ಹಿಂದುಳಿದ ಜಿಲ್ಲೆಯ ಅಭಿವೃದ್ಧಿಗೆಸಿಗುವುದೇ ವಿಶೇಷ ಪ್ಯಾಕೇಜ್‌?


Team Udayavani, Feb 16, 2018, 5:48 PM IST

Davangere00.jpg

ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರದ ಕೊನೆ ಬಜೆಟ್‌ ಫೆ. 16 ಇಂದು ಮಂಡನೆಯಾಗಲಿದ್ದು, ಯಾದಗಿರಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಿಸುವವರೇ ಎಂದು ಕಾಯ್ದು ನೋಡಬೇಕಿದೆ.

ರಾಜ್ಯದಲ್ಲಿಯೇ ಚಿಕ್ಕ ಜಿಲ್ಲೆಯಾಗಿರುವ ಯಾದಗಿರಿ ಜಿಲ್ಲೆ ಅಭಿವೃದ್ಧಿಯಲ್ಲಿ ಹಿಂದುಳಿದಿದ್ದು, ಅನೇಕ ಜ್ವಲಂತ ಸಮಸ್ಯೆಗಳು ಎದುರಿಸುತ್ತಿದ್ದು, ಜಿಲ್ಲೆಯಲ್ಲಿ ಗುರುಮಠಕಲ್‌, ವಡಗೇರಾ, ಹುಣಸಗಿ ಮೂರು ನೂತನ ತಾಲೂಕು ಕೇಂದ್ರಗಳೆಂದು ಸರಕಾರದಿಂದ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಇನ್ನೂ ಹೊಸ ತಾಲೂಕುಗಳ ಕಾರ್ಯಾರಂಭವಾಗಿಲ್ಲ. ತಾಲೂಕುಗಳ ಮೂಲ ಸೌಕರ್ಯಕ್ಕೆ ಇನ್ನೂ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿಲ್ಲ. ಈ ಬಜೆಟ್‌ನಲ್ಲಿ ಈ ಅನುದಾನ ಬಿಡುಗಡೆಗೊಳಿಸಬೇಕಾಗಿದೆ.

ಜಿಲ್ಲೆಯಲ್ಲಿ ಬೆಳೆದ ಹತ್ತಿಯನ್ನು ರಸ್ತೆಯಲ್ಲಿ ಮಾರಾಟ ಮಾಡಲಾಗುತ್ತಿದ್ದು, ರೈತರಿಗೆ ಅನುಕೂಲ ಆಗುವ ದೃಷ್ಟಿ ಯಿಂದ ಹತ್ತಿ ಸಂಸ್ಕರಣಾ ಘಟಕ ಮಂಜೂರು ಮಾಡಬೇಕು. ಜೊತೆಗೆ ಕೃಷಿ ಇಲಾಖೆಯ ಬಹು ಬೇಡಿಕೆ ಆಗಿರುವ ರೇಕ್‌ ಪಾಯಿಂಟ್‌ ಮಂಜೂರುಗೊಳಿಸಬೇಕು. ಸಹಕಾರಿ ಬ್ಯಾಂಕ್‌ಗಳ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂಬುದು ರೈತರ ಬೇಡಿಕೆಯಾಗಿವೆ. ಜಿಲ್ಲೆಯಲ್ಲಿ ಶಹಾಪುರ, ಸುರಪುರ ಮತ್ತು ಗುರುಮಠಕಲ್‌ ನಗರಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದ್ದು, ಇಲ್ಲಿ ತಲಾ ಒಂದು ಸಂಚಾರಿ ಪೊಲೀಸ್‌ ಠಾಣೆಗಳು ಮಂಜೂರಾಗಬೇಕಾಗಿದೆ. ಯಾದಗಿರಿ ನಗರದಲ್ಲಿ ಇನ್ನೊಂದು ನಗರ ಪೊಲೀಸ್‌ ಠಾಣೆ ಮಂಜೂರು ಮಾಡಬೇಕು.

ಜಿಲ್ಲೆಯಲ್ಲಿ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲು ರಂಗ ಮಂದಿರಗಳ ಸ್ಥಾಪನೆ, ಯಾದಗಿರಿ ಕೋಟೆ, ಬೋನಾಳ ಪಕ್ಷಿಧಾಮ, ಮಲಗಿರುವ ಬುದ್ಧ, ಮೈಲಾಪುರ ಮಲ್ಲಯ್ಯ ಕ್ಷೇತ್ರ, ತಿಂಥಣಿ ಮೌನೇಶ್ವರ, ಹತ್ತಿಕುಣಿ ಜಲಾಶಯ, ಛಾಯಾ ಭಗವತಿ ಅಭಿವೃದ್ಧಿಗೊಳಿಸಿ ಪ್ರೇಕ್ಷಣಿಕ ಸ್ಥಳಗಳನ್ನಾಗಿ ರೂಪಿಸಲು ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಘೋಷಿಸಬೇಕು. ಗ್ರಾಮೀಣ ರಸ್ತೆಗಳ ದುರಸ್ತಿಗೆ ವಿಶೇಷ ಅನುದಾನ ಬಿಡುಗಡೆಗೆ ಆದ್ಯತೆ ನೀಡಲಿದೆ ಎಂದು ಜನರು ನಿರೀಕ್ಷೆ ಹೊಂದಿದ್ದಾರೆ. 

ಮುಖ್ಯವಾಗಿ ಜಿಲ್ಲೆಯಲ್ಲಿ ಪ್ರಭಾರಿ ಅಧಿಕಾರಿಗಳು ಹೆಚ್ಚಾಗಿರುವುದರಿಂದ ಸಮರ್ಪಕ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿದ್ದು, ಅಧಿಕಾರಿಗಳ ಹುದ್ದೆ ಭರ್ತಿ ಮಾಡಬೇಕಾಗಿದೆ. ಜಿಲ್ಲಾದ್ಯಂತ ಸಾವಿರಾರು ಶಿಕ್ಷಕರ ಕೊರತೆಯಿಂದ ಪ್ರತಿ ವರ್ಷ ಎಸ್‌ ಎಸ್‌ಎಲ್‌ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಯಾದಗಿರಿ ಜಿಲ್ಲೆ ಹಿಂದುಳಿಯುತ್ತಿದೆ. ಶಿಕ್ಷಕರ, ಉಪನ್ಯಾಸಕರ ನೇಮಕಾತಿಗೆ ಸರಕಾರ
ಮುಂದಾಗಬೇಕಿದೆ. ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ನಿರುದ್ಯೋಗಿ ಯುವಕರು ಬೆಂಗಳೂರು, ಮುಂಬೈ, ಹೈದ್ರಾಬಾದ್‌ ಮಹಾನಗರಕ್ಕೆ ಗೂಳೆ ಹೋಗುತ್ತಿದ್ದು, ಇದನ್ನು ತಪ್ಪಿಸಲು ಕೈಗಾರಿಕಾ ಕೇಂದ್ರಗಳನ್ನು ಸ್ಥಾಪನೆ ಮಾಡಬೇಕಾಗಿದೆ. ಒಟ್ಟಾರೆ ಕಾಂಗ್ರೆಸ್‌ ಸರಕಾರದ ಕೊನೆ ಬಜೆಟ್‌ ಮೇಲೆ ಜನರು ನೂರಾರು ನಿರೀಕ್ಷೆಗಳನ್ನಿಟ್ಟಿದ್ದಾರೆ.

ವೈದ್ಯಕೀಯ ಕಾಲೇಜಿಗೆಸಿಕ್ಕಲ್ಲ ಇನ್ನೂ ಅನುದಾನ  ಕಳೆದ ಬಜೆಟ್‌ನಲ್ಲಿ ವೈದ್ಯಕೀಯ ಕಾಲೇಜು ಮಂಜೂರು ಮಾಡಲಾಗಿದೆ. ಆದರೆ, ಅನುದಾನ ನೀಡದೇ ಇರುವುದರಿಂದ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ ನನೆಗುದಿಗೆ ಬಿದ್ದಿದೆ. ಈ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ವೈದ್ಯಕೀಯ ಕಾಲೇಜಿಗೆ ಅನುದಾನ ಬಿಡುಗಡೆಗೊಳಿಸಬೇಕಿದ್ದು, ಜಿಲ್ಲೆಯಲ್ಲಿ 1,500ಕ್ಕೂ ಅಧಿಕ ಸರಕಾರಿ ಹುದ್ದೆಗಳು ಖಾಲಿಯಿದ್ದು, ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕಿದೆ.

„ರಾಜೇಶ ಪಾಟೀಲ್‌ ಯಡ್ಡಳ್ಳಿ

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

1-mundaragi

Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ

2

Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.