ಕೊಡಗು ರೈಲ್ವೆ ಮಾರ್ಗ ತಡೆಗೆ ಪ್ರಧಾನಿಗೆ ಒತ್ತಾಯ


Team Udayavani, Feb 19, 2018, 12:45 PM IST

m1-kodagu.jpg

ಮೈಸೂರು: ಉದ್ದೇಶಿತ ಕೊಡಗು ರೈಲ್ವೆ ಮಾರ್ಗ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಶಾಶ್ವತವಾಗಿ ತಡೆಹಿಡಿಯುವ ಕುರಿತು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಯನ್ನು ಒತ್ತಾಯಿಸುವ ಬಗ್ಗೆ ಕೊಡಗು ರೈಲ್ವೆ ಮಾರ್ಗ ವಿರೋಧಿ ಹೋರಾಟ ವೇದಿಕೆ ವತಿಯಿಂದ ಭಾನುವಾರ ನಗರದಲ್ಲಿ ನಡೆಸಲಾದ ಬೃಹತ್‌ ಪ್ರತಿಭಟನಾ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೊಡಗು ರೈಲ್ವೆ ಮಾರ್ಗ ವಿರೋಧಿ ಹೋರಾಟ ವೇದಿಕೆ ನೇತೃತ್ವದಲ್ಲಿ ನಗರದ ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಯುನೈಟೆಡ್‌ ಕೂರ್ಗ್‌ ಆರ್ಗನೈಜೇಷನ್‌ ಸಂಚಾಲಕ ಮಂಜು ಚಿಣ್ಣಪ್ಪ, ಕೊಡಗಿಗೆ ಮಾರಕವಾದ ಯೋಜನೆ ಬರುತ್ತಿರುವಾಗ ನಾವು ವಿರೋಧಿಸಬೇಕಿದೆ.

ಈ ಹಿಂದೆ ಡೋಂಗಿ ರಾಜಕಾರಣಿಗಳ ಭರವಸೆಯನ್ನು ನಂಬಿದ ಪರಿಣಾಮ 400ಕೆವಿ ವಿದ್ಯುತ್‌ ಲೈನ್‌ ಹಾದು ಹೋಗುವಂತಾಯಿತು. ಇದಕ್ಕಾಗಿ ಜಿಲ್ಲೆಯಾದ್ಯಂತ 56 ಸಾವಿರ ಮರಗಳ ಹನನ ಮಾಡಲಾಗಿದ್ದು, ಇದರಿಂದ ರೈಲ್ವೆ ಹಳಿಗಳ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುವ ಅನಿವಾರ್ಯತೆ ಎದುರಾಗಿದೆ.

ರೈಲ್ವೆ ಹಳಿ ನಿರ್ಮಾಣ ಯೋಜನೆ ಪ್ರಾರಂಭಿಕ ಹಂತದಲ್ಲಿರುವ ಸಂದರ್ಭದಲ್ಲೇ ಇದನ್ನು ವಿರೋಧಿಸಿ ಹೋರಾಟ ನಡೆಸಬೇಕಿದ್ದು, ಈ ಯೋಜನೆ ಅನುಷ್ಠಾನಗೊಂಡಲ್ಲಿ ಸಾಮಾಜಿಕ ಅಸಮತೋಲನ ಉಂಟಾಗಿ, ಜನಜೀವನ ಹಾಗೂ ಪ್ರಾಣಿಸಂಕುಲಗಳಿಗೆ ಮಾರಕವಾಗಲಿದೆ. ಹೀಗಾಗಿ ಉದ್ದೇಶಿತ ರೈಲು ಯೋಜನೆ ವಿರುದ್ಧ ಹೋರಾಟ ಆರಂಭಗೊಂಡಿದ್ದು, ಈ ವಿಷಯವಾಗಿ ಜೀವ ಇರುವವರೆಗೂ ಹಿರಿಯರ ಮಾರ್ಗದರ್ಶನ ಪಡೆದು ಹೋರಾಟ ಮುಂದುವರೆಸುತ್ತೇವೆ ಎಂದರು.

ಅಭಿವೃದ್ಧಿ ಹೆಸರಲ್ಲಿ ಪರಿಸರ ನಾಶ: ಪರಿಸರ ಹೋರಾಟಗಾರ ಡಾ.ಸುರೇಶ್‌ ಹೆಬ್ಳೀಕರ್‌ ಮಾತನಾಡಿ, ಕೊಡಗು ಕರ್ನಾಟಕದ ವಾಟರ್‌ ಟವರ್‌ ಇದ್ದಂತೆ, ಬೆಂಗಳೂರು ಸೇರಿ ಕಾವೇರಿ ಕಣಿವೆ ಜನರಿಗೆ ಜೀವನದಿ. ಅಭಿವೃದ್ಧಿ ಹೆಸರಿನಲ್ಲಿ ಕಾಡನ್ನು ಕಡಿಯುತ್ತಾ ಹೋದರೆ ಪರಿಸರ ನಾಶವಾಗಲಿದ್ದು, ಈಗಾಗಲೇ ಹವಾಮಾನ ವೈಪರೀತ್ಯದಿಂದ ಜಾಗತಿಕ ತಾಪಮಾನ ಹೆಚ್ಚಾಗುತ್ತಿದೆ. ರೈಲು ಯೋಜನೆ ಹೆಸರಿನಲ್ಲಿ ಕಾಡು ನಾಶ ಮಾಡಿದರೆ ಪರಿಸರ ನಾಶಕ್ಕೆ ನಾವೇ ನಾಂದಿ ಹಾಡಿದಂತಾಗಲಿದ್ದು, ಹೀಗಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಕೈಬಿಟ್ಟು ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು.

ಸಾವಿರಾರು ಮರ ಹನನ: ಕಾಂಗ್ರೆಸ್‌ ಮುಖಂಡ ಬ್ರಿಜೇಶ್‌ ಕಾಳಪ್ಪ ಮಾತನಾಡಿ, ಕೊಡಗಿನ ಮೂಲಕ ಮೈಸೂರು-ತಲಚೇರಿ ನಡುವಿನ ರೈಲ್ವೆ ಮಾರ್ಗವಲ್ಲದೆ, ಮೈಸೂರು-ಕುಶಾಲನಗರಕ್ಕೂ ರೈಲ್ವೆ ನಿರ್ಮಾಣ ಮಾಡದಂತೆ ನಾವು ಒಕ್ಕೊರಲಿನಿಂದ ಒತ್ತಾಯಿಸಬೇಕಾಗಿದೆ. ಯಾವುದೇ ಕಾರಣಕ್ಕೂ ನಮ್ಮ ಜಿಲ್ಲೆಗೆ ರೈಲು ಬರುವುದು, ಬೇಡ. ಉದ್ದೇಶಿತ ಯೋಜನೆಗೆ ರಾಜ್ಯ ಸರ್ಕಾರವೂ ಸಹಕಾರ ನೀಡುವುದಿಲ್ಲ.

ಮೈಸೂರು-ತಲಚೇರಿ ರೈಲು ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಿ ವಾಕಥಾನ್‌ ಮಾಡುವ ಮೂಲಕ ಪ್ರತಿ ಜಿಲ್ಲೆಯ ಜನರಿಗೆ ಮಾಹಿತಿ ನೀಡಬೇಕಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಸತತ ಬರಗಾಲವಿದ್ದು, ಜನರಿಗೆ ಕುಡಿಯುವುದಕ್ಕೂ ನೀರು ಪೂರೈಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ರೈಲ್ವೆ ಹಳಿ ಬಂದರೆ ಸಾವಿರಾರು ಮರಗಳ ಹನನವಾಗಿ ಮಳೆ ಪ್ರಮಾಣ ಕುಸಿಯಲಿದ್ದು, ಇದರಿಂದ ಜೀವನಕ್ಕೆ ತೊಂದರೆಯಾಗುತ್ತದೆ ಎಂದರು.

ಸಭೆಯಲ್ಲಿ ಕೊಡಗು ರೈಲ್ವೆ ಮಾರ್ಗ ವಿರೋಧಿ ಹೋರಾಟ ವೇದಿಕೆ ಸಂಚಾಲಕರಾದ ಕರ್ನಲ್‌ ಮುತ್ತಣ್ಣ, ವಿಧಾನಪರಿಷತ್‌ ಮಾಜಿ ಸದಸ್ಯ ಅರುಣ್‌ ಮಾಚಯ್ಯ, ತಮಿಳುನಾಡಿನ ಯುಕ್ತಾನಂದ ಸ್ವಾಮೀಜಿ, ಮೈಸೂರು ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಸೇಪ್‌ ವ್ಹೀಲ್‌ ಮಾಲೀಕ ಬಿ.ಎಸ್‌.ಪ್ರಶಾಂತ್‌, ವಿಶ್ರಾಂತ ಕುಲಪತಿ ಪೊ›.ಕೆ.ಎಸ್‌.ರಂಗಪ್ಪ, ರಾಜೀವ್‌ ಬೋಪಣ್ಣ, ಅರ್ಜುನ್‌ ದೇವಯ್ಯ, ಟ್ರಾವೆಲ್‌ ಮಾರ್ಟ್‌ ಸಂಸ್ಥೆಯ ಸಿ.ಎ. ಜಯಕುಮಾರ್‌ ಇನ್ನಿತರರು ಭಾಗವಹಿಸಿದ್ದರು.

ಸಭೆಯ ನಿರ್ಣಯಗಳು: ಕೊಡಗು ರೈಲ್ವೆ ಮಾರ್ಗ ವಿರೋಧಿ ಹೋರಾಟ ವೇದಿಕೆಯಿಂದ ನಡೆಸಲಾದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅದರಂತೆ ಕಾವೇರಿ ನದಿ ಹಾಗೂ ಕೊಡಗು ಜಿಲ್ಲೆಗೆ ಮಾರಕವಾಗುವ ಯೋಜನೆಗಳ ವಿರುದ್ಧ ಹಾಗೂ ರೈಲ್ವೆ ಮಾರ್ಗ ಮತ್ತು ಬಹುಪಥ ರಸ್ತೆ ನಿರ್ಮಾಣ ಕಾರ್ಯವನ್ನು ವಿರೋಧಿಸುತ್ತೇವೆ, ಕೊಡಗು ಜಿಲ್ಲೆಯನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿರುತ್ತೇವೆ,

ಕೊಡಗು ಜಿಲ್ಲೆ ವಿಶೇಷವಾದ ಭೌಗೋಳಿಕ ಪ್ರದೇಶ ಹಾಗೂ ಉತ್ತಮ ಪರಿಸರವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ, ಮತ್ತು ಇಲ್ಲಿನ ಮೂಲ ನಿವಾಸಿಗಳ ಜೀವನ ಪದ್ಧತಿಗೆ ಅನುಗುಣವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಕೃಷಿಯೇತರ ಚಟುವಟಿಕೆಗೆ ಭೂ ಪರಿವರ್ತನೆ ಮಾಡುವುದಕ್ಕೆ ಕಡಿವಾಣ ಹಾಕಬೇಕು ಹಾಗೂ ಕಾವೇರಿ ನದಿ, ಅದರ ಉಪ ನದಿಗಳನ್ನು ಉಳಿಸುವಲ್ಲಿ ಪೂರ್ಣ ಮಲೆನಾಡು ಪ್ರದೇಶವನ್ನು ಸಂರಕ್ಷಿಸಲು ಪ್ರಬಲ ಹೋರಾಟ ನಡೆಸಬೇಕೆಂಬ ಬಗ್ಗೆ ತೀರ್ಮಾನಿಸಲಾಯಿತು.

ಟಾಪ್ ನ್ಯೂಸ್

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.