ಕಲುಷಿತ ನೀರು ಸೇವಿಸಿ ಮೂವರ ಸಾವು 50 ಜನರು ಅಸ್ವಸ್ಥ
Team Udayavani, Feb 12, 2018, 8:19 AM IST
ಭದ್ರಾವತಿ : ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಸಂಭವಿಸಿದೆ.
ಮೃತರಲ್ಲಿ ಮೈದೊಳಲು ಗ್ರಾಮದ ನಿವಾಸಿಗಳಾದ ಹನುಮಂತಪ್ಪ (42) ಶಿವಪ್ಪ (75) ಪಂಚಾಕ್ಷರಿ (72) ಎಂದು ತಿಳಿದುಬಂದಿದೆ. ಗಂಭೀರವಾಗಿ ಅಸ್ವಸ್ಥಗೊಂಡ 9 ಜನರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉಳಿದವರಿಗೆ ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಡಾ.ಎಂ.ಲೋಕೇಶ್, ಜಿಲ್ಲಾ ಪಂಚಾಯತ್ ಸಿಇಓ ರಾಕೇಶ್ ಕುಮಾರ್, ಜಿಲ್ಲಾ ಅರೋಗ್ಯ ಅಧಿಕಾರಿ ಹನುಮಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸ್ಥಳೀಯರ ಆಕ್ರೋಶ: ಗ್ರಾಪಂ ಸಿಬ್ಬಂದಿ ನೀರಿನ ಮೂಲಗಳನ್ನು ವರ್ಷವಾದರೂ ಸcತ್ಛಗೊಳಿಸುವುದಿಲ್ಲ. ಕಳೆದ ವರ್ಷ ಗ್ರಾಮದಲ್ಲಿ ವಾಂತಿ ಬೇಧಿಯಾದಾಗ ಸ್ವತ್ಛಗೊಳಿಸಿದ್ದು ಬಿಟ್ಟರೆ ಇಲ್ಲಿಯವರೆಗೆ ನೀರಿನ ಟ್ಯಾಂಕನ್ನು ಸ್ವತ್ಛಗೊಳಿಸಿಲ್ಲ. ವಾಂತಿ ಬೇಧಿಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆಸ್ಪತ್ರೆಯ ಖರ್ಚು ವೆಚ್ಚಗಳನ್ನು ಗ್ರಾಪಂ ಭರಿಸಬೇಕು. ಮೃತಪಟ್ಟವರಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.