ದೇಶದ ಮೊದಲ ಕೆನೊಪಿ ವಾಕ್‌ ಲೋಕಾರ್ಪಣೆ


Team Udayavani, Feb 19, 2018, 6:45 AM IST

Ban19021812Medn.jpg

ದಾಂಡೇಲಿ: ನಿಸರ್ಗದತ್ತವಾಗಿ ಬಂದಿರುವ ಹಚ್ಚ ಹಸಿರಿನಿಂದ ಕಂಗೊಳಿಸುವ ಮತ್ತು ಬೃಹತ್‌ ಅರಣ್ಯ ಹಾಗೂ ವನ್ಯ ಸಂಪತ್ತನ್ನು ಹೊಂದಿರುವ ದಾಂಡೇಲಿ- ಜೊಯಿಡಾ ಪ್ರದೇಶ ವಿಶ್ವಮಟ್ಟದಲ್ಲಿ ಗುರುತಿಸುವಂತಾಗಬೇಕೆಂಬ ಉತ್ಕಟ ಬಯಕೆಯಿಂದ ರಾಷ್ಟ್ರದಲ್ಲೇ ಮೊದಲ ಪ್ರಯತ್ನವೆಂಬಂತೆ ಕೆನೊಪಿ ವಾಕ್‌ ನಿರ್ಮಿಸಲಾಗಿದೆ. ಇದು ಪ್ರವಾಸೋದ್ಯಮ ಕ್ಷೇತ್ರದ ಪ್ರಗತಿಗೆ ಬಹುದೊಡ್ಡ ಶಕ್ತಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.

ಭಾನುವಾರ ಜೊಯಿಡಾ ತಾಲೂಕಿನ ಕುವೇಶಿ ಅರಣ್ಯದಲ್ಲಿ ನೂತನವಾಗಿ ನಿರ್ಮಿಸಲಾದ ರಾಷ್ಟ್ರದ ಮೊದಲ ಕೆನೊಪಿ ವಾಕ್‌ನ್ನು ಲೋಕಾರ್ಪಣೆಗೊಳಿಸಿ ಮತ್ತು ಗ್ರೇಟ್‌ ಕೆನರಾ ಟ್ರೇಲಿಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿದೇಶದಲ್ಲಿ ಕೆಲವೆಡೆ ಈ ಕೆನೊಪಿ ವಾಕ್‌ ಇದ್ದು, ಅಲ್ಲಿಯ ತಂತ್ರಜ್ಞಾನಗಳನ್ನೇ ಬಳಸಿ ಕುವೇಶಿಯಲ್ಲಿ ನಿರ್ಮಿಸಲಾಗಿದೆ. 

ಪ್ರವಾಸೋದ್ಯಮ ಇಲಾಖೆಯ 84 ಲಕ್ಷ ರೂ.ಅನುದಾನದಲ್ಲಿ ನಿರ್ಮಾಣಗೊಂಡಿರುವ ಈ ಕೆನೊಪಿ ವಾಕ್‌, 240 ಮೀಟರ್‌ ಉದ್ದವಿದೆ. ಆ ಭಾಗದ ಅರಣ್ಯ ಹಾಗೂ ಮರಗಳನ್ನೇ ಬಳಸಿ, ಅರಣ್ಯ, ಪರಿಸರ ಹಾಗೂ ಮರಗಳಿಗೆ ಧಕ್ಕೆಯಾಗದ ರೀತಿಯಲ್ಲಿ ನಿರ್ಮಿಸಲಾಗಿದ್ದು, ರಾಷ್ಟ್ರದಲ್ಲೇ ಇದು ಚೊಚ್ಚಲ ಪ್ರಯೋಗ. ಕೆನಾಪಿ ವಾಕ್‌ ಕೇವಲ ಸ್ಥಳೀಯರನ್ನಷ್ಟೇ ಅಲ್ಲದೆ, ರಾಜ್ಯ, ದೇಶ, ವಿದೇಶಗಳ ಪ್ರವಾಸಿಗರನ್ನೂ ಆಕರ್ಷಿಸಲಿದೆ. ಜೊತೆಗೆ, ಕುವೇಶಿ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಬರುವ ಹೋಮ್‌ ಸ್ಟೇಯವರಿಗೂ ಲಾಭ ತರಲಿದೆ ಎಂದರು.

ಪ್ರವಾಸೋದ್ಯಮ ಇಲಾಖೆಯ ಒಂದು ಕೋಟಿ ರೂ.ಗಳ ಅನುದಾನದಲ್ಲಿ ನಿರ್ಮಾಣಗೊಂಡಿರುವ ಈ ಗ್ರೇಟ್‌ ಕೆನರಾ ಟ್ರೇಲ್‌ ಹೊನ್ನಾವರದ ಗೇರುಸೊಪ್ಪಾದಿಂದ ಶಿರಸಿ, ಯಲ್ಲಾಪುರ, ಮಾರ್ಗವಾಗಿ ಕುವೇಶಿಯವರೆಗೂ ಸುಮಾರು 270 ಕಿಮೀ ಸಾಗಲಿದೆ. ಕಾಳಿ ರಕ್ಷಿತ ಪ್ರದೇಶದ 75 ಕಿಮೀಗಳಲ್ಲಿ ಈ ಟ್ರೇಲ್‌ ಸಂಚರಿಸಲಿದೆ. ಉಳಿದದ್ದು ಯಲ್ಲಾಪುರ, ಶಿರಸಿ, ಹೊನ್ನಾವರದಲ್ಲಿರಲಿದ್ದು, ಬರುವ ಪ್ರವಾಸಿಗರಿಗೆ ತೊಂದರೆಯಾಗದ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಬಾಸರಕೋಡ, ಕಾಳಿ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಓ.ಪಾಲಯ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ| ರಮೇಶ, ಜಿಪಂ ಸದಸ್ಯ ಹಣಬರ, ರಮೇಶ ನಾಯ್ಕ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸದಾನಂದ ದಬಗಾರ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.