ಜೇವರ್ಗಿಯಲ್ಲಿ ಕಮಲಜಾತ್ರೆ ಇಂದಿನಿಂದ
Team Udayavani, Feb 16, 2018, 11:23 AM IST
ಜೇವರ್ಗಿ: ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಬಿಜೆಪಿ ಹೊಸ ಪ್ರಯೋಗವೊಂದನ್ನು ಮಾಡಲು ಹೊರಟ್ಟಿದ್ದು, ಉತ್ತರ ಪ್ರದೇಶ ಮಾದರಿಯಲ್ಲಿ ಕಮಲ ಜಾತ್ರೆ ನಡೆಸುತ್ತಿದೆ.
ಈ ಜಾತ್ರೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಫೆ.16, 17 ಹಾಗೂ 18 ರಂದು ನಡೆಯಲಿದ್ದು, ಪಟ್ಟಣದ ವಿಜಯಪುರ ರಸ್ತೆಯ ಶಿಕ್ಷಕರ ಕಾಲೋನಿ ಹತ್ತಿರದ ಗೋಗಿ ಲೇಔಟ್ ಬಡಾವಣೆಯ ಖಾಲಿ ನಿವೇಶನದಲ್ಲಿ ಜಾತ್ರೆಗಾಗಿ 500ಗಿ500 ಅಡಿಯ ಸ್ಥಳದಲ್ಲಿ ವೇದಿಕೆ, ವಿವಿಧ ಮಳಿಗೆಗಳು ಹಾಕಲಾಗಿದೆ. ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಕಮಲ ಜಾತ್ರೆಯ ಸಿದ್ಧತೆ ವೀಕ್ಷಣೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಬಾರಿಗೆ ಪಟ್ಟಣದಲ್ಲಿ
ಕಮಲ ಜಾತ್ರೆ ಆಯೋಜನೆಯಿಂದ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು, ಸಂತಸವನ್ನುಂಟು ಮಾಡಿದೆ.
ಈ ಜಾತ್ರೆಯಲ್ಲಿ ಸರ್ವ ಜನಾಂಗದವರೂ ಯಾವುದೇ ಭೇದ-ಭಾವವಿಲ್ಲದೇ ಪ್ರತಿಯೊಬ್ಬರೂ ಭಾಗವಹಿಸಬಹುದು. ಮಹಿಳೆಯರಿಗೆ ಮೆಹಂದಿ, ಮಕ್ಕಳಿಗೆ ಬಲೂನ್ ಆಟ ಹಾಗೂ ವೃದ್ಧರಿಗೆ ಚಾಯ್ ಪೇ ಚರ್ಚಾ ಸೇರಿದಂತೆ ನಗೆ ಹಬ್ಬ, ಲೇಸರ್ ಶೋ, ಮಲ್ಲಗಂಬ, ಆಹಾರ ಮಳಿಗೆ ಸೇರಿದಂತೆ ಹಲವಾರು ಸಾಂಸ್ಕೃತಿಕ, ಮನೋರಂಜನೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸರ್ಕಾರದ ಸಾಧನೆಗಳನ್ನು ಇಲ್ಲಿ ಬ್ಯಾನರ್, ಕ್ರೀಡೆಗಳ, ಲೇಸರ್ ಶೋ ಮೂಲಕ ಪ್ರದರ್ಶಿಸಲಾಗುವುದು. ಈ ಜಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ
ಪುತ್ಥಳಿ ಕೂಡ ಸ್ಥಾಪಿಸಿ ಅದರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ.
ಸೆಲ್ಫಿ ತೆಗೆದುಕೊಂಡ ನಂತರ ಕೆಲವೇ ನಿಮಿಷಗಳಲ್ಲಿಯೇ ಉಚಿತವಾಗಿ ಭಾವಚಿತ್ರ ನೀಡಲಾಗುವುದು. ಈ ಜಾತ್ರೆಯಲ್ಲಿ ಭಾಗವಹಿಸುವವರಿಗೆ ಯಾವುದೇ ಶುಲ್ಕ ಕೂಡ ಇರುವುದಿಲ್ಲ. ಆದರೆ ಅತ್ಯಂತ ಕಡಿಮೆ ದರದಲ್ಲಿ ಆಹಾರ ಮಳಿಗೆ ಕೂಡ ಲಭ್ಯ ಇರುತ್ತದೆ. ಈ ಜಾತ್ರೆಗೆ ಕ್ಷೇತ್ರದ ಸುಮಾರು 40 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ತಾಲೂಕಿನಾದ್ಯಂತ ಐದು ವಾಹನಗಳ ಮೂಲಕ ಪ್ರಚಾರ
ಕಾರ್ಯಕೈಗೊಳ್ಳಲಾಗಿದೆ. ಇದರ ಜೊತೆಗೆ ಬ್ಯಾನರ್, ಬಂಟಿಂಗ್ಸ್ ಮೂಲಕ ಮನೆ-ಮನೆಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.