ಫೆ. 10: ಬೃಹನ್ಮುಂಬಯಿ ಕನ್ನಡ ಸಾಹಿತ್ಯ ಪರಿಷತ್‌ ಘಟಕ ಸೇವಾರ್ಪಣೆ

Team Udayavani, Feb 11, 2018, 12:01 PM IST

0902mum05.jpg

ಮುಂಬಯಿ: ಹೊರನಾಡು ಮುಂಬಯಿಯಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಿದ್ದು, ಮುಂಬಯಿ ಗರ ಪ್ರಾತಿನಿಧ್ಯ ಗುರುತರವಾದದ್ದು. ಚರ್ಚೆ, ಸಂವಾದಗಳಿಂದ ಸಾಧ್ಯವಾಗುವುದು. ಮುಂಬ ಯಿಯಲ್ಲಿ ಕನ್ನಡದ ಕೆಲಸ ಅದ್ಭುತವಾಗಿ ನಡೆಯುತ್ತಿದೆ. ಮುಂಬಯಿ ನೆಲೆವಾಸಿ ಕನ್ನಡಿಗರ ಗೌರವದಿಂದಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರಾಡಳಿತಕ್ಕೆ ನೇರ ಆಡಳಿತಕ್ಕೆ ಒಳಪಟ್ಟಂತೆ ಹೆಚ್ಚಿನ ಸ್ಥಾನಮಾನಕೊಟ್ಟು ಅನುಮೋದನೆಗೊಳಿಸಿ ಬೃಹನ್ಮುಂಬಯಿ  ಕನ್ನಡ ಸಾಹಿತ್ಯ ಪರಿಷತ್‌ ಘಟಕ ಸೇವಾರ್ಪಣೆ ಮಾಡಲಿದ್ದೇವೆ ಆ ಮೂಲಕ ನಾವು ಕನ್ನಡಕ್ಕಾಗಿ ಇನ್ನಷ್ಟು ಒಟ್ಟಾಗಿ ಶ್ರಮಿಸೋಣ ಎಂದು ಕನ್ನಡ ಸಾಹಿತ್ಯ ಪರಿಷತ್‌ ಬೆಂಗಳೂರು ಇದರ ಅಧ್ಯಕ್ಷ ಡಾ| ಮನು ಬಳಿಗಾರ್‌ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. 

ಫೆ. 8ರಂದು ಸಂಜೆ ಮಾಟುಂಗಾ ಪೂರ್ವ ಮೈಸೂರು ಅಸೋಸಿಯೇಶನ್‌ನ ಕಿರು ಸಭಾಗೃಹ‌ದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇವರು, ಈ ಬಾರಿ ಮುಂಬಯಿ ಮಹಾನಗರದಲ್ಲಿ ಫೆ. 10 ಮತ್ತು ಫೆ. 11ರಂದು ದ್ವಿದಿನಗಳಲ್ಲಿ ಅಂಧೇರಿ ಪಶ್ಚಿಮದ ಮಹಾಲಕ್ಷ್ಮೀ ಕಾಲನಿಯ ಮೊಗವೀರ ಭವನದಲ್ಲಿ  ಹಮ್ಮಿಕೊಡಿರುವ ಹೊರ

ನಾಡ ಕನ್ನಡಿಗರ ದ್ವಿತೀಯ ರಾಷ್ಟ್ರೀಯ ಸಮಾವೇಶದ ಬಗ್ಗೆ ಡಾ| ಮನು ಬಳಿಗಾರ್‌ ವಿವರಿಸಿದರು. ಕಸಾಪ ಬೆಂಗಳೂರು ಇದರ ಸಾರಥ್ಯ ಹಾಗೂ ಬೃಹನ್ಮುಂಬಯಿ ಮತ್ತು ಉಪನಗರಗಳ ಸುಮಾರು ಮೂವತ್ತು ಸಂಘ ಸಂಸ್ಥೆಗಳ ಕೂಡುವಿಕೆಯಲ್ಲಿ ಏರ್ಪಡಿಸಲಾಗಿರುವ ರಾಷ್ಟ್ರೀಯ ಸಮಾವೇಶವನ್ನು ಫೆ. 10ರಂದು  ಶನಿವಾರ ಪೂರ್ವಾಹ್ನ 10ರಿಂದ  ಗಂಟೆಗೆ ನಾಡಿನ ಪ್ರಸಿದ್ಧ ಕಾದಂಬರಿಕಾರ ಡಾ| ಎಸ್‌. ಎಲ್‌. ಭೈರಪ್ಪ ಮುಂಬಯಿ ಕನ್ನಡಿಗರ ಸಾಧನ ಮಂಟಪ ಉದ್ಘಾಟಿಸಿ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಅತಿಥಿಯಾಗಿ ಅಂಕಣಕಾರ ಎಸ್‌. ಷಡಕ್ಷರಿ ಆಗಮಿಸಲಿದ್ದು ಅಖೀಲ ಭಾರತ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ ನೆನಹೊತ್ತಿಗೆ ಬಿಡುಗಡೆಗೊಳಿಸಲಿದ್ದಾರೆ. ಸಮ್ಮೇಳನದಲ್ಲಿ ನಾಲ್ಕು ವಿಚಾರಗೋಷ್ಠಿಗಳು, ಕವಿಗೋಷ್ಠಿ ನಡೆಯಲಿದೆ. ಎರಡೂ ದಿನಗಳಲ್ಲೂ ವಿವಿಧ ಸಂಸ್ಥೆಗಳ ಕಲಾವಿದರು ನೃತ್ಯ, ಜನಪದ ಗಾಯನಗಳೊಂದಿಗೆ ವೈವಿಧ್ಯಮಯ ಸಾಂಸ್ಕೃತಿಕ  ಕಾರ್ಯಕ್ರಮ, ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿ ಯಕ್ಷಗಾನ ಪ್ರದರ್ಶಿಸಲಿದ್ದಾರೆ.  ಫೆ. 11 ರಂದು ಸಂಜೆ 5ರಿಂದ  ಸಮಾರೋಪ ಸಮಾರಂಭ ನಡೆಯಲಿದ್ದು,  ಮುಖ್ಯ ಅತಿಥಿಯಾಗಿ ಹಿರಿಯ ಸಾಹಿತಿ ಹಾಗೂ ಚಿಂತಕ ಪ್ರೊ| ಚಂದ್ರಶೇಖರ ಪಾಟೀಲ, ಅತಿಥಿ ಅಭ್ಯಾಗತರುಗಳಾಗಿ ಕನ್ನಡ ವಿಶ್ವವಿದ್ಯಾಲಯ ಹಂಪಿ ಇದರ ಕುಲಪತಿ ಡಾ| ಮಲ್ಲಿಕಾ ಘಂಟಿ, ಸಂಸ್ಕೃತಿ  ಚಿಂತಕ ಡಾ| ಎಂ. ಮೋಹನ್‌ ಆಳ್ವ ಮೂಡಬಿದ್ರೆ ಆಗಮಿಸಲಿದ್ದು, ಮಹಾನಗರದಲ್ಲಿನ ನಾಲ್ವರು ಕನ್ನಡಿಗ ಸಾಧಕರನ್ನು ಸಮ್ಮಾನಿಸಲಾಗುವುದು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಮ್ಮೇಳನ ಅಂತ್ಯವಾಗಲಿದೆ. ಆ ಪ್ರಯುಕ್ತ  ಮುಂಬಯಿವಾಸಿ ಕನ್ನಡಿಗರು ಅತ್ಯಾಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪತ್ರಿಕಾ ಹೇಳಿಕೆಯಲ್ಲಿ ಬಳಿಗಾರ್‌ ವಿನಂತಿಸಿದರು. ಬರುವ ಆಗಸ್ಟ್‌ನಲ್ಲಿ ಬೃಹನ್ಮುಂಬಯಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗುವುದು.  ಅದಕ್ಕಾಗಿ ಐದು ಲಕ್ಷ ರೂ. ಸಾಂಕೇತಿಕವಾಗಿ ಬಿಡುಗಡೆ ಮಾಡು ವುದಾಗಿ ಬಳಿಗಾರ್‌ ತಿಳಿಸಿದರು. ಇದು ಸಾಲದು ಆದರೆ ಮುಂಬಯಿ ಕನ್ನಡಿಗರಿಗೆ ದುಡಿªನ ಸಮಸ್ಯೆ ಇಲ್ಲ. ಆದರೆ ಈ ಸಮ್ಮೇಳನ ಮುಂಬಯಿಗರ ಮನ್ನಣೆ, ಗೌರವ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಬೃಹನ್ಮುಂಬಯಿ  ಕನ್ನಡ ಸಾಹಿತ್ಯ ಪರಿಷತ್ತು ಘಟಕ ಉದ್ಘಾಟನೆಯೇ ಒಂದು ದೊಡª ಸಂಭ್ರಮವಾಗಿದೆ  ಎಂದು ಬಳಿಗಾರ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೈಸೂರು ಅಸೋಸಿ ಯೇಶ‌ನ್‌ ಮುಂಬಯಿ ಇದರ ಪ್ರಧಾನ ಕಾರ್ಯದರ್ಶಿ ಡಾ| ಗಣಪತಿ ಶಂಕರಲಿಂಗ, ಡಾ| ಬಿ. ಆರ್‌. ಮಂಜುನಾಥ್‌, ಕೆ. ಮಂಜು ನಾಥಯ್ಯ ಉಪಸ್ಥಿತರಿದ್ದು ಸಮಾವೇಶದ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು. ವಿವಿಧ ಸಂಘ ಟನೆಗಳ ಪದಾಧಿಕಾರಿಗಳು, ಪತ್ರಕರ್ತರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.