ಶಿಕ್ಷಕರು ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯ ನಿರ್ವಹಿಸಿ
Team Udayavani, Feb 11, 2018, 12:25 PM IST
ಪಿರಿಯಾಪಟ್ಟಣ: ಶಿಕ್ಷಕರು ತಮ್ಮ ವೃತ್ತಿ ಧರ್ಮವನ್ನು ಗೌರವಿಸಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸನಿರ್ವಹಿಸಿದಾಗ ಮಾತ್ರ ಶೈಕ್ಷಣಿಕ ಪ್ರಗತಿ ಸಾಧ್ಯ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ತಿಳಿಸಿದರು. ಪಿರಿಯಾಪಟ್ಟಣ ತಾಲೂಕಿಗೆ ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಶಾಲೆಯತ್ತ ಮುಖಮಾಡಿರುವ ಪೋಷಕರು ಮತ್ತು ಮಕ್ಕಳನ್ನು ಮನವೊಲಿಸಿ ಸರ್ಕಾರಿ ಶಾಲೆಗಳನ್ನು ಸೇರುವಂತೆ ಮಾಡಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿಯೂ ಸಹ ಆಂಗ್ಲಮಾಧ್ಯಮದಲ್ಲಿ ಎಲ್‌ಕೆಜಿ, ಯೂಕೆಜಿ ಪ್ರಾರಂಭಿಸಲಾಗುವುದು. ಇದಕ್ಕೆ ಎಲ್ಲಾ ಶಿಕ್ಷಕರ ಮತ್ತು ಪೋಷಕರ ಸಹಕಾರ ಮುಖ್ಯವಾಗಿದೆ ಎಂದು ತಿಳಿಸಿದರು.
ಭವನ ಕೊರತೆ ನೀಗಿಸಿ: ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ದೇವರಾಜೇಗೌಡ ಮಾತನಾಡಿ, ಶಿಕ್ಷಕರು ಶಿಕ್ಷಣ ಇಲಾಖೆಯ ಪ್ರಗತಿಗೆ ಯಾವುದೇ ತೊಂದರೆ ಬಾರದಂತೆ ನಡೆದುಕೊಳ್ಳುತ್ತಿದ್ದೇವೆ. ತಾಲೂಕಿನಲ್ಲಿ ಶಿಕ್ಷಕರ ಸಮುದಾಯ ಭವನದ ಕೊರತೆ ಇದೆ. ಇದನ್ನು ನೀಗಿಸುವಲ್ಲಿ ಎಲ್ಲರೂ ಸಹಕಾರ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಕಿರಣ್‌ರಘುಪತಿ ಮಾತನಾಡಿದರು. ಇಸಿಒರಾದ ಯೋಗರಾಜ್, ಹರೀಶ್, ದೈಹಿಶಿಕ್ಷಣ ಪರಿವೀಕ್ಷಕ ಕೆ.ಎಸ್.ಮಹಾದೇವಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಗಾಯಿತ್ರಿ, ನಿರ್ದೇಶಕರಾದ ಎಚ್.ಕೆ.ಶಿವಮೂರ್ತಿ, ನಾಗಣ್ಣೇಗೌಡ, ಕುಮಾರಸ್ವಾಮಿ, ಖಜಾಂಜಿ ಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.