ರಾಹುಲ್ ಪ್ರವಾಸಕ್ಕೆ ಬಿಜೆಪಿ ಟ್ವೀಟ್ ವಾರ್
Team Udayavani, Feb 11, 2018, 6:30 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ರಾಜ್ಯಪ್ರವಾಸದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಟ್ವೀಟ್ ಮೂಲಕ ರಾಜ್ಯ ಸರ್ಕಾರ ಹಾಗೂ ರಾಹುಲ್ ಗಾಂಧಿಯನ್ನು ಕುಟುಕಿದ್ದಾರೆ.
ಡಿಯರ್ ಎಲೆಕ್ಷನ್ ಹಿಂದು ರಾಹುಲ್ ಗಾಂಧಿಯವರೇ “ರೇರ್ಮಿರರ್ ವೀವ್’ನಲ್ಲಿ ನೋಡಿ ನಿಮ್ಮ ಪಕ್ಷದಲ್ಲೇ ಕುಳಿತಿರುವ ಸಂತೋಷ್ ಲಾಡ್, ಆನಂದ್ ಸಿಂಗ್ ಮತ್ತು ವೇಣುಗೋಪಾಲ್ ಅವರ ಭೂಮಿ, ಗಣಿ ಮತ್ತು ಅತ್ಯಾಚಾರ ಪ್ರಕರಣದ ಬಗ್ಗೆ ತಿಳಿಯುತ್ತದೆ.
– ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ
ಮಹದಾಯಿ ನದಿಯ ಒಂದು ಹನಿ ನೀರು ಕರ್ನಾಟಕ್ಕೆ ನೀಡುವುದಿಲ್ಲ
ಎಂದು ಸೋನಿಯಾ ಹೇಳಿದ್ದರು. ಎಸಿಬಿಯಲ್ಲಿ ಸಿಎಂ ವಿರುದಟಛಿದ 67 ಪ್ರಕರಣ ವಿಚಾರಣೆಗೆ ಬಾಕಿ ಇದೆ. ಹೀಗೆ ಹತ್ತಾರು ಪ್ರಶ್ನೆಗಳು ಕನ್ನಡಿಗರ ಮುಂದಿವೆ. “ಗಂಭೀರ’ ರಾಜಕಾರಣಿ ರಾಹುಲ್ ಗಾಂಧಿಯವರೇ ಇದಕ್ಕೆಲ್ಲ ಉತ್ತರ ನೀಡುವಿರಾ?
– ರಾಜ್ಯ ಬಿಜೆಪಿ
ಕರ್ನಾಟಕ ರಾಜ್ಯಕ್ಕೆ ಆಗಮಿಸಿದ ದೇಶದೆಲ್ಲೆಡೆ ಜನರಿಂದ ತಿರಸ್ಕರಿಸಲ್ಪಟ್ಟು ಭಾರೀ ನಷ್ಟದಲ್ಲಿ ನಡೆಯುತ್ತಿರುವ ಕಾಂಗ್ರೆಸ್
ಕುಟುಂಬ ವ್ಯಾಪಾರ ಸಂಸ್ಥೆಯ ಹೊಸ ಮುಖ್ಯಸ್ಥ ರಾಹುಲ್ ಗಾಂಧಿಯವರಿಗೆ ಸ್ವಾಗತ.
– ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ
ಎಲೆಕ್ಷನ್ ಹಿಂದು ರಾಹುಲ್ಗಾಂಧಿಯವರೇ ಒಂದು ವಿಷಯ ತಿಳಿಯಬೇಕು. ನಿಮ್ಮ ತಾಯಿ ಸೋನಿಯಾ ಗಾಂಧಿ ಬಳ್ಳಾರಿಯಿಂದ ಸಂಸತ್ಗೆ ಆಯ್ಕೆಯಾದ ನಂತರದ ಮೂರು ವರ್ಷದಲ್ಲಿ ಬಳ್ಳಾರಿಗೆ ಏನು ಕೊಡುಗೆ ನೀಡಿದ್ದಾರೆ? ಯಾಕೆ ಅವರು ಬಳ್ಳಾರಿಯನ್ನು ಮರೆತಿದ್ದಾರೆ?
– ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ
ಸಿದ್ದರಾಮಯ್ಯನವರೇ ನಿಮ್ಮ ದೃಷ್ಟಿಯಲ್ಲಿ ಕೇವಲ ದಲಿತರು ಮಾತ್ರ ಬೆಂಗಳೂರಿನ ಸ್ಲಂಗಳಲ್ಲಿ ವಾಸಿಸಬೇಕೇ? ದಲಿತರನ್ನು ದಶಕಗಳ ಕಾಲ ಬಡತನ ಮತ್ತು ಕತ್ತಲಲ್ಲಿ ಇಟ್ಟು ನೀಚ ರಾಜಕಾರಣ ಮಾಡಿದ್ದೇ ಕಾಂಗ್ರೆಸ್ ಪಕ್ಷದ ಸಾಧನೆಯಲ್ಲವೇ?. ದಲಿತರ ಹೆಸರಿನಲ್ಲಿ ಅಧಿಕಾರ ಅನುಭವಿಸಿದ ನಿಮಗೆ ದಲಿತರ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ದಲಿತವಿರೋಧಿ ಕಾಂಗ್ರೆಸ್.
– ಸಿ.ಟಿ.ರವಿ, ಬಿಜೆಪಿ ಮುಖಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.