ನಾಡಿದ್ದಿಂದ ತೊಗರಿ ಖರೀದಿ ಶುರು
Team Udayavani, Feb 12, 2018, 10:25 AM IST
ಕಲಬುರಗಿ: ಬೆಂಬಲ ಬೆಲೆಯಲ್ಲಿ ಜಿಲ್ಲಾದ್ಯಂತ ಎರಡನೇ ಹಂತದ ತೊಗರಿ ಖರೀದಿ ಕಾರ್ಯ ಫೆ. 14ರಂದು ಶುರುವಾಗಲಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಸಹಕಾರಿ ಇಲಾಖೆ ಆಯುಕ್ತರು ಮತ್ತು ಸರ್ಕಾರದ ಕಾರ್ಯದರ್ಶಿಗಳು ಎರಡನೇ ಹಂತದ ತೊಗರಿ ಖರೀದಿಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯ ಸಹಕಾರ ಮಾರಾಟ ಮಂಡಳಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಬುಧವಾರದಿಂದ ಖರೀದಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದು, ಈಗಾಗಲೇ ಮೊದಲ ಹಂತದಲ್ಲಿ ರಾಜ್ಯಾದಾದ್ಯಂತ 16.69 ಲಕ್ಷ ಕ್ವಿಂಟಲ್ ಖರೀದಿಸಲಾಗಿದೆ. ಎರಡನೇ ಹಂತದಲ್ಲಿ 10 ಲಕ್ಷ ಕ್ವಿಂಟಲ್ ಖರೀದಿಗೆ ಕೇಂದ್ರ ಅನುಮತಿ ನೀಡಿದೆ.
ಕಡಲೆಗೂ ಗ್ರೀನ್ ಸಿಗ್ನಲ್: ಕಡಲೆ ಸಹ ಬೆಂಬಲ ಬೆಲೆಯಲ್ಲಿ ಖರೀದಿಸಲು ಸರ್ಕಾರ ಮುಂದಾಗಿದೆ. ಅದರಂತೆ ಜಿಲ್ಲಾದ್ಯಂತ
ಮೊದಲ ಹಂತವಾಗಿ 32 ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಹೋಬಳಿಗೊಂದರಂತೆ ಈಗ ನಿರ್ವಹಿಸುವ ತೊಗರಿ ಖರೀದಿ ಕೇಂದ್ರಗಳಲ್ಲಿಯೇ ಕಡಲೆ ಖರೀದಿ ಪ್ರಕ್ರಿಯೆ ನಡೆಯಲಿದೆ. ಕ್ವಿಂಟಲ್‌ಗೆ 4400 ರೂ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತದೆ. ಹೀಗಾಗಿ ರೈತರು ತಮಗೆ ಅನುಕೂಲವಾಗುವ ಖರೀದಿ ಕೇಂದ್ರದಲ್ಲಿ ಫೆ. 12ರಿಂದ ಆಧಾರ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಪಹಣಿ ಪತ್ರ, ಬೆಳೆ ದೃಢಿಕರಣದೊಂದಿಗೆ ಹೆಸರು ನೋಂದಾಯಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋರಾಟ ಹಿಂದಕ್ಕೆ: ತೊಗರಿ ಖರೀದಿಗೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಜ. 12ರಂದು ಜೇವರ್ಗಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬರಲು ಅಡ್ಡಿಪಡಿಸುವುದಾಗಿ ಹೋರಾಟದ ಎಚ್ಚರಿಕೆ ನೀಡಿದ್ದ ಜಿಲ್ಲಾ ರೈತ ಹೋರಾಟ ಸಮಿತಿ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ ಅವರು ಈಗ ಹೋರಾಟ ಹಿಂತೆಗೆದುಕೊಂಡಿದ್ದಾರೆ. ಎರಡನೇ ಹಂತದ ತೊಗರಿ ಖರೀದಿ ಆರಂಭಿಸದಿದ್ದರೆ ರಾಹುಲ್ ಗಾಂಧಿ ಅವರಿಗೆ ಜೇವರ್ಗಿಗಿಗೆ ಬಿಡುವುದಿಲ್ಲ ಎಂದು ಕೇದಾರಲಿಂಗಯ್ಯ ಎಚ್ಚರಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.