19ಕ್ಕೆ ಮೈಸೂರಲ್ಲಿ ಬಿಜೆಪಿ ಸಮಾವೇಶ: ಪ್ರಧಾನಿ ಭಾಗಿ
Team Udayavani, Feb 14, 2018, 8:26 AM IST
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲೇ ಮುಂಬರುವ ವಿಧಾನಸಭೆ ಚುನಾವಣೆಗೆ
ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ರಣಕಹಳೆ ಮೊಳಗಿಸಲಿದ್ದಾರೆ. ಫೆ.19ರಂದು ಮೈಸೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ, ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಅಂದು ಮಧ್ಯಾಹ್ನ 2.30ಕ್ಕೆ ಬಿಜೆಪಿಯ ಬೃಹತ್ ಸಮಾವೇಶದಲ್ಲಿ
ಭಾಷಣ ಮಾಡಲಿದ್ದಾರೆ.
ಸಮಾವೇಶದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಸಿದ್ಧತೆ ಆರಂಭಗೊಂಡಿದ್ದು, ಸಮಾವೇಶದ ಯಶಸ್ಸಿಗಾಗಿ ಮಂಗಳವಾರ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ ಮುಖಂಡರು ಭೂಮಿಪೂಜೆ ನೆರವೇರಿಸಿದರು. ಬಿಜೆಪಿ ರಾಜ್ಯ ಪ್ರಧಾನ
ಕಾರ್ಯದರ್ಶಿ ಅರವಿಂದ ಲಿಂಬಾವಳಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಸಮಾವೇಶದ ಸಿದ್ಧತೆಗಳಿಗೆ ಚಾಲನೆ ನೀಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ ಲಿಂಬಾವಳಿ, ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಪ್ರಧಾನಿ ಮೋದಿ ಅವರು ಫೆ.19ರಂದು ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಸಂದ¸ìದಲ್ಲಿ ಮೈಸೂರಿನ ಮಹಾರಾಜ ಕಾಲೇಜು
ಮೈದಾನದಲ್ಲಿ ಬಿಜೆಪಿ ಸಮಾವೇಶ ಹಮ್ಮಿಕೊಂಡಿದ್ದು, ಮೈಸೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಅಂದಾಜು 1.50 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಪ್ರಧಾನ ಮಂತ್ರಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಪೂರ್ವಭಾವಿ ಸಭೆ: ಪ್ರಧಾನಿ ಮೋದಿ ಅವರ ಮೈಸೂರು ಪ್ರವಾಸದ ಹಿನ್ನೆಲೆಯಲ್ಲಿ ಬಿಜೆಪಿ ಸಮಾವೇಶವನ್ನು ಯಶಸ್ವಿಗೊಳಿಸುವ ದೃಷ್ಟಿ ಯಿಂದ ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರು ನಗರದ ಪ್ರಸಿಡೆಂಟ್ ಹೋಟೆಲ್ನಲ್ಲಿ ಪ್ರಮುಖ ಮುಖಂಡರ ಸಭೆ ನಡೆಸಿ ಜವಾಬ್ದಾರಿ ಹಂಚಿಕೆ ಮಾಡಿದರು. ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಮಾವೇಶದ ಸಿದ್ಧತೆ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರಿಗೆ ಸಲಹೆ-ಸೂಚನೆಗಳನ್ನು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು
Canada: ವಾಲ್ಮಾರ್ಟ್ ಓವನ್ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Mangaluru: ರಾಜ್ಯದ 2ನೇ ಐಟಿ ಕೇಂದ್ರವಾಗಿ ಅಭಿವೃದ್ಧಿಗೆ ಅವಕಾಶ ಇದ್ದರೂ ಆದ್ಯತೆ ನೀಡದ ಸರಕಾರ
Lockdown Days: ಲಾಕ್ಡೌನ್ ಎಂಬ ದಪ್ಪಕ್ಷರದಲ್ಲಿ ಬರೆದ ಇತಿಹಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.