ಉಪಿನಂಗಡಿ: ಫೆ. 24, 25 ವಿಜಯ-ವಿಕ್ರಮ ಜೋಡುಕರೆ ಕಂಬಳ 


Team Udayavani, Feb 14, 2018, 3:09 PM IST

14-Feb-17.jpg

ಉಪ್ಪಿನಂಗಡಿ : ಇಲ್ಲಿನ ವಿಜಯ -ವಿಕ್ರಮ ಹೊನಲು ಬೆಳಕಿನ ಜೋಡುಕರೆ ಕಂಬಳವು ಫೆ. 24 ಮತ್ತು 25ರಂದು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಹಳೆಗೇಟು ಬಳಿಯ ದಡ್ಡು ನೇತ್ರಾವತಿ ನದಿ ಕಿನಾರೆಯಲ್ಲಿರುವ ಕಂಬಳ ಕರೆಯ ಬಳಿ ಸೋಮವಾರ ಸಂಜೆ ನಡೆಯಿತು.

ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಮಾತನಾಡಿ, ಕಂಬಳಕ್ಕೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಇಲ್ಲಿನ ಶ್ರೀ ಕಲ್ಕುಡ ಕಟ್ಟೆಯ ಬಳಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಕರೆ ನಿರ್ಮಾಣ ಕೆಲಸ ಆಗಿದೆ. ಈ ಕರೆಯಲ್ಲಿ ಕುದಿ ಓಡಿಸುವುದಕ್ಕೆ ಅವಕಾಶ ನೀಡಲಾಗುವುದು. ಸಿದ್ಧತೆಗಳು ಅಂತಿಮ ಹಂತದಲ್ಲಿದ್ದು, ಈ ಬಾರಿಯ ಕಂಬಳವನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುವುದು. ಕಂಬಳದ ಸಭಾ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಸಂಸದರಾದ ನಳಿನ್‌ ಕುಮಾರ್‌ ಕಟೀಲು, ಶೋಭಾ ಕರಂದ್ಲಾಜೆ, ಶಾಸಕಿ ಎನ್‌. ಶಕುಂತಳಾ ಶೆಟ್ಟಿ, ಸಹಕಾರ ಮಹಾ ಮಂಡಲದ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರಕುಮಾರ್‌, ಕ್ಯಾಂಪ್ಕೋ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ ಸಹಿತ ಹಲವರು ಆಗಮಿಸಲಿದ್ದಾರೆ ಎಂದರು.

1ಲಕ್ಷ ಜನ ಆಗಮಿಸುವ ನಿರೀಕ್ಷೆ
ಫೆ. 24ರಂದು ಬೆಳಗ್ಗೆ 10:31ರ ಬಳಿಕ ಕಂಬಳದ ಉದ್ಘಾಟನೆ ನಡೆಯಲಿದ್ದು, ಇದಕ್ಕೂ ಮೊದಲು ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಕಂಬಳ ಕರೆಗೆ ಕಂಬಳ ಕೋಣಗಳನ್ನು ಅದ್ದೂರಿ ಮೆರವಣಿಗೆಯಲ್ಲಿ ಕರೆ ತರಲಾಗುವುದು. ಮೆರವಣಿಗೆ ತುಳುನಾಡ ಸಂಸ್ಕೃತಿಯನ್ನು ಬಿಂಬಿಸಲಿದೆ. ಸಂಜೆ 5:30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳನ್ನು ಕೂಟೇಲು ಸೇತುವೆ ಬಳಿಯಿಂದ ವೈಭವದ ಮೆರವಣಿಗೆಯ ಮೂಲಕ ಸ್ವಾಗತಿಸಿ, ವೇದಿಕೆಗೆ ಕರೆತರಲಾಗುವುದು. ಈ ಬಾರಿಯ ಕಂಬಳಕ್ಕೆ 150 ಜತೆ ಕೋಣಗಳು ಭಾಗವಹಿಸುವ ನಿರೀಕ್ಷೆಯಿದ್ದು, ಒಂದು ಲಕ್ಷ ಜನರು ವೀಕ್ಷಿಸುವರು. ಕಂಬಳದ ದಿನ ಮಧ್ಯಾಹ್ನ ಅನ್ನಸಂತರ್ಪಣೆ, ಹಾಗೂ ಕಂಬಳ ವೀಕ್ಷಣೆಗೆ ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಉಪ್ಪಿನಂಗಡಿ ಪೇಟೆಯಲ್ಲಿ ಫೆ. 15ರಂದು ಆಮಂತ್ರಣ ಪತ್ರ ವಿತರಣೆ ಕಾರ್ಯ ನಡೆಯಿಲಿದ್ದು, ಎಂದರು.

ವಿಜಯ- ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷ ಉಮೇಶ್‌ ಶೆಣೈ ನಂದಾವರ, ಪ್ರಧಾನ ಕಾರ್ಯದರ್ಶಿ ಬೆಳ್ಳಿಪ್ಪಾಡಿ ಕೈಪ ಕೇಶವ ಭಂಡಾರಿ, ಕೋಶಾಧಿಕಾರಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕಾರ್ಯದರ್ಶಿ ಚಂದ್ರಶೇಖರ ಮಡಿವಾಳ, ಉಪಾಧ್ಯಕ್ಷ ರಾಮಚಂದ್ರ ಮಣಿಯಾಣಿ, ಗೌರವ ಸಲಹೆಗಾರ ಹರಿಶ್ಚಂದ್ರ ಇಳಂತಿಲ, ಉಪ್ಪಿನಂಗಡಿ ಗ್ರಾ.ಪಂ. ಸದಸ್ಯ ರಮೇಶ್‌ ಭಂಡಾರಿ, ನ್ಯಾಯವಾದಿ ರಾಘವೇಂದ್ರ ನಾಯಕ್‌, ವಾರಿಸೇನ ಜೈನ್‌, ಕೃಷ್ಣಪ್ರಸಾದ್‌ ಬೊಳ್ಳಾವು, ಯೋಗೀಶ್‌ ಸಾಮಾನಿ, ಆದರ್ಶ ಶೆಟ್ಟಿ ಕಜೆಕ್ಕಾರ್‌, ಜಯಂತ ಪೊರೋಳಿ, ಕಂಗ್ವೆ ವಿಶ್ವನಾಥ ಶೆಟ್ಟಿ, ಗಿರೀಶ್‌ ಸಾಲ್ಯಾನ್‌, ಕೃಷ್ಣಪ್ಪ, ಸಿದ್ದೀಕ್‌, ಇಮ್ತಿಯಾಜ್‌, ಹರೀಶ್‌ ಶೆಟ್ಟಿ, ಗಂಗಾಧರ, ದಾಸಪ್ಪ ಗೌಡ, ಸಂತೋಷ್‌ ಕುಕ್ಕಾಜೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

11

Manipal: ಡಂಪಿಂಗ್‌ ಯಾರ್ಡ್‌ ಆದ ಮಣ್ಣಪಳ್ಳ!

10

Udupi: ಒಂದೇ ವೃತ್ತ; ಪೊಲೀಸ್‌ ಚೌಕಿ 5!; ಕಲ್ಸಂಕ ಜಂಕ್ಷನ್‌ನಲ್ಲಿ ಮುಗಿಯದ ಸಂಚಾರ ಸಮಸ್ಯೆ

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.