ಸುಬ್ರಹ್ಮಣ್ಯಕ್ಕೆ ಶಾ; ಕ್ಷೇತ್ರದಲ್ಲಿ  ಬಿಗಿಭದ್ರತೆ

Team Udayavani, Feb 19, 2018, 12:41 PM IST

amith-sha.jpg

ಸುಬ್ರಹ್ಮಣ್ಯ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಅಮಿತ್‌ ಶಾ ಅವರು ಫೆ. 19ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ.

ಶಾ ಅವರ ಸ್ವಾಗತಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಆಗಮನ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಸ್ವಾಗತ ಫ್ಲೆಕ್ಸ್‌ , ಪಕ್ಷದ ಧ್ವಜ ಹಾಗೂ ಬಂಟಿಂಗ್ಸ್‌ ಅಳ ವಡಿಸ ಲಾಗಿದೆ. ನವಶಕ್ತಿ ಸಮಾವೇಶ ನಡೆ ಯುವ ಕುಲ್ಕುಂದದಲ್ಲಿ 5,000 ಮಂದಿಗೆ ಅನುಕೂಲವಾಗುವಂತೆ ಬೃಹತ್‌ ವೇದಿಕೆ ಹಾಗೂ ಪೆಂಡಾಲ್‌ ನಿರ್ಮಿಸಲಾಗಿದೆ.

ಯಡಿಯೂರಪ್ಪ ಅನುಮಾನ
ಸುಬ್ರಹ್ಮಣ್ಯದ ಸಮಾವೇಶದಲ್ಲಿ ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಹಾಗೂ ನಳಿನ್‌ ಕುಮಾರ್‌ ಕಟೀಲು ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ, ಅನಂತಕುಮಾರ್‌ ಭಾಗವಹಿಸುತ್ತಾರೆ ಎಂದು ಹೇಳಲಾಗುತ್ತಿದೆಯಾದರೂ ಇವರು ಆಗಮಿಸುವ ಸಾಧ್ಯತೆ ಕಡಿಮೆ. ಪುತ್ತೂರು ಅಥವಾ ಬಂಟ್ವಾಳ ಕಾರ್ಯಕ್ರಮದಲ್ಲಿ ಇವರೆಲ್ಲರೂ ಭಾಗವಹಿಸುತ್ತಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಮಿತ್‌ ಶಾ 9.45ಕ್ಕೆ ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಪ್ರಯಾಣ ಮುಂದುವರಿಸುವರು. ಸಮಾವೇಶದ ಇತರ ಕಾರ್ಯಕ್ರಮಗಳು ಮಧ್ಯಾಹ್ನ 12ರ ತನಕ ಮುಂದುವರಿಯಲಿವೆ.

ಹೆಸರಿಗಷ್ಟೆ ವಿವಿಐಪಿ: ಸೌಕರ್ಯಗಳಿಲ್ಲ 
ಅಮಿತ್‌ ಶಾ ತಂಗುವ ವಸತಿಗೃಹ ವಿವಿಐಪಿ ಆಗಿದ್ದರೂ ಗಣ್ಯಾತಿಗಣ್ಯರು ಉಳಿದುಕೊಳ್ಳಲು ಬೇಕಿರುವ ಎಲ್ಲ ವ್ಯವಸ್ಥೆಗಳು ಈ ವಸತಿಗೃಹದ ಕೊಠಡಿಗಳಲ್ಲಿ ಇಲ್ಲ. ವಸತಿಗೃಹಕ್ಕೆ ಇದುವರೆಗೆ ಸಿಸಿ ಕೆಮರಾ ಅಳವಡಿಸಿಲ್ಲ, ಲಿಫ್ಟ್ ವ್ಯವಸ್ಥೆ ಇಲ್ಲ. ವಸತಿಗೃಹಕ್ಕೆ ಮೀಸಲು ಜನರೇಟರ್‌ ಇಲ್ಲ. ವಸತಿಗೃಹದ ಸುತ್ತಲೂ ಬೆಳಕಿನ ವ್ಯವಸ್ಥೆ ಇಲ್ಲ. ಹೀಗಾಗಿ ರವಿವಾರ ತರಾತುರಿಯಲ್ಲಿ ಇತರೆಡೆಗಳಿಂದ 10 ಸಿಸಿ ಕೆಮರಾ ತರಿಸಿ ಅಳ ವಡಿಸ ಲಾಗಿದೆ. ಬೆಳಕಿಗಾಗಿ ವಸತಿಗೃಹದ ಸುತ್ತಲೂ ಹ್ಯಾಲೋಜಿನ್‌ ಬಲುºಗಳನ್ನು ಕಾರ್ಮಿಕರು ಅಳವಡಿಸುತ್ತಿದ್ದುದು ಕಂಡು ಬಂದಿದೆ. ವಸತಿಗೃಹವನ್ನು ತೊಳೆದು ಸ್ವತ್ಛ ಗೊಳಿಸುವ ಕೆಲಸ ಕೂಡ ರವಿವಾರ ನಡೆದಿದೆ. 

ಕ್ಷೇತ್ರದಲ್ಲಿ  ಬಿಗಿಭದ್ರತೆ
ಅಮಿತ್‌ ಶಾ ಕುಕ್ಕೆ  ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದತ್ರೆ ಏರ್ಪಡಿಸಲಾಗಿದೆ. ಪಕ್ಷದ ನಾಯಕ ರಿಗೆ ವಿನಾ ಇನ್ಯಾರಿಗೂ ಕೊಠಡಿ ನೀಡಿಲ್ಲ. ಶಾ ಅವರು ತಂಗುವ ಕೊಠಡಿಗೆ ಇಂಟರ್‌ನೆಟ್‌,  ದೂರವಾಣಿ, ಟಿ.ವಿ., ಪ್ರಿಂಟರ್‌, ಫ್ರಿಜ್‌ ಸಹಿತ ಎಲ್ಲ ಸೌಕರ್ಯಗಳನ್ನು ಒದಗಿಸಲಾಗಿದೆ. ವಿಶೇಷ ಭದ್ರತಾ ಪಡೆಯ 12 ಮಂದಿ ಯೋಧರು ಆಗಮಿಸಿದ್ದು, ಭದ್ರತೆ ದೃಷ್ಟಿಯಿಂದ ಶಾ ತಂಗುವ ಕೊಠಡಿ ಹಾಗೂ ನವಶಕ್ತಿ ಸಮಾವೇಶ ನಡೆಯುವ ಸ್ಥಳದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ಪರಿಶೀಲನೆ ನಡೆಸಿ ದ್ದಾರೆ. ಎಎನ್‌ಎಫ್ ಪಡೆಯ ನಾಲ್ಕು ತಂಡಗಳು ಸುಬ್ರಹ್ಮಣ್ಯ ಮತ್ತು ಸುತ್ತ ಮುತ್ತ ಶೋಧ ಕಾರ್ಯಾಚರಣೆ ನಡೆಸಿ ಕಟ್ಟೆಚ್ಚರ ವಹಿಸಿವೆ. ಶಾ ಆಗಮಿ ಸುವ ಉಪ್ಪಿನಂಗಡಿ-ಸುಬ್ರಹ್ಮಣ್ಯ ಮಾರ್ಗ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ ರನ್ನು ನಿಯೋಜಿಸಲು ಸಿದ್ಧತೆ ಗಳು ನಡೆಯುತ್ತಿದ್ದು, ಹೆಚ್ಚುವರಿ ಸಿಬಂದಿ ಯನ್ನು ಕರೆಸಿ ಕೊಳ್ಳಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪುತ್ತೂರು ಡಿವೈಎಸ್‌ಪಿ ಶ್ರೀನಿವಾಸ್‌ ಮತ್ತು ವೃತ್ತನಿರೀಕ್ಷಕ ಸತೀಶ್‌ ಭದ್ರತಾ ವ್ಯವಸ್ಥೆಯನ್ನು  ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

7-bunts

Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.