ವಾರದಲ್ಲಿ ಚುನಾವಣಾ ಸಮಿತಿ ರಚನೆ: ಪರಮೇಶ್ವರ್
Team Udayavani, Feb 16, 2018, 6:40 AM IST
ಬೆಂಗಳೂರು: ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡಲು ಒಂದು ವಾರದಲ್ಲಿ ಚುನಾವಣಾ ಸಮಿತಿ ರಚನೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಕುರಿತು ವೀಕ್ಷಕರನ್ನು ಕಳುಹಿಸಲಾಗಿದ್ದು, ಫೆಬ್ರವರಿ 20 ರೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ. ವೀಕ್ಷಕರು ವರದಿ ನೀಡಿದ ನಂತರ ರಾಜ್ಯ ಚುನಾವಣಾ ಸಮಿತಿ ಪಟ್ಟಿ ಸಿದ್ದಪಡಿಸಿ ಹೈ ಕಮಾಂಡ್‌ಗೆ ಕಳುಹಿಸಿ ಕೊಡಲಿದೆ ಎಂದರು.
ರಾಜ್ಯದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯ ಜನಾಶೀರ್ವಾದ ಯಾತ್ರೆ ಯಶಸ್ವಿಯಾಗಿದ್ದು, ಫೆಬ್ರವರಿ 24 ರಿಂದ 26 ವರೆಗೆ ಮುಂಬೈ ಕರ್ನಾಟಕ ಭಾಗದಲ್ಲಿ ಯಾತ್ರೆ ನಡೆಸಲಿದ್ದು, ಬೆಳಗಾವಿ, ಬಾಗಲಕೋಟೆ, ವಿಜಯಪುರ ಹಾಗೂ ಹುಬ್ಬಳ್ಳಿಯಲ್ಲಿ ಯಾತ್ರೆ ನಡೆಯಲಿದೆ. ಶೀಘ್ರವೇ ಅಧಿಕೃತ ಕಾರ್ಯಕ್ರಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ಸೂಚನೆ ಇರುವುದರಿಂದ ಬೇರೆ ಪಕ್ಷಗಳ ಅನೇಕ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಸ್ಥಳೀಯ ಮಟ್ಟದ ಪರಿಸ್ಥಿತಿಯನ್ನು ನೋಡಿಕೊಂಡು ಬೇರೆ ಪಕ್ಷದ ನಾಯಕರನ್ನು ಸೇರಿಸಿಕೊಳ್ಳಲಾಗುವುದು ಎಂದರು. ಜೆಡಿಎಸ್ ಪಕ್ಷ ಬಿಎಸ್ಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡರೆ ಕಾಂಗ್ರೆಸ್‌ಗೆ ಯಾವುದೇ ತೊಂದರೆಯಿಲ್ಲ. ಅವರು ಯಾರ ಜೊತೆ ಒಳ ಒಪ್ಪಂದ ಮಾಡಿಕೊಂಡರೂ ನಮಗೇನು ವ್ಯತ್ಯಾಸವಾಗುವುದಿಲ್ಲ ಎಂದರು.
ಆಕ್ಷೇಪ: ಇಂಧನ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ ಅವರು, ಈ ಬಗ್ಗೆ ಸಂಬಂಧಿಸಿದ ಇಲಾಖೆಯವರ ಗಮನಕ್ಕೆ ತರಲು ಬಯಸಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಅನಗತ್ಯವಾಗಿ ಸುಳ್ಳು ಸುದ್ದಿ ಹಬ್ಬಿಸುವುದು ಸರಿಯಲ್ಲ. ಬಿಜೆಪಿಯವರು ಈ ರೀತಿಯ ಕೆಲಸಕ್ಕೆ ಕೈ ಹಾಕಿದ್ದರೆ ಅದು ಸರಿಯಲ್ಲ ಎಂದು ಹೇಳಿದರು.
ಬಹಮನಿ ಉತ್ಸವ ಮಾಹಿತಿಯಿಲ್ಲ: ರಾಜ್ಯ ಸರ್ಕಾರ ಬಹಮನಿ ಸಾಮ್ರಜ್ಯದ ಉತ್ಸವ ಮಾಡಲು ಮುಂದಾಗಿರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿಲ್ಲ. ಈ ವಿಷಯ ಎಲ್ಲಿ ಹುಟ್ಟಿಕೊಂಡಿದೆ ಎನ್ನುವ ಮಾಹಿತಿ ಇಲ್ಲ ಎಂದರು.
ದಾಖಲೆ ಬಜೆಟ್
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡುತ್ತಿದ್ದು, ಇದು ದಾಖಲೆಯ ಬಜೆಟ್ ಆಗಲಿದೆ. ಸುಮಾರು 2 ಲಕ್ಷ ಕೋಟಿ ದಾಟುವ ಸಾಧ್ಯತೆ ಇದ್ದು, ಜನಪರ ಬಜೆಟ್ ಮಂಡನೆಯಾಗಲಿದೆ. ರಾಜ್ಯ ಸರ್ಕಾರ ಈಗಾಗಲೇ ಸಹಕಾರಿ ಸಂಸ್ಥೆಗಳಲ್ಲಿ ರೈತರು ಪಡೆದ 50 ಸಾವಿರ ವರೆಗಿನ ಸಾಲ ಮನ್ನಾ ಮಾಡಿದೆ. ಉಳಿದ ಸಾಲವನ್ನೂ ಮುಖ್ಯಮಂತ್ರಿ ಮನ್ನಾ ಮಾಡುವ ವಿಶ್ವಾಸ ಇದೆ.
ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರಿಗೆ ಅನುಕೂಲವಾಗುವ ರೀತಿಯ ಬಜೆಟ್ ನೀಡುವ ವಿಶ್ವಾಸ ಇದೆ ಎಂದು ಪರಮೇಶ್ವರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.