ಹೆತ್ತವರಿಂದಲೇ ರಾಷ್ಟ್ರೀಯ ಕಬಡ್ಡಿ ಆಟಗಾರ್ತಿಗೆ ಗೃಹ ಬಂಧನ
Team Udayavani, Feb 15, 2018, 6:35 AM IST
ರೋಹrಕ್: ರಾಷ್ಟ್ರೀಯ ಕಬಡ್ಡಿ ಆಟಗಾರ್ತಿಯೊಬ್ಬರನ್ನು ಅವರ ಕುಟುಂಬದ ಸದಸ್ಯರೇ ಗೃಹ ಬಂಧನದಲ್ಲಿ ಇರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಲವಂತದಿಂದ ಮದುವೆ ಮಾಡಲು ಹೆತ್ತವರು ಪ್ರಯತ್ನ ನಡೆಸಿ ಕೃತ್ಯವೆಸಗಿದ್ದಾರೆ. ಈ ಕುರಿತಂತೆ ಹರ್ಯಾಣದ ಮಹಿಳಾ ಆಯೋಗಕ್ಕೂ ದೂರು ಹೋಗಿದೆ. ಅಷ್ಟೇ ಅಲ್ಲ ಸ್ವತಃ ಯುವತಿ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಪತ್ರ ಬರೆದಿದ್ದಾರೆ. ತನಗಾಗಿರುವ ಅನ್ಯಾಯವನ್ನು ಹೇಳಿಕೊಂಡಿದ್ದಾರೆ.
ಯಾರಿವರು ಆಟಗಾರ್ತಿ?: ಹೆಸರು ಪ್ರೀತಿ. ಹರ್ಯಾಣದ ಪಾಣಿಪತ್‌ನ ಮಹಾವತಿ ಗ್ರಾಮದವರು. ರೋಹrಕ್‌ನ ಕಾಲೇಜ್‌ವೊಂದರಲ್ಲಿ ಕಲಾ ವಿಭಾಗದಲ್ಲಿ ಪದವಿ ಪಡೆದುಕೊಂಡಿದ್ದಾರೆ. ಹಲವಾರು ರಾಷ್ಟ್ರೀಯ ಕೂಟದಲ್ಲಿ ಹರ್ಯಾಣ ತಂಡವನ್ನು ಪ್ರತಿನಿಧಿಸಿದ್ದಾರೆ. ಬಡತನದ ನಡುವೆಯೂ ಪ್ರೀತಿ ಕಬಡ್ಡಿಯಲ್ಲಿ ಅತ್ಯಂತ ಎತ್ತರಕ್ಕೆ ಬೆಳೆಯುವ ಕನಸು ಕಂಡಿದ್ದರು. ಆದರೆ ತನಗೆ ಇಷ್ಟವಿಲ್ಲದ. ತನಗಿಂತ ಅಧಿಕ ವಯಸ್ಸಿನ ವ್ಯಕ್ತಿಯೊಂದಿಗೆ ಮದುವೆ ಮಾಡಿಸಲು ಮನೆಯವರು ಪ್ರಯತ್ನಿಸಿದ್ದಾರೆ. ಇದಕ್ಕೆ ಪ್ರೀತಿ ನಿರಾಕರಿಸಿದಾಗ ಆಕೆಯನ್ನು ಹಲವು ದಿನಗಳ ಕಾಲ ಮನೆಯ ಕೊಠಡಿಯೊಂದರಲ್ಲಿ ಕೂಡಿ ಹಾಕಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದ ಪ್ರೀತಿ ನೇರವಾಗಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತನಿಖೆಗೆ ಆದೇಶಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.