ವಿದ್ಯಾರ್ಥಿಗಳು ಸಮಾಜಕ್ಕೆ ಕೊಡುಗೆ ನೀಡುವಂತಾಗಲಿ
Team Udayavani, Feb 12, 2018, 4:22 PM IST
ಕನಕಪುರ: ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ರೂಪುಗೊಂಡು ಸಮಾಜಕ್ಕೆ ತಮ್ಮದೇ ಆದ ಸೇವೆ ಮತ್ತು ಕೊಡುಗೆಯನ್ನು ನೀಡುವಂತಾಗಬೇಕೆಂದು ಮಾಜಿ ಜಿಪಂ ಸದಸ್ಯ ಹಾಗೂ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಡಿ.ಎಸ್.ಭುಜಂಗಯ್ಯ ಹೇಳಿದರು.
ತಾಲೂಕಿ ಹಾರೋಹಳ್ಳಿಯ ವಿದ್ಯಾಸಂಸ್ಥೆ, ಗ್ರಾಮಾಂತರ ಪ್ರೌಢಶಾಲೆ ಮತ್ತು ಕಸ್ತೂರಿ ಬಾ ಶಾಲೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ವಿವಿಧ ಪ್ರತಿಭೆಗಳಿದ್ದು ಅವುಗಳನ್ನು ಸಮರ್ಪಕವಾಗಿ ಶಿಕ್ಷಕರು ಬಳಸಿಕೊಂಡು ಅವರಿಗೆ ಉತ್ತಮ ಶಿಕ್ಷಣವನ್ನು ನೀಡಿದಾಗ ಅವರು ಮತ್ತಷ್ಟು ಸೇವೆಯನ್ನು ಸಲ್ಲಿಸುವುದರ ಜೊತೆಗೆ ಇತರರಿಗೆ ಮಾದರಿಯಾಗುತ್ತಾರೆ ಎಂದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಇನ್ನೂ ಹೆಚ್ಚು ಫಲಿತಾಂಶ ಪಡೆಯುವಂತಾಗಬೇಕು. ಜೊತೆಗೆ ಸಜ್ಜನ ನಾಗರಿಕರನ್ನು ರೂಪಿಸುವಂತಾಗಬೇಕು. ಇಂತಹ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಶ್ರಮ ವಹಿಸಬೇಕು. ಇದಕ್ಕೆ ಪೂರಕವಾಗಿ ವಿದ್ಯಾಸಂಸ್ಥೆ ಶಿಕ್ಷಕರು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.
ಬಿಳಿಗಿರಿ ರಂಗನಬೆಟ್ಟದ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಕಾರ್ಯದರ್ಶಿ ಡಾ.ಎಚ್.ಸುದರ್ಶನ್ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕಠಿಣ ಶ್ರಮ ಮತ್ತು ಅಧ್ಯಯನ ಅಗತ್ಯವಾಗಿದೆ.
ಹಾಗಾದಾಗ ಮಾತ್ರ ಅವರ ಕನಸು ನನಸಾಗಲು ಸಾಧ್ಯವಾಗುತ್ತದೆ. ಉನ್ನತ ವ್ಯಾಸಂಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಅಧ್ಯಯನಶೀಲರಾಗಿ ವಿದ್ಯಾವಂತರಾಗುವುದಲ್ಲದೆ ಸಮಾಜಕ್ಕೆ ಪೂರಕವಾಗುವಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಸತøಜೆಗಳಾಗಿ ರೂಪುಗೊಳ್ಳಲು ತಿಳಿಸಿದರು.
ಆಡಳಿತ ಮಂಡಳಿಯ ಸಿ.ಎಂ.ಮಹದೇವಯ್ಯ, ಖಜಾಂಚಿ ಜಗದೀಶ್‌ಗೌಡ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು. ಡಾ.ಎಚ್.ಸುದರ್ಶನ್ ಅವರನ್ನು ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Road Mishap: ಬಸ್-ಕಾರು ನಡುವೆ ಡಿಕ್ಕಿ; ಮೂವರ ಸಾವು
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.