ಸಿಎಂ ಉದ್ಘಾಟಿಸಿದ್ದ ಕಲ್ಲು ಗಣಿಗಾರಿಕೆ: ಲೋಕಾ ತನಿಖೆಗೆ


Team Udayavani, Feb 14, 2018, 8:31 AM IST

m-12.jpg

ಮಂಡ್ಯ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಮುಖ್ಯಮಂತ್ರಿಗಳ ವಿರುದ್ಧದ ಪ್ರಕರಣವೊಂದನ್ನು ಸರ್ಕಾರವೇ ಲೋಕಾಯುಕ್ತ ತನಿಖೆಗೆ ಒಪ್ಪಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮೈಸೂರು ಮಹಾರಾಜರಿಗೆ ಸೇರಿದ ಖಾಸಗಿ ಆಸ್ತಿ  ಯನ್ನು ಕಬಳಿಸಲು ಹಾಗೂ ಕಳ್ಳತನದಿಂದ ಗಣಿಗಾರಿಕೆ ನಡೆಸುತ್ತಿರುವ ವ್ಯಕ್ತಿಗಳಿಗೆ ಅಧಿಕಾರ ದುರುಪಯೋಗ ಪಡಿಸಿಕೊಂಡು ನೆರವಾಗುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್‌ಟಿಐ ಕಾರ್ಯಕರ್ತ
ಕೆ.ಆರ್‌.ರವೀಂದ್ರ ರಾಜ್ಯಪಾಲರಿಗೆ 2017ರ ಸೆ.18ರಂದು ದೂರು ನೀಡಿದ್ದರು. ರಾಜ್ಯಪಾಲರ ನಿರ್ದೇಶನದಂತೆ ಸರ್ಕಾರದ ಅಧೀನ ಕಾರ್ಯದರ್ಶಿ ರಾಜಮ್ಮ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು 2018ರ ಜನವರಿ 23ರಂದು ಲೋಕಾಯುಕ್ತ ಸಂಸ್ಥೆಯ ತನಿಖೆಗೆ ಒಪ್ಪಿಸಿದ್ದಾರೆ.

ಪಾಂಡವಪುರ ತಾಲೂಕು ಬೇಬಿ ಬೆಟ್ಟದ ಕಾವಲು ಸರ್ವೇ ನಂ.1ರ 1623.07 ಎಕರೆ ಮೈಸೂರು ಮಹಾರಾಜರಿಗೆ ಸೇರಿದ ಖಾಸಗಿ ಸ್ವತ್ತು. ಸರ್ಕಾರದ ದಾಖಲೆಗಳನ್ನು ತಿದ್ದುಪಡಿ ಮಾಡಿ ಸರ್ಕಾರಿ ಎಂದು ಬರೆದುಕೊಂಡಿರುವುದು ಜಾಗವನ್ನು ಬಳಿಸುವ  ಹುನ್ನಾರವಾಗಿದೆ ಎಂದು ರವೀಂದ್ರ ಆರೋಪಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು 2010ರಲ್ಲಿ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಬಿ.ಎಂ. ನಟರಾಜು ಒಡೆತನದ ಯತಿನ್‌ ಸ್ಟೋನ್‌ ಕ್ರಷರ್ ಹಾಗೂ ಕಲ್ಲು ಗಣಿಗಾರಿಕೆ ಉದ್ಘಾಟಿಸಿ ಅಕ್ರಮ ಕಲ್ಲು
ಗಣಿಗಾರಿಕೆಗೆ ಕುಮ್ಮಕ್ಕು ನೀಡಿದ್ದಾರೆ. ಪ್ರತಿಪಕ್ಷ ನಾಯಕರಾಗಿ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರೆಂಬ ಆರೋಪ ಕೇಳಿಬಂದಿತ್ತು.

ಇಲ್ಲಿನ ಕಲ್ಲು ಗಣಿ ಸಂಪತ್ತನ್ನು ನೋಡಿದ್ದ ಸಿಎಂ ಸಿದ್ದರಾಮಯ್ಯ ಅವರು 2014ರ ಫೆ.24ರಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಡ್ಯ ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಮೈಸೂರಿನ ಪ್ರಾದೇಶಿಕ ಆಯುಕ್ತರು, ಗಣಿ, ಲೋಕೋಪಯೋಗಿ ಇಲಾಖೆ ಸೇರಿ ಹಲವು ಅಧಿಕಾರಿಗಳ ಸಭೆ ನಡೆಸಿ ಕಲ್ಲುಪುಡಿ ಘಟಕಗಳಿಗೆ ಅಗತ್ಯವಿರುವ ಕಚ್ಚಾ ಮಾಲಿನ ಸಮಸ್ಯೆ ಬಗೆಹರಿಸಲು
ನಿರ್ದೇಶನ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಮೈಸೂರು ಮಹಾರಾಜರ ಖಾಸಗಿ ಸ್ವತ್ತಿನಲ್ಲಿ ಗಣಿಗಾರಿಕೆ ನಡೆಸಲು ಸಿದ್ದರಾಮಯ್ಯ ಅವರೇ ಅಧಿಕಾರಿಗಳ ಮೇಲೆ ಒತ್ತಡ ತಂದಿರುವುದು ಮಂಡ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮೈಸೂರು
ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಬರೆದಿರುವ ಪತ್ರವೇ ಸಾಕ್ಷಿ ಎಂದು ರವೀಂದ್ರ ಆರೋಪಿಸಿದ್ದರು. 

ಟಾಪ್ ನ್ಯೂಸ್

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.