ಮತದಾನ ಪ್ರಮಾಣ ಹೆಚ್ಚಳಕ್ಕೆ ಜಾಗೃತಿ
Team Udayavani, Feb 10, 2018, 5:28 PM IST
ಯಾದಗಿರಿ: ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿ ವ್ಯಾಪಕ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ| ಅವಿನಾಶ ಮೆನನ್ ರಾಜೇಂದ್ರನ್ ಸೂಚಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ನಡೆದ ಕ್ರಮಬದ್ಧ ಮತದಾರರ ಶಿಕ್ಷಣ ಮತ್ತು ಪಾಲ್ಗೊಳ್ಳುವಿಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತದಾನ ಪ್ರಮಾಣ ಹೆಚ್ಚಿಸಲು ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ, ರಸ ಪ್ರಶ್ನೆ, ಭಾಷಣ ಸ್ಪರ್ಧೆ ಮುಂತಾದವುಗಳನ್ನು ಏರ್ಪಡಿಸುವುದರ ಮೂಲಕ ಜಾಗೃತಿ ಮೂಡಿಸಬೇಕು. ಶಾಲಾ ಮಕ್ಕಳಿಂದ ಅಣಕು ಮತದಾನದ ಮಾಡಿಸುವ ಮೂಲಕ ಪೋಷಕರಲ್ಲೂ ಅರಿವು ಮೂಡಿಸಬೇಕು ಎಂದು ಅವರು ಕರೆ ನೀಡಿದರು.
ಮತದಾನ ನಡೆಯುವಂತಹ ಶಾಲಾ-ಕಾಲೇಜುಗಳಲ್ಲಿ ಮೂಲ ಸೌಕರ್ಯ ಕಲ್ಪಿಸಬೇಕು. ಯಾವ ಯಾವ ಶಾಲೆಗಳಲ್ಲಿ
ಕುಡಿಯುವ ನೀರು ಶೌಚಾಲಯ, ರ್‍ಯಾಂಪ್, ವಿದ್ಯುತ್, ನೆರಳು, ಪಿಠೊಪಕರಣಗಳು ಕಲ್ಪಿಸಬೇಕಿದೆ ಹಾಗೂ ಕಟ್ಟಡಗಳ ದುರಸ್ತಿ ಆಗಬೇಕಿದೆ ಎಂಬ ಬಗ್ಗೆ ಶಿಕ್ಷಕರಿಂದ ಮಾಹಿತಿ ಪಡೆದರು. ಪ್ರಮುಖವಾಗಿ ಹೆಚ್ಚು ಮೆಟ್ಟಿಲು ಇರುವ ಶಾಲೆಗಳಲ್ಲಿ ಹಿರಿಯ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 3 ಅಡಿ ಅಗಲದ ರ್‍ಯಾಂಪ್‌ನ್ನು ನಿರ್ಮಿಸಬೇಕು. ಸಿಮೆಂಟ್‌ನಿಂದ ನಿರ್ಮಿಸಿ, ಎರಡೂ ಬದಿಗೆ ಕಬ್ಬಿಣದ ಗ್ರಿಲ್ ಹಾಕಿಸಬೇಕು ಎಂದು ಕ್ರಮಬದ್ಧ ಮತದಾರರ ಶಿಕ್ಷಣ ಮತ್ತು ಪಾಲ್ಗೊಳ್ಳುವಿಕೆ ಸಮಿತಿ ಅಧ್ಯಕ್ಷರೂ ಆದ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಮಷೂರ, ಕಕ್ಕೇರಾ, ಕೊಂಕಲ್ ಹಾಗೂ ಸುರಪುರ ಮತ ಕ್ಷೇತ್ರದ ವಿವಿಧ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದಿರುವ ಬಗ್ಗೆ ಶಿಕ್ಷಕರು, ಸಮಿತಿಯ ಅಧ್ಯಕ್ಷರ ಗಮನಕ್ಕೆ ತಂದರು. ಇವುಗಳೆಲ್ಲ ಸಮಸ್ಯೆಗಳನ್ನು ಫೆಬ್ರುವರಿ 20ರೊಳಗೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಅವರು ಸೂಚಿಸಿದರು.
ಸಭೆಯಲ್ಲಿ ಶಿಕ್ಷಣ ಇಲಾಖೆ ಜಿಲ್ಲಾ ಸಹಾಯಕ ಸಮನ್ವಯಾಧಿಕಾರಿ ಮಾರುತಿ ಹುಜರತಿ ಸ್ವಾಗತಿಸಿದರು. ಸ್ವೀಪ್ ಸಮಿತಿಯ ಸದಸ್ಯರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.