ಕಾರ್ಯಕರ್ತರ ಹತ್ಯೆ ಖಂಡಿಸಿ ಮಾ.3ರಿಂದ ಬಿಜೆಪಿ ಪಾದಯಾತ್ರೆ
Team Udayavani, Feb 13, 2018, 8:20 AM IST
ಬೆಂಗಳೂರು: ಕರಾವಳಿಯಲ್ಲಿ ಹಿಂದೂ ವೋಟ್ ಬ್ಯಾಂಕನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಖಂಡಿಸಿ ಕೊಡಗು ಮತ್ತು ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ಬಿಜೆಪಿ ಮಾ. 3ರಿಂದ 6ರವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದೆ.
ಮಾ.3ರಿಂದ ಕೊಡಗು ಜಿಲ್ಲೆಯ ಕುಶಾಲನಗರ ಮತ್ತು ಉತ್ತರ ಕನ್ನಡ ಜಿಲ್ಲೆಯ ಕುಮಟಾದಿಂದ ಪಾದಯಾತ್ರೆ ಹೊರಡಲಿದ್ದು, ಮಾ.
6ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ತಲುಪಲಿದೆ. ಅಲ್ಲಿ ಬೃಹತ್ಸಮಾವೇಶ ನಡೆಯಲಿದ್ದು, ಉತ್ತರ ಪ್ರದೇಶ ಸಿಎಂಯೋಗಿ
ಆದಿತ್ಯನಾಥ್ ಪಾಲ್ಗೊಳ್ಳುತ್ತಾರೆ.
ಈ ಕುರಿತು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್, ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ರಾಜ್ಯಾಧ್ಯಕ್ಷ ಬಿ.ಎಸ್
.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಚುನಾವಣಾ ಸಿದಟಛಿತಾ ಸಭೆಯಲ್ಲಿ ಪಾದಯಾತ್ರೆಯ ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ
ಹತ್ಯಾ ಸರಣಿಗಳು ಮುಂದುವರಿದಿದೆ. ಹೀಗಾಗಿ ಮೊದಲ ಹತ್ಯೆ ನಡೆದ ಕೊಡಗು ಜಿಲ್ಲೆಯ ಕುಶಾನಗರದಿಂದ ಮತ್ತು ಪರೇಶ್ ಮೇಸ್ತಾ
ಹತ್ಯೆ ನಡೆದ ಹೊನ್ನಾವರ ಸಮೀಪದ ಕುಮಟಾದಿಂದ ಮಾ. 3ರಂದು ಪಾದಯಾತ್ರೆ ಹೊರಟು ದೀಪಕ್ ರಾವ್ ಹತ್ಯೆ ನಡೆದ ಸುರತ್ಕಲ್ನಲ್ಲಿ (ಕಾಟಿಪಳ್ಳ) ಮಾ. 6ರಂದು ಪಾದಯಾತ್ರೆ ಅಂತಿಮಗೊಳಿಸಲು ಮತ್ತು ಅಂದು ಸುರತ್ಕಲ್ನಲ್ಲಿ ಹಿಂದೂ
ಕಾರ್ಯಕರ್ತರ ಹತ್ಯೆ ಖಂಡಿಸಿ ಬೃಹತ್ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಿ ಅವರಿಂದ ಭಾಷಣ ಮಾಡಿಸುವ ಮೂಲಕ ಕರಾವಳಿ ಮತ್ತು
ಮಲೆನಾಡು ಭಾಗದಲ್ಲಿ ಹಿಂದೂ ಮತಬ್ಯಾಂಕ್ ಅನ್ನು ಮತ್ತಷ್ಟು ಗಟ್ಟಿಗೊಳಿಸಲು ಬಿಜೆಪಿ ಮುಂದಾಗಿದೆ.
ಪ್ರಚಾರ ಚುರುಕುಗೊಳಿಸಲು ನಿರ್ಧಾರ: ಇದೇ ವೇಳೆ ಮುಂಬರುವ ವಿಧಾನಸಭೆ ಚುನಾವಣೆಗೆ ಪ್ರಚಾರ ಚುರುಕುಗೊಳಿಸುವ ಕುರಿತೂ ಸಭೆಯಲ್ಲಿ ಚರ್ಚಿಸಲಾಗಿದೆ. ಪರಿವರ್ತನಾ ಯಾತ್ರೆ ಸಮಾರೋಪಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಚುನಾವಣಾ ರಣಕಹಳೆ ಮೊಳಗಿಸಿದ್ದು, ಇದರ ಬಿಸಿ ಆರುವ ಮುನ್ನವೇ ಜನರ ಬಳಿ ತಲುಪಿ ರಾಜ್ಯ ಸರ್ಕಾರದ ವೈಫಲ್ಯ ಮತ್ತು ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಲು ಕಾರ್ಯಕರ್ತರನ್ನು ಸಜ್ಜುಗೊಳಿಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ. ಜತೆಗೆ ಮುಂಬರುವ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಾಧ್ಯವಾದಷ್ಟು ಹೆಚ್ಚು ಬಾರಿ ಆಹ್ವಾನಿಸಲು ಕೂಡ ನಿರ್ಧರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.