಚ್ಛತೆಯ ಕಡೆಗೆ ಹೆಚ್ಚಿನ ಗಮನಹರಿಸಬೇಕಾಗಿದೆ. ಆಂತರಿಕವಾಗಿ ಸ್ವತ್ಛವಾಗಿಲ್ಲದಿದ್ದಲ್ಲಿ ಪರಿಸರ ಸ್ವಚ್ಛ ಮಾಡುವುದರಲ್ಲಿ ಅರ್ಥವಿಲ್ಲ. ನಮ್ಮ ಮನೆ, ಪರಿಸರವನ್ನು
ಸ್ವಚ್ಛವಾಗಿಟ್ಟುಕೊಳ್ಳುತ್ತೇವೆ ಎಂಬ ಸಂಕಲ್ಪವನ್ನು ಪ್ರತಿಯೊಬ್ಬರು ಮಾಡಬೇಕಾಗಿದೆ.
– ಸ್ವಾಮಿ ಸರ್ವಸ್ಥಾನಂದಜೀ,
ಮುಖ್ಯಸ್ಥ, ರಾಮಕೃಷ್ಣ ವೇದಾಂತ
ಸೊಸೈಟಿ ಲಂಡನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ
Weightlifting: ಏಷ್ಯನ್ ವೇಟ್ ಲಿಫ್ಟಿಂಗ್; ಭಾರತಕ್ಕೆ ಎರಡು ಬೆಳ್ಳಿ
Junior World Cup shooting: ಭಾರತದ ಆತಿಥ್ಯದಲ್ಲಿ ಜೂ. ವಿಶ್ವಕಪ್ ಶೂಟಿಂಗ್
Udupi: ಕುದ್ರು ನೆಸ್ಟ್ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.