ಬೆಂಗಳೂರಿಗರಿಗೆ ಶರಾವತಿ ನೀರು
Team Udayavani, Feb 13, 2018, 7:00 AM IST
ಬೆಂಗಳೂರು: ನಗರ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಂತಿದೆ. ಇದೀಗ ದೂರದ ಶರಾವತಿ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ವಿಚಾರ ಪುನಃ ಮುನ್ನೆಲೆಗೆ ಬಂದಿದೆ.
ಕೇಪ್‌ಟೌನ್‌ನಲ್ಲಿ ಕುಡಿಯುವ ನೀರಿನ ಕ್ಷಾಮ ಎದುರಾದ ರೀತಿಯಲ್ಲೇ ಐಟಿ ಹಬ್ ಎನಿಸಿಕೊಂಡಿರುವ ಬೆಂಗಳೂರಿನಲ್ಲಿಯೂ ಕುಡಿಯುವ ನೀರಿಗಾಗಿ ಪರದಾಡಬೇಕಾದ ಸ್ಥಿತಿ ನಿರ್ಮಾಣ ಆಗಲಿದೆ ಎಂದು ಪ್ರತಿಷ್ಠಿತ ಬಿಬಿಸಿ ವರದಿ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಶರಾವತಿಯತ್ತ ಕಣ್ಣು ಹೊರಳಿಸಿದೆ. “ಬೆಂಗಳೂರಿಗೆ ಶರಾವತಿ ನದಿಯಿಂದ ನೀರು ತರುವ ಆಲೋಚನೆ ಸರ್ಕಾರದ ಮುಂದಿದೆ’ ಎಂದು ಸ್ವತಃ ಬೆಂಗಳೂರು ಅಭಿವೃದ್ದಿ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೋಮವಾರ ಜೆ.ಜೆ.ಆರ್.ನಗರ ವಾರ್ಡ್‌ನ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಾವೇರಿ ಮಾತೆಯ ಪುತ್ಥಳಿ ಮತ್ತು ಅಂತಾರಾಷ್ಟ್ರೀಯ ಮಟ್ಟದ ಹೊರಾಂಗಣ ವ್ಯಾಯಾಮ ಉಪಕರಣಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿ, ಶರಾವತಿ ನದಿ ನೀರಿನ ವಿಷಯ ಪ್ರಸ್ತಾಪಿಸಿದರು.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ವ್ಯಾಪ್ತಿಯಲ್ಲಿ ಹರಿಯುತ್ತಿರುವ ಶರಾವತಿ ನದಿ ನೀರು ವಿದ್ಯುತ್ ಬಳಕೆ ಮಾಡಿದ ನಂತರ ಹಾಗೇ ಸಮುದ್ರದ ಪಾಲಾಗುತ್ತಿದೆ. ಇದನ್ನು ಬೆಂಗಳೂರು ನಗರಕ್ಕೆ ತಂದು ಮತ್ತೆ ಮರುಬಳಕೆ ಮಾಡುವ ಆಲೋಚನೆ ಇದೆ. ಅಲ್ಲದೆ ನೀರಿನ
ಸಮಸ್ಯೆಯನ್ನು ಎದುರಿಸುತ್ತಿರುವ ಹಲವು ಪ್ರದೇಶಗಳಿಗೆ ಶರಾವತಿ ನದಿ ನೀರು ನೀಡುವ ಕುರಿತು ಚರ್ಚೆ ನಡೆದಿದೆ ಎಂದು ಹೇಳಿದರು.
ಈಗಾಗಲೇ ಗುಜರಾತ್ ಮತ್ತು ರಾಜಸ್ಥಾನಲ್ಲಿ ನರ್ಮದಾ ನದಿಯ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದೇ ರೀತಿಯ ಪ್ರಯತ್ನ ಕೂಡ ಇಲ್ಲಿಯೂ ನಡೆದಿದೆ. ಇದರ ಜೊತೆ ಸಮುದ್ರದ ಉಪ್ಪು ನೀರನ್ನು ಶುದ್ಧೀಕರಿಸಿ ಕುಡಿಯಲು ಬಳಕೆ ಮಾಡುವ ಉದ್ದೇಶ ಸರ್ಕಾರದ್ದಾಗಿದೆ ಎಂದು ತಿಳಿಸಿದರು.
ಬಿಬಿಸಿ ವರದಿಯಲ್ಲಿ ಹುರುಳಿಲ್ಲ: ಬೆಂಗಳೂರು ನಗರಕ್ಕೆ ಮುಂದಿನ ದಿನದಲ್ಲಿ ಕುಡಿಯುವ ನೀರಿಗೆ ತೀವ್ರ ಬರ ಬರಲಿದೆ ಎಂದು ಬಿಬಿಸಿ
ವರದಿ ಮಾಡಿದೆ ಎಂದು ಹೇಳಿದ ಸಚಿವರು, ಈ ವರದಿಯಲ್ಲಿ ಯಾವುದೇ ಸತ್ಯಾಂಶ ಇಲ್ಲ. ಕುಡಿಯುವ ನೀರಿಗಾಗಿಯೇ ಸರ್ಕಾರ
ಮುಂಜಾಗೃತವಾಗಿ ಸಾಕಷ್ಟು ಕ್ರಮವನ್ನು ಕೈಗೊಂಡಿದೆ. ಇದಕ್ಕಾಗಿಯೇ ಜಲಮಂಡಳಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ
ಮಾಡಿದೆ ಎಂದರು.
ಏನಿದು ಶರಾವತಿ ಯೋಜನೆ..?: ಸದ್ಯ ಬೆಂಗಳೂರು ನಗರಕ್ಕೆ ನೂರು ಕಿ.ಮೀ ದೂರದ ಕಾವೇರಿ ನದಿಯಿಂದ ಕುಡಿಯುವ ನೀರು ಬರುತ್ತಿದೆ. ಈಗ ಸುಮಾರು 400 ಕಿ.ಮೀ ದೂರದ ಶರಾವತಿ ನದಿಯಿಂದ ಬೆಂಗಳೂರಿಗರಿಗೆ ನೀರು ತಂದು ಕೊಡಲು ಸರ್ಕಾರ ಮುಂದಾಗಿದೆ. ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ಶರಾವತಿ ನದಿಯಿಂದ ಕನಿಷ್ಠ 10 ಟಿಎಂಸಿ ನೀರನ್ನು ಬೆಂಗಳೂರಿಗೆ ತರಬಹುದು ಎಂದು ಜಲಮಂಡಳಿ ಮಾಜಿ ಅಧ್ಯಕ್ಷ ಬಿ.ಎನ್. ತ್ಯಾಗರಾಜ್ ನೇತೃತ್ವದ ಸಮಿತಿ 2016ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಒಂದು ವೇಳೆ ಸರ್ಕಾರದ ಆಲೋಚನೆಯಂತೆ ತ್ಯಾಗರಾಜ್ ಸಮಿತಿ ವರದಿ ಜಾರಿಗೆ ಬಂದಲ್ಲಿ, ಬೆಂಗಳೂರು ನಗರಕ್ಕಷ್ಟೇ ಅಲ್ಲ, ಮೈಸೂರು ಸೇರಿದಂತೆ ಬಯಲುಸೀಮೆಯ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ನೀರು ಒದಗಿಸಬಹುದು. ಪಶ್ಚಿಮಘಟ್ಟದಲ್ಲಿ ಬರುವ ಲಿಂಗನಮಕ್ಕಿ ಅತಿದೊಡ್ಡ ಜಲಾಶಯವಾಗಿದ್ದು, 151 ಟಿಎಂಸಿ ನೀರು ಸಂಗ್ರಹವಾಗುತ್ತದೆ. ಪ್ರತಿ ವರ್ಷ 181 ಟಿಎಂಸಿಯಷ್ಟು ಒಳಹರಿವು ಇರುತ್ತದೆ. ಲಿಂಗನಮಕ್ಕಿ ನೀರನ್ನು ತಂದರೆ ಸಂಪೂರ್ಣ ಬಿಬಿಎಂಪಿ ಪ್ರದೇಶ ಸೇರಿ ಚಿತ್ರದುರ್ಗ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ನೀರು ಒದಗಿಸಬಹುದು ಎಂದು ತ್ಯಾಗರಾಜ್ ಸಮಿತಿ ಹೇಳಿತ್ತು. ತ್ಯಾಗರಾಜ್ ಸಮಿತಿ ವರದಿಯ ಸಾಧಕ-ಬಾಧಕಗಳ ಜೊತೆಗೆ ಮೇಕೆದಾಟು, ಎತ್ತಿನಹೊಳೆ ಯೋಜನೆಗಳಿಂದಲೂ ಎಷ್ಟೆಷ್ಟು ನೀರು ಲಭ್ಯವಾಗುತ್ತದೆ ಎಂಬುದನ್ನು ಪರಿಶೀಲಿಸಲು ಸರ್ಕಾರ ತಜ್ಞರ ಸಮಿತಿಯೊಂದನ್ನು ರಚಿಸಿತ್ತು.
ಲಿಂಗನಮಕ್ಕಿ ಜಲಾಶಯದಿಂದ ಅರ್ಕಾವತಿ ನದಿಪಾತ್ರದ ತಿಪ್ಪಗೊಂಡನಹಳ್ಳಿ ಜಲಾನಯನ ಪ್ರದೇಶಕ್ಕೆ ನೀರು ತರಬಹುದು ಎಂದು
ತ್ಯಾಗರಾಜ್ ಸಮಿತಿ ಪ್ರಸ್ತಾಪಿಸಿತ್ತು. ಶರಾವತಿ ನದಿಯಿಂದ ಮೊದಲು ಪೈಪ್‌ಲೈನ್ ಮೂಲಕ ಹಾಸನದ ಯಗಚಿ ಆಣೆಕಟ್ಟೆಗೆ ನೀರು ಎತ್ತುವಳಿ ಮಾಡಬೇಕು. ಮುಂದೆ ಅದನ್ನು ಇಳಿಜಾರು ಭೂಪ್ರದೇಶದ ಮೂಲಕ ತಿಪ್ಪಗೊಂಡನಹಳ್ಳಿ ಜಲಾನಯನಕ್ಕೆ ಹರಿಸಬೇಕು ಎಂದು ವರದಿಯಲ್ಲಿ ವಿವರಿಸಲಾಗಿತ್ತು. ಅದರಂತೆ, ಜಲಮಂಡಳಿ ತಿಪ್ಪಗೊಂಡನಹಳ್ಳಿಯಿಂದ ಬೆಂಗಳೂರು ನಗರಕ್ಕೆ ಪೈಪ್‌ಲೈನ್ ಸಂಪರ್ಕ ಕಲ್ಪಿಸಿದೆ.
ನೆರೆಯ ರಾಜ್ಯಗಳಲ್ಲಿ ಹರಿದು ಹೋಗುವ ನದಿಗಳಿಂದ ನೀರು ಪಡೆದುಕೊಳ್ಳಬೇಕಾದರೆ ಅನೇಕ ಸಂದರ್ಭಗಳಲ್ಲಿ ಗಡಿ ಮತ್ತು ಕಾನೂನು ಸಮಸ್ಯೆ ಎದುರಾಗುತ್ತದೆ. ಸದ್ಯಕ್ಕೆ ಮೇಕೆದಾಟು ಯೋಜನೆ ಇದಕ್ಕೆ ಉದಾಹರಣೆ. ಆದರೆ, ಶರಾವತಿ ನದಿ ನಮ್ಮಲ್ಲೇ ಹುಟ್ಟಿ, ನಮ್ಮಲೇ ಸಮುದ್ರ ಸೇರುತ್ತದೆ. ಹೀಗಾಗಿ ಇದಕ್ಕೆ ಯಾವ ವಿವಾದವೂ ಇಲ್ಲ. ಗಡಿ ಸಮಸ್ಯೆಯೂ ವಿದ್ಯುತ್ ಉತ್ಪಾದನೆಗಷ್ಟೇ
ಸೀಮಿತವಾಗಿರುವ ಈ ನೀರನ್ನು ಕುಡಿಯುವುದಕ್ಕೂ ಬಳಸಲು ಆಲೋಚಿಸಬಹುದು. ಕನಿಷ್ಠ 10 ಟಿಎಂಸಿ ಅಡಿ ನೀರನ್ನು ಮಳೆ ಬಂದಾಗ ಲಿಫ್ಟ್ ಮಾಡಿದರೂ ಎಷ್ಟೊ ಅನುಕೂಲ ಆಗುತ್ತದೆ. ಇದರ ಸಾಧಕ ಬಾಧಕಗಳ ಬಗ್ಗೆ ತಜ್ಞರು ಪರಿಶೀಲಿಸಲಿದ್ದಾರೆ. ಅದರ
ನಂತರವೇ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕು ಅನ್ನುವುದು ಸರ್ಕಾರದ ನಿಲುವು ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.