ಇನ್ಮುಂದೆ ಓದುಗರ ಮನೆ ಬಾಗಿಲಿಗೇ ಪುಸ್ತಕ ಮಳಿಗೆ


Team Udayavani, Feb 16, 2018, 12:51 PM IST

inmunde-books.jpg

ಬೆಂಗಳೂರು: ಕನ್ನಡ‌ ಪುಸ್ತಕ ಪ್ರಿಯರಿಗೆ ಇಲ್ಲಿದೆ ಸಿಹಿ ಸುದ್ದಿ. ನಿಮ್ಮ ನೆಚ್ಚಿನ ಪುಸ್ತಕಗಳನ್ನು ಕೊಳ್ಳಲು ಎಲ್ಲೋ ಇರುವ ಪುಸ್ತಕ ಮಳಿಗೆಗಳನ್ನು ಅಥವಾ ದೂರದೂರುಗಳಲ್ಲಿರುವ ಅಂಗಡಿಗಳಿಗೆ ಹುಡುಕಿಕೊಂಡು ಹೋಗಬೇಕಿಲ್ಲ. ಇನ್ನು ಮುಂದೆ ನೀವಿರುವ ಜಾಗಕ್ಕೇ ಪುಸ್ತಕಗಳು ಬರಲಿವೆ! 

ನಾಡಿನ ಪುಸ್ತಕ ಪ್ರಿಯರ ಮನದಿಂಗಿತವನ್ನು ಅರಿತಿರುವ ಕನ್ನಡ ಪುಸ್ತಕ ಪ್ರಾಧಿಕಾರ ಈ ಕಾರಣಕ್ಕಾಗಿಯೇ ಹೊಸ ಯೋಜನೆ ರೂಪಿಸುತ್ತಿದೆ. ಕನ್ನಡ ಪುಸ್ತಕಗಳನ್ನು ಹಳ್ಳಿಹಳ್ಳಿಗೆ ತಲುಪಿಸಬೇಕು ಎಂಬ ಸದುದ್ದೇಶದಿಂದ ಇಂಥದ್ದೊಂದು ಪ್ರಯತ್ನಕ್ಕೆ ಮುಂದಾಗಿದೆ.

ಪುಸ್ತಕ ಕೊಳ್ಳಲೆಂದು ನೂರಾರು ಕಿಲೋಮೀಟರ್‌ ದೂರದಿಂದ ಹಣ ಮತ್ತು ಸಮಯ ಖರ್ಚು ಮಾಡಿ ನಗರಕ್ಕೆ ಬರುವುದನ್ನು ಅಥವಾ ಎಲ್ಲೋ ಇರುವ ಮಳಿಗೆಗಳನ್ನು ಹುಡುಕುವ ತಾಪತ್ರಯವನ್ನು ಮನಗಂಡಿರುವ ಪಾಧಿಕಾರ, ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ.  

ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಕೆಎಸ್‌ಆರ್‌ಟಿಸಿ ಜಂಟಿಯಾಗಿ “ಸಂಚಾರಿ ವಾಹನ ‘ಯೋಜನೆ ಸಿದ್ಧಗೊಳಿಸಿದೆ. ಇದರಲ್ಲಿ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಿಸುವ ಎಲ್ಲಾ ಪುಸ್ತಕಗಳು ದೊರೆಯಲಿವೆ. ವಾಹನವು ಜನರು ಇರುವ ಕಡೆಗಳಲ್ಲಿ ನಿತ್ಯ ಸಂಚರಿಸಲಿವೆ. ಸಂತೆ ನಡೆಯುವ ಸ್ಥಳ, ಶಾಲಾ ಕಾಲೇಜು ಸೇರಿದಂತೆ ಜನದಟ್ಟಣೆ ಇರುವ ಕಡೆಗಳಿಗೆ ತೆರಳಿ ಗ್ರಾಹಕ ಬಯಸಿದ ಪುಸ್ತಕವನ್ನು ನೀಡಲಾಗುತ್ತದೆ.

ಪುಸ್ತಕ ಪ್ರಿಯರು ತಮಗೆ ಇಷ್ಟವಾದ ಪುಸ್ತಕಗಳನ್ನು ಕೊಳ್ಳಬಹುದು. ಮೊದಲ ಹಂತದಲ್ಲಿ ಸಂಚಾರಿ ವಾಹನಗಳು ಬೆಂಗಳೂರು, ಬೆಳಗಾವಿ, ಮಂಗಳೂರು, ಕಲಬುರಗಿಯಲ್ಲಿ ಸಂಚರಿಸಲಿವೆ. ಇದಾದ ಬಳಿಕ ಜಿಲ್ಲಾ/ ತಾಲೂಕು ಮಟ್ಟದವರೆಗೂ ವಿಸ್ತರಿಸುವ ಕುರಿತಂತೆ ಸಮಾಲೋಚನೆ ನಡೆದಿದೆ. ಆಯಾ ವಲಯದ ಜಿಲ್ಲಾ/ತಾಲೂಕು ಮಟ್ಟದಲ್ಲಿ ಒಂದೊಂದು ವಾರ ಸಂಚರಿಸುವ ಉದ್ದೇಶ ಹೊಂದಲಾಗಿದೆ. 

ಕೆಎಸ್‌ಆರ್‌ಟಿಸಿ ಸಾಥ್‌:  ಸಂಚಾರಿ ಪುಸ್ತಕ ವಾಹನ ಯೋಜನೆ ಕಾರ್ಯಗತಗೊಳಿಸಲು ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಗಳ ಜತೆ, ಕನ್ನಡ ಪುಸ್ತಕ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಮಾತುಕತೆ ನಡೆಸಿ ಯೋಜನೆಯ ರೂಪುರೇಷೆ ಬಗ್ಗೆ ನಿರ್ಧರಿಸಿದ್ದಾರೆ. ಅದರ ಫ‌ಲವಾಗಿ ಇದೀಗ ಪ್ರಾಧಿಕಾರಕ್ಕೆ ಸಂಚಾರಿ ವಾಹನಗಳನ್ನು ನೀಡಲು ಕೆಎಸ್‌ಆರ್‌ಟಿಸಿ ಕೂಡ ಒಪ್ಪಿಕೊಂಡಿದೆ. ಆರಂಭದಲ್ಲಿ ಐದು ಬಸ್‌ಗಳನ್ನು ನೀಡುವಂತೆ ಸಾರಿಗೆ ಇಲಾಖೆಗೆ ಪ್ರಾಧಿಕಾರ ಮನವಿ ಮಾಡಿದೆ. 

ಆರ್ಥಿಕ ಸಹಾಯ ನಿರೀಕ್ಷೆ: ಯೋಜನೆಯಲ್ಲಿರುವಂತೆ ಒಟ್ಟು 4 ವಲಯಗಳಲ್ಲಿ ಈ ಬಸ್‌ ಸಂಚರಿಸಲಿವೆ. ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಒಂದು ಸಂಚಾರಿ ವಾಹನ ವಾರ್ಡ್‌ ಮಟ್ಟದಲ್ಲಿ ತೆರಳಲಿದೆ. ಜಿಲ್ಲಾವಾರು ಯಶಸ್ಸಿನ ನಂತರ ತಾಲೂಕು ಮಟ್ಟದಲ್ಲಿ ವಿಸ್ತರಿಸುವ ಆಲೋಚನೆ ಪ್ರಾಧಿಕಾರದ್ದು. ಸಾಕಷ್ಟು ಹಣದ ಅಗತ್ಯವಿರುವ ಹಿನ್ನೆಲೆಯಲ್ಲಿ ಸರ್ಕಾರ ಬಜೆಟ್‌ನಲ್ಲಿ ನೀಡುವ ಆರ್ಥಿಕ ಸಹಾಯವನ್ನು ನೋಡಿ ಮುಂದಿನ ಹಂತಗಳಲ್ಲಿ ಯೋಜನೆ ವಿಸ್ತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.   

ಸಾರಿಗೆ ಸಚಿವರಿಂದ ಗ್ರೀನ್‌ಸಿಗ್ನಲ್‌: ಪುಸ್ತಕಗಳ ಮಾರಾಟ ಮತ್ತು ಪ್ರದರ್ಶನಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನೇ ಸಂಚಾರಿ ವಾಹನಗಳನ್ನಾಗಿ ಬಳಕೆ ಮಾಡಿಕೊಳ್ಳಲು ಬಸ್‌ಗಳ ನಿರ್ವಹಣೆ ಮತ್ತು ವೆಚ್ಚದ ಕುರಿತು ಸಾರಿಗೆ ಸಚಿವ ಎಚ್‌.ಎಂ.ರೇವಣ್ಣ ಅವರ ಜತೆ ಮಾತುಕತೆ ನಡೆದಿದೆ. ಇದಕ್ಕೆ ಸಚಿವರು ಕೂಡ ಸಮ್ಮತಿಸಿದ್ದಾರೆ. ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರ ಜತೆಗೂ ಸಮಾಲೋಚನೆ ನಡೆದಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಹಳ್ಳಿ ಹಳ್ಳಿಗೂ ಕನ್ನಡದ ಪುಸ್ತಕಗಳನ್ನು ಜನತೆಗೆ ತಲುಪಿಸಬೇಕು ಎಂಬ ಉದ್ದೇಶ ಪ್ರಾಧಿಕಾರದ್ದಾಗಿದೆ. ಬೆಳ್ಳಿಹಬ್ಬದ ಹಿನ್ನೆಲೆಯಲ್ಲಿ ಹಲವು ಯೋಜನೆಗಳನ್ನು ಪ್ರಾಧಿಕಾರ ರೂಪಿಸುತ್ತಿದೆ. ಇದರಲ್ಲಿ ಸಂಚಾರಿ ವಾಹನ ಯೋಜನೆ ಕೂಡ ಒಂದು.  
-ವಸುಂಧರಾ ಭೂಪತಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ

* ದೇವೇಶ ಸೂರಗುಪ್ಪ 

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.