ಅಶುದ್ಧ ನೀರು ಸೇವನೆ: ಇಬ್ಬರು ಸಾವು, 45ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Team Udayavani, Feb 12, 2018, 6:20 AM IST
ಭದ್ರಾವತಿ: ಕಲುಷಿತ ನೀರು ಸೇವಿಸಿ ಅಪ್ಪ- ಮಗ ಮೃತಪಟ್ಟ ಘಟನೆ ಹೊಳೆಹೊನ್ನೂರು ಸಮೀಪದ ಮೈದೊಳಲಿನಲ್ಲಿ ಭಾನುವಾರ ಸಂಭವಿಸಿದೆ.
ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಒಂದೇ ಕುಟುಂಬದ ಶಿವಪ್ಪ (75) ಹನುಮಂತ (35) ಸಿದ್ದಮ್ಮ (30) ಮೂವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗ ಹನುಮಂತಪ್ಪ ಭಾನುವಾರ ಬೆಳಗ್ಗೆ ಮೃತಪಟ್ಟರೆ, ತಂದೆ ಶಿವಪ್ಪ ಮಧ್ಯಾಹ್ನ ಮೃತಪಟ್ಟರು.
ಮೈದೊಳಲು ಗ್ರಾಪಂನಿಂದ ನಲ್ಲಿಯಲ್ಲಿ ಸರಬರಾಜು ಮಾಡಿದ ಕಲುಷಿತ ನೀರು ಕುಡಿದು ಗ್ರಾಮದಲ್ಲಿ 45 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ವಿವಿಧ ಖಾಸಗಿ ಕ್ಲಿನಿಕ್‌ಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತೀವ್ರ ಅಸ್ವಸ್ಥರಾದ 13 ಜನರನ್ನು ಶಿವಮೊಗ್ಗದ ಮೆಗ್ಗಾನ್ ಮತ್ತು ಸುಬ್ಬಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಕಲುಷಿತ ನೀರಿನ ಸೇವನೆಯಿಂದ ಗ್ರಾಮದ ಕೆಲವರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿತ್ತು. ಅಲ್ಲಾದೇವರ ದೇವಸ್ಥಾನ ಹಿಂಭಾಗದ ಟ್ಯಾಂಕ್‌ನ ನೀರು ಬಳಸುತ್ತಿರುವ ನಿವಾಸಿಗಳು ಹೆಚ್ಚಾಗಿ ಅಸ್ವಸ್ಥಗೊಂಡಿದ್ದಾರೆ.
ಭಾನುವಾರ ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ನೀರಿನ ಸ್ಯಾಂಪಲ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ| ಹನುಮಂತಪ್ಪ ಮಾತನಾಡಿ, ಕೂಡಲೆ ನೀರಿನ ಓವರ್ ಟ್ಯಾಂಕ್‌ಗಳನ್ನು ಸ್ವತ್ಛಗೊಳಿಸಿ ಕ್ಲೋರಿನ್ ಹಾಕುವಂತೆ ಗ್ರಾಪಂ ಅಭಿವೃದ್ಧಿ ಅಧಿ ಕಾರಿಗೆ ತಿಳಿಸಿದರು. ಪ್ರಯೋಗಾಲಯದ ವರದಿ ಬರುವವರೆಗೆ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯಲು ನೀರು ಸರಬರಾಜು ಮಾಡುವಂತೆ ಆದೇಶಿಸಿದರು.
ಸ್ಥಳೀಯರ ಆಕ್ರೋಶ: ಗ್ರಾಪಂ ಸಿಬ್ಬಂದಿ ನೀರಿನ ಮೂಲಗಳನ್ನು ವರ್ಷವಾದರೂ ಸcತ್ಛಗೊಳಿಸುವುದಿಲ್ಲ. ಕಳೆದ ವರ್ಷ ಗ್ರಾಮದಲ್ಲಿ ವಾಂತಿ ಬೇಧಿಯಾದಾಗ ಸ್ವತ್ಛಗೊಳಿಸಿದ್ದು ಬಿಟ್ಟರೆ ಇಲ್ಲಿಯವರೆಗೆ ನೀರಿನ ಟ್ಯಾಂಕನ್ನು ಸ್ವತ್ಛಗೊಳಿಸಿಲ್ಲ. ವಾಂತಿ ಬೇಧಿಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆಸ್ಪತ್ರೆಯ ಖರ್ಚು ವೆಚ್ಚಗಳನ್ನು ಗ್ರಾಪಂ ಭರಿಸಬೇಕು. ಮೃತಪಟ್ಟವರಿಗೆ ಪರಿಹಾರ ನೀಡಬೇಕು ಎಂದು ಗ್ರಾಪಂ ಅ ಧಿಕಾರಿಗಳನ್ನು ಒತ್ತಾಯಿಸಿದರು.
ಗ್ರಾಮಸ್ಥರು ಇನ್ನೆರಡು ದಿನ ಟ್ಯಾಂಕ್‌ನ ನೀರು ಕುಡಿಯಲು ಬಳಸಬಾರದು, ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಬೇಧಿಯ ಸ್ಯಾಂಪಲ್ ಮತು ನೀರಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಆರೋಗ್ಯ ವ್ಯತ್ಯಯಕ್ಕೆ ಕಾರಣ ತಿಳಿಯುತ್ತದೆ ಎಂದು ಭದ್ರಾವತಿ ತಾಲೂಕು ವೈದ್ಯಾ ಧಿಕಾರಿ ಗುಡದ್ದಪ್ಪ ಕಸವಿ ಹೇಳಿದರು.
ತಾಪಂ ಸಭೆಯಲ್ಲಿ ವ್ಯಕ್ತವಾಗಿದ್ದ ಆಕ್ರೋಶ
ಫೆ. 9ರಂದು ತಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಗ್ರಾಮಾಂತರ ಪ್ರದೇಶಗಳ ಕೆಲವು ಭಾಗಗಗಳಲ್ಲಿ ಚಾನಲ್ ನೀರನ್ನು ಶುದ್ಧಗೊಳಿಸದೆ ಅಶುದ್ಧವಾದ ನೀರನ್ನು ಸರಬರಾಜು ಮಾಡುತ್ತಿರುವ ಬಗ್ಗೆ ನೀರಾವರಿ ಇಲಾಖೆ ಅ ಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಬಾನುವಾರ ಅಶುದ್ಧ ನೀರು ಸೇವನೆಯಿಂದ ಈ ಅವಘಡ ಸಂಭವಿಸಿರುವುದರಿಂದ ಸದಸ್ಯರ ಆರೋಪ ಸಾಬೀತಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.