ನಿರ್ಮಾಣ ಹಂತದ ಕಟ್ಟಡ ಕುಸಿತ: 3 ಸಾವು
Team Udayavani, Feb 16, 2018, 6:00 AM IST
ಬೆಂಗಳೂರು: ಕೇವಲ ನಾಲ್ಕು ತಿಂಗಳ ಅಂತರದಲ್ಲಿ ನಗರದಲ್ಲಿ ಮತ್ತೂಂದು ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದು, ಒಂಬತ್ತು ಜನ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.
ಸರ್ಜಾಪುರ ರಸ್ತೆಯ ಕಸವನಹಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಮಹಡಿಯ ವಾಣಿಜ್ಯ ಕಟ್ಟಡ ಕುಸಿದಿದೆ. ಪರಿಣಾಮ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟು, ಒಂಬತ್ತು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಹತ್ತು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು, ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ಹಾಗೂ ಪೊಲೀಸರು ತಡರಾತ್ರಿವರೆಗೂ ರಕ್ಷಣಾ ಕಾರ್ಯ ಮುಂದುವರಿದಿದೆ.
ಮೃತಪಟ್ಟವರನ್ನು ರಾಯಚೂರು ಮೂಲದ ರಾಜು (25) ಉತ್ತರ ಪ್ರದೇಶ ಗೋರಖ್‌ಪುರದ ಅನ್ವರ್ (24) ಹಾಗೂ ಶೇಕ್ (25) ಎಂದು ಗುರುತಿಸಲಾಗಿದೆ.
ಗಾಯಗೊಂಡವರೆಲ್ಲರೂ ರಾಯಚೂರು, ಕಲಬುರಗಿ, ಉತ್ತರ ಪ್ರದೇಶ, ಆಂಧ್ರಪ್ರದೇಶ, ಬಿಹಾರದವರಾಗಿದ್ದಾರೆ. ಅವರೆಲ್ಲರಿಗೂ ಸಮೀಪದ ಸೆಂಟ್‌ಜಾನ್ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಕಸವನಹಳ್ಳಿಯಲ್ಲಿ 50x 7 0 ಅಡಿ ನಿವೇಶನದಲ್ಲಿ ದಿನಸಿ ವ್ಯಾಪಾರಿ ರಫೀಕ್ ಎಂಬುವರು ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡ ನಿರ್ಮಿಸುತ್ತಿದ್ದು, ಹಲವು ದಿನಗಳಿಂದ ಈ ಕಟ್ಟಡದಲ್ಲಿ ಉತ್ತರಪ್ರದೇಶ, ಒಡಿಶಾ ಹಾಗೂ ಕಲಬುರಗಿ ಮೂಲದ ಸುಮಾರು 25 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅದೇ ಕಟ್ಟಡದ ಆವರಣದಲ್ಲಿ ತಾತ್ಕಾಲಿಕ ಶೆಡ್‌ನಲ್ಲಿ ಕಾರ್ಮಿಕರು ವಾಸವಾಗಿದ್ದರು. ಸಂಜೆ 4.30ರ ಸುಮಾರಿಗೆ ಏಕಾಏಕಿ ಕಟ್ಟಡದ ನೆಲಕ್ಕುರಳಿತು ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ವಿವರಿಸಿದರು.
ಎಂಜಿನಿಯರ್ ಬಂಧನ; ಮಾಲೀಕರು ವಶಕ್ಕೆ
ಆದರೆ, ಉದ್ದೇಶಿತ ಕಟ್ಟಡವು ಅಕ್ರಮವಾಗಿ ತಲೆಯೆತ್ತಿದ್ದು, ಬಿಬಿಎಂಪಿಯಿಂದ ಯಾವುದೇ ಅನುಮತಿ ಪಡೆದಿರಲಿಲ್ಲ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಹಿನ್ನೆಲೆಯಲ್ಲಿ ಈ ಹಿಂದೆ ಇಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದ ಹಾಗೂ ಈಗ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಮುನಿರೆಡ್ಡಿ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಕಟ್ಟಡ ಸಮೀರಾ ಎಂಬುವರಿಗೆ ಸೇರಿದ್ದು, ಇವರನ್ನು ವಶಕ್ಕೆ ಪಡೆಯಲಾಗಿದೆ. ಸಮೀರಾ ಪತಿ ರಫೀಕ್ ನಾಪತ್ತೆಯಾಗಿದ್ದಾರೆ. ಐಪಿಸಿ 304ರ ಅಡಿ ಪ್ರಕರಣ ದಾಖಲಾಗಿದೆ.
ಸರಣಿ ಕಟ್ಟಡ ಕುಸಿತ
ಕಳೆದ ಅಕ್ಟೋಬರ್‌ನಲ್ಲಷ್ಟೇ ಈಜಿಪುರದಲ್ಲಿ ಕಟ್ಟಡ ಕುಸಿದು ಏಳು ಜನ ಸಾವನ್ನಪ್ಪಿದ್ದರು. ಇದಾದ ಮರುದಿನವೇ ಯಶವಂತಪುರದಲ್ಲಿ ಕಟ್ಟಡ ಕುಸಿದು ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಅಷ್ಟೇ ಅಲ್ಲ, ಕೇವಲ ನಾಲ್ಕು ದಿನಗಳ ಹಿಂದೆ ಯಶವಂತಪುರ ಮತ್ತು ಜಯನಗರದ 5ನೇ ಬ್ಲಾಕ್‌ನಲ್ಲಿ ಎರಡು ಕಟ್ಟಡಗಳು ವಾಲಿದ್ದವು. ನಿವಾಸಿಗಳನ್ನು ಸ್ಥಳಾಂತರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.