ಧಾರ್ಮಿಕ ಕ್ಷೇತ್ರದಲ್ಲಿ ಸಂಚಾರ ಸಮಸ್ಯೆ
Team Udayavani, Feb 20, 2018, 11:05 AM IST
ಅಫಜಲಪುರ: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳಗಳಾಗಿರುವ ಘತ್ತರಗಿ ಮತ್ತು ದೇವಲ ಗಾಣಗಾಪುರದಲ್ಲಿ ವಾಹನ ನಿಲುಗಡೆ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ.
ದೇವಲ ಗಾಣಗಾಪುರದ ದತ್ತ ಕ್ಷೇತ್ರಕ್ಕೆ ಹುಣ್ಣಿಮೆ ಸಂದರ್ಭಗಳಲ್ಲಿ ಕಿಕ್ಕಿರಿದು ಜನರು ಸೇರುತ್ತಾರೆ. ಪಾರ್ಕಿಂಗ್ ವ್ಯವಸ್ಥೆ ಇಲ್ಲದ್ದರಿಂದ ಗ್ರಾಮದ ಮುಖ್ಯ ರಸ್ತೆಗಳ ಮೇಲೆಲ್ಲ ಖಾಸಗಿ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ.
ಗ್ರಾಮದಲ್ಲಿ ಸಾಕಷ್ಟು ಖಾಸಗಿ ಅತಿಥಿ ಗೃಹಗಳು, ಲಾಡ್ಜ್ಗಳು ಮತ್ತು ಹೋಟೆಲ್ ಗಳಿವೆ. ಆದರೆ ಯಾವುದೇ ಕಟ್ಟಡಗಳಲ್ಲಿ
ಪಾರ್ಕಿಂಗ್ ವ್ಯವಸ್ಥೆ ಇಲ್ಲ. ಹೊಲಗಳಲ್ಲಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಅಲ್ಲದೆ ನೂರಾರು ವಾಹನಗಳು ಬಂದು ಅಲ್ಲಲ್ಲಿ ನಿಲ್ಲುವುದರಿಂದ ಪೊಲೀಸರಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಮಹಾರಾಷ್ಟ್ರ, ಸೀಮಾಂಧ್ರ, ತೆಲಂಗಾಣ ರಾಜ್ಯಗಳ ಜನರು ಘತ್ತರಗಿ ಭಾಗ್ಯವಂತಿ ದರ್ಶನಕ್ಕೆ ಬರುತ್ತಾರೆ. ಇಲ್ಲಿಯೂ ದೇವಲ ಗಾಣಗಾಪುರದ ರೀತಿಯಲ್ಲಿ ಸಂಚಾರ ಸಮಸ್ಯೆ ಇದೆ. ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದ್ದರಿಂದ ರಸ್ತೆಗಳ ಮೇಲೆ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ.
ಹವಳಗಗಿ ರೇಣುಕಾ ಸಕ್ಕರೆ ಕಾರ್ಖಾನೆಗೆ ನೂರಾರು ಕಬ್ಬಿನ ವಾಹನಗಳು ತೆರಳುತ್ತವೆ. ಇದರಿಂದಾಗಿ ಉಳಿದ ವಾಹನಗಳು ಓಡಾಡುವುದು ದುಸ್ತರವಾಗಿದೆ. ಒಂದು ವೇಳೆ ಘತ್ತರಗಿಯಲ್ಲಿ ಸಂಚಾರ ಕಿರಿಕಿರಿಗೆ ಶಾಶ್ವತ ಮುಕ್ತಿ ಸಿಕ್ಕರೆ ಪ್ರಸಿದ್ಧ ಪ್ರವಾಸಿ ತಾಣವಾಗುವುದರಲ್ಲಿ ಯಾವುದೇ ಸಂಶಯವಿಲ್ಲ.
ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದ್ದರಿಂದ ಮುಖ್ಯ ರಸ್ತೆಗಳ ಮೇಲೆ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ನೂರಾರು ವಾಹನಗಳು ಓಡಾಡುವುದರಿಂದ ಧೂಳಿನ ಸಮಸ್ಯೆ ವಿಪರಿತವಾಗಿ ಕಾಡುತ್ತಿದೆ. ಅಲ್ಲದೆ ವೃದ್ದರು, ಮಕ್ಕಳು ರಸ್ತೆ ದಾಟುವುದು ದುಸ್ತರವಾಗಿದೆ ಎಂದು ಗ್ರಾಮಸ್ಥರು ಮತ್ತು ವ್ಯಾಪಾರಸ್ಥರು ತಿಳಿಸಿದ್ದಾರೆ.
ದೇವಲ ಗಾಣಗಾಪುರ ರಾಜ್ಯದ ಪ್ರಸಿದ್ಧಯಾತ್ರಾ ಸ್ಥಳವಾಗಿದೆ. ಆದರೆ ಇಲ್ಲಿನ ಸಂಚಾರ ಮತ್ತು ನಿಲುಗಡೆ ಸಮಸ್ಯೆಯಿಂದ ಗ್ರಾಮದ ಹೆಸರು ಹಾಳಾಗುತ್ತಿದೆ. ಹೀಗಾಗಿ ಸಂಬಂಧಿಸಿದ ಅಧಿಕಾರಿ ತಕ್ಷಣ ಗ್ರಾಮದಲ್ಲಿನ ಸಂಚಾರ ಕಿರಿಕಿರಿಗೆ ಶಾಶ್ವತ ಮುಕ್ತಿ ಕೊಡಿಸುವ ಕೆಲಸ ಮಾಡಬೇಕು ಎಂದು ದೇವಲ ಗಾಣಗಾಪುರ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ವಾಹನ ಸವಾರಿ ಸವಾಲು
ಘತ್ತರಗಿ ಗ್ರಾಮದ ರಸ್ತೆ ಕಿರಿದಾಗಿದ್ದು, ವಾಹನ ಸವಾರಿ ಮಾಡುವುದು ಸವಾಲಿನ ಕೆಲಸವಾಗಿದೆ. ಅಲ್ಲದೆ ಕಬ್ಬಿನ ಕಾರ್ಖಾನೆಗೆ ಹೋಗುವ ವಾಹನಗಳಿಗಾಗಿ ಬೈಪಾಸ್ ರಸ್ತೆ ನಿರ್ಮಿಸಬೇಕು. ಇಲ್ಲದಿದ್ದರೆ ಬೇಕಂತಲೇ ಅನಾಹುತಗಳಿಗೆ ಎಡೆ ಮಾಡಿಕೊಟ್ಟಂತಾಗುತ್ತದೆ.
ರಾಜೇಂದ್ರ ಪಾಟೀಲ, ಬಿಜೆಪಿ ಮುಖಂಡರು ಅಫಜಲಪುರ
ಮಲ್ಲಿಕಾರ್ಜುನ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.