“ಪುಟ್ಟಣ್ಣಯ್ಯರ ರೈತ ಹೋರಾಟ ‘ ಕೊಂಡಾಡಿದ ವಿಧಾನಸಭೆ 


Team Udayavani, Feb 20, 2018, 6:25 AM IST

vidhana-soudha-750.jpg

ಬೆಂಗಳೂರು: ರಾಜ್ಯ ವಿಧಾನಮಂಡಲದ ಉಭಯ ಸದನಗಳಲ್ಲಿ ಕೆ.ಎಸ್‌. ಪುಟ್ಟಣ್ಣಯ್ಯ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿಧಾನಸಭೆಯಲ್ಲಿ ಮಾತನಾಡಿದ ಸದಸ್ಯರು “ಪುಟ್ಟಣ್ಣಯ್ಯ ಅವರು ಅಪ್ರತಿಮ ರೈತ ಹೋರಾಟಗಾರ, ಉತ್ತಮ ಸಂಸದೀಯ ಪಟು, ರೈತ ಚಳವಳಿಯಲ್ಲಿ ಸರ್ಕಾರ ಮತ್ತು ಕೃಷಿಕರ ನಡುವಿನ
ಕೊಂಡಿಯಾಗಿದ್ದ ವ್ಯಕ್ತಿ ಎಂದು ಕೊಂಡಾಡಿದರು.

ಕಲಾಪದ ಆರಂಭದಲ್ಲಿ ಸ್ಪೀಕರ್‌ ಕೋಳಿವಾಡ ಅವರು ಸಂತಾಪ ಸೂಚಕ ನಿರ್ಣಯ ಮಂಡಿಸಿ, ರಾಜ್ಯ ರೈತ ಸಂಘದ ಅಧ್ಯಕ್ಷರಾಗಿ, ಶಾಸಕರಾಗಿ ಸಲ್ಲಿಸಿದ ಸೇವೆ ಸ್ಮರಿಸಿದರು. ರೈತರ ಹೆಗ್ಗುರುತಾಗಿ ಸದಾ ಹಸಿರು ಶಾಲು ಧರಿಸುತ್ತಿದ್ದ ಪುಟ್ಟಣ್ಣಯ್ಯ ನಿಧನದಿಂದ ರಾಜ್ಯ ಒಬ್ಬ ರೈತ ಮುಖಂಡನನ್ನು ಕಳೆದುಕೊಂಡಂತಾಗಿದೆ ಎಂದು ಶೋಕ ವ್ಯಕ್ತಡಿಸಿದರು.

ಕಾನೂನು ಸಚಿವ ಟಿ.ಬಿ ಜಯಚಂದ್ರ ಸಂತಾಪ ಸೂಚಕ ನಿರ್ಣಯ ಪರವಾಗಿ ಮಾತನಾಡುತ್ತಾ, ನಂಜುಂಡಸ್ವಾಮಿಯ
ವರ ಬಳಿಕ ಪುಟ್ಟಣ್ಣಯ್ಯನವರು ಸದನದಲ್ಲಿ ಸಮರ್ಥವಾಗಿ ರೈತರ ಪರವಾಗಿ ದನಿಯೆತ್ತುತ್ತಿದ್ದರು. ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು. ಕಾವೇರಿ ಸಮಸ್ಯೆ ಬಗೆಹರಿಸಲು ಸಾಕಷ್ಟು ಹೋರಾಡುತ್ತಿದ್ದರು. ಪುಟ್ಟಣ್ಣಯ್ಯನವರು ಇರುವಾಗಲೇ ಕಾವೇರಿ ತೀರ್ಪು ಕರ್ನಾಟಕದ ಪರವಾಗಿ ಬಂದಿರುವುದು ಅವರಿಗೆ ಸಮಾಧಾನ ತಂದಿದೆ ಎಂದು ಹೇಳಿದರು.

ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್‌ ಮಾತನಾಡಿ, ಅವರ ಹೋರಾಟ ಮಂಡ್ಯ ಜಿಲ್ಲೆಗೆ, ದಕ್ಷಿಣ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದ್ದಿಲ್ಲ, ಕಬ್ಬು ಬೆಳೆಗಾರರ ಹೋರಾಟದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಬಂದಿದ್ದನ್ನು, ಮಹದಾಯಿ ಹೋರಾಟದಲ್ಲಿ ಭಾಗವಹಿಸಿದ್ದನ್ನು ನೆನಪಿಸಿಕೊಂಡರು.

ಕೃಷಿ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಪುಟ್ಟಣ್ಣಯ್ಯ ರೈತ ಕುಲಕ್ಕೇ ಆಸ್ತಿಯಾಗಿದ್ದರು. ಕೃಷಿಕರ ತೊಂದರೆಗಳನ್ನು ಬಲಯುತವಾಗಿ ಪ್ರತಿಪಾದಿಸುತ್ತಿದ್ದ ಅವರು ರೈತರಿಗೆ ವೇತನ ಆಯೋಗ ಮಾಡಬೇಕೆಂದು ಹೇಳುತ್ತಿದ್ದರು ಎಂದು ಹೇಳಿದರು. ಶಾಸಕ ವೈ.ಎಸ್‌.ವಿ.ದತ್ತ, ರಾಜ್ಯ ಸರ್ಕಾರ ಪುಟ್ಟಣ್ಣಯ್ಯನವರನ್ನು ನೆನಪಿಸುವ ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮ ರೂಪಿಸಬೇಕೆಂದು ಆಗ್ರಹಿಸಿದರು.

ಸಚಿವರಾದ ಎಚ್‌.ಕೆ.ಪಾಟೀಲ್‌, ಯು.ಟಿ.ಖಾದರ್‌, ಜೆಡಿಎಸ್‌ನ ಬಂಡಾಯ ಶಾಸಕ ಚೆಲುವರಾಯಸ್ವಾಮಿ, ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವಮೂರ್ತಿ ನಾಯಕ್‌, ಕೋನರೆಡ್ಡಿ, ಜಿ.ಟಿ ದೇವೇಗೌಡ,ಮೊಯಿದ್ದೀನ್‌ ಬಾವ,ಬಿ.ಆರ್‌. ಪಾಟೀಲ್‌,ಜಿ.ಟಿ.ಪಾಟೀಲ್‌, ಅಶೋಕ ಖೇಣಿ, ನಾರಾಯಣಗೌಡ ಪುಟ್ಟಣ್ಣಯ್ಯನವರ ವ್ಯಕ್ತಿತ್ವ ಗುಣಗಾನ ಮಾಡಿ ಮಾತನಾಡಿದರು. ಸಂತಾಪ ಸೂಚನೆ ನಂತರ ಶಾಸಕರೆಲ್ಲ ಸದನದಲ್ಲಿ ಒಂದು ನಿಮಿಷ ಮೌನಾಚರಿಸಿ ಪುಟ್ಟಣ್ಣಯ್ಯನವರ ಆತ್ಮಕ್ಕೆ ಶಾಂತಿ ಕೋರಿದರು.ನಂತರ ಮೃತರ ಗೌರವಾರ್ಥ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ವಿಧಾನಪರಿಷತ್ತಿನಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಸಂತಾಪ ಸೂಚನಾ ನಿರ್ಣಯ ಮಂಡಿಸಿದರು. ಇದನ್ನು ಬೆಂಬಲಿಸಿ ಸಭಾನಾಯಕ ಎಂ.ಆರ್‌. ಸೀತಾರಾಂ ಹಾಗೂ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಮಾತನಾಡಿದರು. ಬಳಿಕ ಮೃತರ ಗೌರವಾರ್ಥ ಸದನವನ್ನು ಮಂಗಳವಾರಕ್ಕೆ ಮುಂದೂಡಲಾಯಿತು.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.