800 ಕೋಟಿ ರೂ. ವಂಚನೆ: Rotomac promoter ವಿರುದ್ಧ ಎಫ್ಐಆರ್
Team Udayavani, Feb 19, 2018, 12:03 PM IST
ಹೊಸದಿಲ್ಲಿ : 800 ಕೋಟಿ ರೂ. ವಂಚನೆಗೈದಿರುವುದಾಗಿ ಬ್ಯಾಂಕ್ ಆಫ್ ಬರೋಡ ನೀಡಿದ ದೂರಿನ ಅನ್ವಯ ಸಿಬಿಐ ಇಂದು ರೋಟೋಮ್ಯಾಕ್ ಪೆನ್ ಪ್ರಮೋಟರ್ ವಿಕ್ರಮ್ ಕೊಠಾರಿ ವಿರುದ್ಧ ಎಫ್ಐಆರ್ ದಾಖಲಿಸಿತೆದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ನಸುಕಿನ ವೇಳೆಯಲ್ಲಿ ಕೊಠಾರಿಯ ಕಾನ್ಪುರ ನಿವಾಸ ಮತ್ತು ಕಚೇರಿಗೆ ದಾಳಿ ಮಾಡಿದ ಸಿಬಿಐ ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡಿತು. ಆದರೆ ಈ ತನಕ ಯಾರನ್ನೂ ಬಂಧಿಸಲಾಗಿಲ್ಲ ಎಂದು ಸಿಬಿಐ ವಕ್ತಾರ ಅಭಿಷೇಕ್ ದಯಾಳ್ ಹೇಳಿದರು.
ಕೊಠಾರಿ, ಅವರ ಪತ್ನಿ ಮತುತ ಪುತ್ರನನ್ನು ಸಿಬಿಐ ಪ್ರಶ್ನಿಸುತ್ತಿದೆ ಎಂದವರು ಹೇಳಿದರು.
ನೀರವ್ ಮೋದಿ ಪಂಜಾಬ್ ನ್ಯಾಶನಲ್ ಬ್ಯಾಂಗಿಗೆ 11,400 ಕೋಟಿ ರೂ. ವಂಚಿಸಿದ ಬೆನ್ನಿಗೇ ಬೆಳಕಿಗೆ ಬಂದಿರುವ ಎರಡನೇ ಅತೀ ದೊಡ್ಡ ಹಣಕಾಸು ವಂಚನೆ ಹಗರಣ ಇದಾಗಿದೆ.
ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್ ಮೋದಿ, ಆತನ ಚಿಕ್ಕಪ್ಪ ಮೆಹುಲ್ ಚೋಕ್ಸಿ (ಗೀತಾಂಜಲಿ ಜೆಮ್ಸ್ ಸಮೂಹ ಕಂಪೆನಿಗಳ ಪ್ರಮೋಟರ್) ಈಗಾಗಲೇ ವಿದೇಶಕ್ಕೆ ಪಲಾಯನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.