ಉದ್ಯೋಗ ಖಾತ್ರಿ ನೀಡುವವರಿಗೆ ಓಟು
Team Udayavani, Feb 12, 2018, 10:57 AM IST
ರಾಮನಗರ: ಹಣ, ಜಾತಿ, ಧರ್ಮದ ಆಮಿಷ ಬೇಡ. ಸುಭದ್ರ ಉದ್ಯೋಗ ಖಾತ್ರಿ ಮಾಡುವ ಯುವಜನರ ಪ್ರಣಾಳಿಕೆ ಒಪ್ಪಿಕೊಳ್ಳುವವರಿಗೆ ಮಾತ್ರ ನಮ್ಮ ಓಟು ಎಂದು ರಾಮನಗರದ ಯುವಕರು ಪ್ರತಿಜ್ಞೆ ಮಾಡಿದ್ದಾರೆ.
“ಉದ್ಯೋಗಕ್ಕಾಗಿ ಯುವಜನರು’ ಸಂಘಟನೆಯು ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ, ಸಂಘಟ ನೆಯ ಸ್ಪೂರ್ತಿ ಮಾತನಾಡಿ, ಉದ್ಯೋಗ ಹೊಂದುವ ಹಕ್ಕು ಗಳಿಸಲು ಸಾಧ್ಯವಾಗುವ ರೀತಿಯಲ್ಲಿ ರಾಜಕಾರಣಿಗಳು ನೀತಿ ರೂಪಿಸಬೇಕು. ಎಂದರು.
2018ರ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಉದ್ಯೋಗ ಸೃಷ್ಟಿ ಮತ್ತು ಉದ್ಯೋಗ ಭದ್ರತೆಯ ವಿಚಾರವನ್ನು ತಮ್ಮ ಚುನಾವಣಾ ಪ್ರಣಾಳಿಕೆಯ ಪ್ರಧಾನ ವಿಚಾರವನ್ನಾಗಿಸಿಕೊಳ್ಳಬೇಕು. ಸಮಾನ ವೇತನದ ಹಕ್ಕನ್ನು ಜಾರಿಗೊಳಿಸುವ, ಉದ್ಯಮ ಶೀಲತೆ ಪ್ರೋತ್ಸಾಹಿಸುವ, ಕೌಶಲ್ಯ ಭಾರತದ ಜೊತೆಗೆ ಉದ್ಯೋಗಸ್ಥ ಭಾರತ ಸೃಷ್ಟಿ, ಸ್ಥಳೀಯರಿಗೆ ಉದ್ಯೋಗ, ಶಿಕ್ಷಣ ಕ್ರಮದ ಸುಧಾರಣೆಯ ಅಂಶಗಳು ಪ್ರಣಾಳಿಕೆಯಲ್ಲಿರಬೇಕು ಎಂದು ಆಗ್ರಹಿಸಿದರು.
ಫೆ.18ರಂದು ಯುವ ಅಧಿವೇಶನ: ಸೋಮವಾರ ತಮ್ಮ ಸಂಘಟನೆ ಸಿದ್ದಪಡಿಸಿರುವ ಪ್ರಣಾಳಿಕೆಯ ವಿಸ್ತೃತ ರೂಪವನ್ನು 3 ಪ್ರಮುಖ ರಾಜಕೀಯ ಪಕ್ಷಗಳಿಗೆ ನೀಡುವುದಾಗಿ ತಿಳಿಸಿದರು. ಇದೇ ಫೆ.18ರಂದು ಬೆಂಗಳೂರಿನಲ್ಲಿ ಯುವ ಅಧಿವೇಶನವನ್ನು ಆಯೋಜಸಿದ್ದು, ರಾಜಕೀಯ ಪಕ್ಷಗಳ ಮುಖಂಡರು ಅಲ್ಲಿಗೆ ಬಂದು ಅವರ ಪ್ರತಿಕ್ರಿಯೆ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.