ದಿಲ್ಲಿ ಸ್ಫೋಟ: ಭಟ್ಕಳ್ ವಿರುದ್ಧ ದೋಷ ನಿಗದಿ
Team Udayavani, Feb 14, 2018, 9:20 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ 2008 ಸಪ್ಟೆಂಬರ್‌ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಯ ಸಹಸ್ಥಾಪಕ ಯಾಸೀನ್ ಭಟ್ಕಳ್ ಹಾಗೂ ಸಹಚರನ ವಿರುದ್ಧ ದಿಲ್ಲಿಯ ನ್ಯಾಯಾಲಯ ಮಂಗಳವಾರ ದೋಷ ನಿಗದಿ ಮಾಡಿದೆ. ಸಂಚು ಮತ್ತು ಉಗ್ರ ಕೃತ್ಯಕ್ಕೆ ಸಂಬಂಧಿಸಿದ ಇತರಆರೋಪಗಳನ್ನು ನಿಗದಿ ಮಾಡಲಾಗಿದೆ. ಅಂದು ನಡೆದ ಸರಣಿ ಸ್ಫೋಟದಲ್ಲಿ 26 ಮಂದಿ ಮೃತಪಟ್ಟು, 135 ಮಂದಿ ಗಾಯಗೊಂಡಿದ್ದರು.
ಯಾಸೀನ್ ಮತ್ತು ಸಹಚರ ಅಸಾದುಲ್ಲಾ ಅಖ್ತರ್ ವಿರುದ್ಧ ಹೆಚ್ಚುವರಿ ಸೆಷನ್ಸ್ ಜಡ್ಜ್ ಸಿದ್ಧಾರ್ಥ್ ಶರ್ಮಾ ಅವರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ, ಭಾರತೀಯ ದಂಡ ಸಂಹಿತೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ಅನ್ವಯ ವಿವಿಧ ಆರೋಪಗಳನ್ನು ನಿಗದಿ ಮಾಡಿದ್ದಾರೆ. ಫೆ.28ರಂದು ಮುಂದಿನ ವಿಚಾರಣೆ ನಡೆಯಲಿದೆ.
ಸರಣಿ ಸ್ಫೋಟಗಳನ್ನು ನಡೆಸುವ ಮೂಲಕ ಆರೋಪಿಗಳು ದೇಶದ ವಿರುದ್ಧ ಸಮರ ಸಾರಿದ್ದಾರೆ ಎಂದು ಪೊಲೀಸರು ಕೋರ್ಟ್‌ಗೆ ತಿಳಿಸಿದ್ದಾರೆ. 2013ರ ಆ.28ರಂದು ಭಾರತ-ನೇಪಾಲ ಗಡಿಯಲ್ಲಿ ಭಟ್ಕಳ್‌ನನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.