ದೆಹಲಿ ಮಾದರಿ ಮೈಸೂರು ಹಾಥ್ ಘೋಷಣೆ
Team Udayavani, Feb 17, 2018, 12:49 PM IST
ಮೈಸೂರು: ತಮ್ಮ ಸರ್ಕಾರದ ಕಡೆಯ ಹಾಗೂ ದಾಖಲೆಯ 13ನೇ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2018-19ನೇ ಸಾಲಿನ ಆಯವ್ಯಯದಲ್ಲಿ ಅರಮನೆಗಳ ನಗರಿ ಮೈಸೂರಿನ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಜತೆಗೆ ಮುಂಬರುವ ಚುನಾವಣೆ ದೃಷ್ಟಿಯಿಂದ ವಿವಿಧ ಜಾತಿ-ಧರ್ಮದವರನ್ನು ಓಲೈಸಲು ಅನುದಾನ ನೀಡುವ ಕೆಲಸವನ್ನೂ ಮಾಡಿದ್ದಾರೆ.
ಮೈಸೂರು ದಸರಾ ಸಂದರ್ಭದಲ್ಲಿ ಕೇವಲ ಮೂರು ತಿಂಗಳ ಕಾಲ ಸ್ಥಳೀಯರು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ದಸರಾ ವಸ್ತುಪ್ರದರ್ಶನವನ್ನು ನವದೆಹಲಿಯ ದೆಹಲಿ ಹಾಥ್ ಮಾದರಿಯಲ್ಲಿ ವರ್ಷಪೂರ್ತಿ ನಡೆಯುವಂತೆ ಮೈಸೂರು ಹಾಥ್ ನಿರ್ಮಿಸುವ ಘೋಷಣೆ ಮಾಡಿದ್ದಾರೆ.
ಇನ್ನು ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಪ್ರತಿವರ್ಷ ಆಯೋಜಿಸುವ ರಾಜ್ಯ ದಸರಾ ಕ್ರೀಡಾಕೂಟವನ್ನು ರಾಷ್ಟ್ರೀಯ ಕ್ರೀಡಾಕೂಟದಂತೆ ವಿವಿಧ ಹಂತಗಳಲ್ಲಿ ಆಯೋಜಿಸಲು ಮತ್ತು ರಾಜ್ಯಮಟ್ಟದ ಕ್ರೀಡಾಕೂಟವನ್ನು ದಸರಾ-ಸಿಎಂ ಕಪ್ ಹೆಸರಿನಲ್ಲಿ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ಆಯೋಜಿಸಲು 7 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
ಕೇಂದ್ರ ರೇಷ್ಮೆ ಮಂಡಳಿ ಸಹಯೋಗದೊಂದಿಗೆ ಬೆಂಗಳೂರು-ಮೈಸೂರು ಕಾರಿಡಾರ್‌ನಲ್ಲಿ ರೇಷ್ಮೆ ಟೂರಿಸಂ ಅಭಿವೃದ್ಧಿಪಡಿಸುವುದಾಗಿ ಹೇಳಲಾಗಿದೆ. ಕಬಿನಿ ನದಿಯಿಂದ ನಂಜನಗೂಡು ತಾಲೂಕು ಇಬ್ಬಜಾಲ ಗ್ರಾಮದ ಬಳಿ ನೀರನ್ನು ಎತ್ತಿ ಕುಡಿಯುವ ನೀರು ಒದಗಿಸುವ ಸಲುವಾಗಿ 39 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 68 ಕೋಟಿ ರೂ. ಒದಗಿಸಲಾಗುವುದು.
ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲು 15 ಕೋಟಿ ರೂ., ಮೈಸೂರಿನ ಶುಶ್ರೂಷಾ ಕಾಲೇಜಿಗೆ ಹೊಸ ಕಟ್ಟಡ ನಿರ್ಮಿಸಲು 30 ಕೋಟಿ ರೂ. ಒದಗಿಸುವುದಾಗಿ ಹೇಳಿದ್ದಾರೆ. ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಮುಖಾಂತರ ಸಾರ್ವಜನಿಕ/ಖಾಸಗಿ ಸಹಭಾಗಿತ್ವದಲ್ಲಿ ಮೈಸೂರಿನ ನಂಜನಗೂಡು ವರ್ತುಲ ರಸ್ತೆ ಬಳಿ 6.5 ಎಕರೆ ಪ್ರದೇಶದಲ್ಲಿ 2ನೇ ಹಂತದ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲಾಗುವುದು.
2 ಮತ್ತು 3ನೇ ಸ್ತರದ ನಗರಗಳಲ್ಲಿ ಸೂಕ್ಷ್ಮ/ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗಾಗಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸಲು ಮೈಸೂರಿನಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಮೂಲಕ ಹೊಸ ಕೈಗಾರಿಕಾ ವಸಾಹತು ಅಭಿವೃದ್ಧಿಪಡಿಸಲಾಗುವುದು.
ವಿದ್ಯುತ್ ಪ್ರಸರಣಾ ಜಾಲವನ್ನು ಬಲವರ್ಧನೆಗೊಳಿಸಲು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಣಗಾಲು ಮತ್ತು ಕಿತ್ತೂರು, ತಿ.ನರಸೀಪುರ ತಾಲೂಕಿನ ಮಡವಾಡಿ (ಪರಿನಾಮಿಪುರ) ಹಾಗೂ ಮೆಲೆಯೂರು, ನಂಜನಗೂಡು ತಾಲೂಕಿನ ಹೆಮ್ಮರಗಾಲ ಹಾಗೂ ಚಂದ್ರನಾಡಿ (ನಲ್ಲಿನಾಥಪುರ)ಗಳಲ್ಲಿ ವಿದ್ಯುತ್ ಉಪ ಕೇಂದ್ರಗಳನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮೂಲಕ ಸ್ಥಾಪಿಸಲಾಗುವುದು.
ಸಾಮಾಜಿಕ ಸಮಾನತೆಯ ಹರಿಕಾರ, ಪ್ರಪಂಚದಲ್ಲಿಯೇ ಪ್ರಪ್ರಥಮವಾಗಿ ಸಂಸದೀಯ ವ್ಯವಸ್ಥೆಯನ್ನು ಜಾರಿಗೆ ತಂದಿರುವ ಕ್ರಾಂತಿಯೋಗಿ ಶ್ರೀ ಬಸವಣ್ಣನವರ ಚಿಂತನೆಗಳನ್ನು ನಾಡಿನಾದ್ಯಂತ ಪಸರಿಸಲು, ಅವರ ಚಿಂತನೆಗಳನ್ನು ಇನ್ನೂ ಹೆಚ್ಚಿನ ಅಧ್ಯಯನಕ್ಕೆ ಒಳಪಡಿಸಲು ಅನುಕೂಲವಾಗುವಂತೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಸವ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು 2ಕೋಟಿ ರೂ.ಅನುದಾನ ಒದಗಿಸಲಾಗುವುದು.
ಮಹಾಕವಿ ಕುವೆಂಪು ಅವರ ದರ್ಶನವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕುವೆಂಪು ಅವರ ಮೈಸೂರಿನ ನಿವಾಸ ಉದಯ ರವಿಯನ್ನು ರಾಷ್ಟ್ರಕವಿ ಸ್ಮಾರಕವಾಗಿ ಸಂರಕ್ಷಿಸಿ ಅಭಿವೃದ್ಧಿಪಡಿಸಲಾಗುವುದು. ಜಿಲ್ಲೆಯ ಹುಣಸೂರು ಮತ್ತು ಎಚ್.ಡಿ.ಕೋಟೆ ತಾಲೂಕಿನಲ್ಲಿ ತಲಾ 1 ಕೋಟಿ ರೂ. ವೆಚ್ಚದಲ್ಲಿ ಆದಿವಾಸಿ ಸಮುದಾಯ ಭವನ ನಿರ್ಮಾಣ. ಮೈಸೂರಿನಲ್ಲಿ ಮಾಜಿ ಸಚಿವ ದಿ.ಅಜೀಜ್ ಸೇs… ಸ್ಮಾರಕ ಸಮುದಾಯ ಭವನ ನಿರ್ಮಿಸಲು 3 ಕೋಟಿ ರೂ. ಒದಗಿಸಲಾಗುವುದು ಎಂದು ಆಯವ್ಯಯದಲ್ಲಿ ಹೇಳಲಾಗಿದೆ.
ಸ್ಮಾರಕ ಮಾಡಲು ಅಭ್ಯಂತರವಿಲ್ಲ; ಮಾತುಕತೆ ಮುಗಿದಿಲ್ಲ: ಕುವೆಂಪು ಅವರ ಮೈಸೂರಿನ ಮನೆ ಉದಯ ರವಿಯನ್ನು ರಾಜ್ಯದ ಜನತೆ ವೀಕ್ಷಿಸುವಂತೆ ಒಳ್ಳೆಯ ಉದ್ದೇಶದಿಂದ ಸರ್ಕಾರ ರಾಷ್ಟ್ರಕವಿ ಸ್ಮಾರಕ ಮಾಡಲು ಮುಂದಾಗಿದ್ದರೆ ನಮ್ಮ ಅಭ್ಯಂತರವಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಒಬ್ಬರು ಅಧಿಕಾರಿ ಬಂದು ಮಾತುಕತೆ ನಡೆಸಿದ್ದು ಬಿಟ್ಟರೆ, ಈವರೆಗೆ ಆ ಬಗ್ಗೆ ಅಂತಿಮ ಹಂತದ ಮಾತುಕತೆಗಳಾಗಿಲ್ಲ.
ಸ್ಮಾರಕ ಮಾಡುವುದಾದರೆ ನಮ್ಮದೇ ಆದ ಕೆಲ ಷರತ್ತುಗಳಿವೆ. ಷೇಕ್ಸ್‌ಪಿಯರ್, ವರ್ಡ್ಸ್‌ವರ್ಥ್ ಮ್ಯೂಸಿಯಂ ಅನ್ನು ನಾವು ನೋಡಿಬಂದಿದ್ದೇವೆ. ಅಲ್ಲಿನ ಅಂಶಗಳನ್ನು ಇಲ್ಲಿ ಅಳವಡಿಸಿಕೊಂಡರೆ ಉತ್ತಮ. ಅದನ್ನು ಬಿಟ್ಟು ನಮ್ಮಿಷ್ಟದಂತೆ ಮಾಡಿಕೊಳ್ಳುತ್ತೇವೆ ಎಂದರೆ ಉಪಯೋಗವಿಲ್ಲ.
ಮನೆ ಕುವೆಂಪು ಮಗಳು ತಾರಿಣಿ ಅವರ ಹೆಸರಿನಲ್ಲಿದೆ. ಕುವೆಂಪು ಅವರ ಪುಸ್ತಕಗಳನ್ನು ಪ್ರಕಟ ಮಾಡಬೇಕಾದ್ದರಿಂದ ತಾರಿಣಿಯವರು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಕುವೆಂಪು ಅವರ ಮತ್ತೂಬ್ಬ ಮಗ ಚೈತ್ರ, ಮೊಮ್ಮಕ್ಕಳೂ ಕೂಡ ಈ ಮನೆಗೆ ಹಕ್ಕುದಾರರು. ಅವರೆಲ್ಲರ ಒಪ್ಪಿಗೆ ಪಡೆಯಬೇಕಾಗುತ್ತದೆ ಎನ್ನುತ್ತಾರೆ ಕುವೆಂಪು ಅಳಿಯ, ವಿಶ್ರಾಂತ ಕುಲಪತಿ ಡಾ.ಚಿದಾನಂದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.