ಪದವೀಧರರಿಗೆ ಕೌಶಲ್ಯ ಅಗತ್ಯ


Team Udayavani, Feb 20, 2018, 11:45 AM IST

padavi.jpg

ಬೆಂಗಳೂರು: ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ನಡುವೆ ಸೃಷ್ಟಿಯಾಗಿರುವ ದೊಡ್ಡ ಕಂದಕದಿಂದಾಗಿ ಶೇ.80 ರಷ್ಟು ಪದವೀಧರರು ಉದ್ಯೋಗ ಪಡೆದುಕೊಳ್ಳಲು ವಿಫ‌ಲರಾಗುತ್ತಿದ್ದಾರೆ ಎಂದು ತಾಂತ್ರಿಕ ಶಿಕ್ಷಣ ನಿರ್ದೇಶಕ ಎಚ್‌.ಯು ತಳವಾರ್‌ ಕಳವಳ ವ್ಯಕ್ತಪಡಿಸಿದರು.

ಸೋಮವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಯೋಗಾರ್ಹತೆಯ ಬಲವರ್ಧನೆ ಸಂಬಂಧಿಸಿದಂತೆ ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಹೈರ್‌ಮಿ ಸಂಸ್ಥೆಯ ನಡುವೆ ಒಡಬಂಡಿಕೆ ಮಾಡಿಕೊಂಡ ನಂತರ ಮಾತನಾಡಿದರು.

ಎಂಜಿನಿಯರಿಂಗ್‌ ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರೈಸಿದ ಪದವೀಧರರಲ್ಲಿ ಶೇ.20ರಷ್ಟು ಮಂದಿಗೆ ಮಾತ್ರ ಉದ್ಯೋಗ ದೊರೆಯುತ್ತಿದೆ. ಉಳಿದ ಶೇ.80ರಷ್ಟು ಅಭ್ಯರ್ಥಿಗಳು ಉದ್ಯೋಗ ಪಡೆಯಲು ಸಾಕಷ್ಟು ಒದ್ದಾಡುತ್ತಿರುತ್ತಾರೆ.

ಇಂತಹ ಅಭ್ಯರ್ಥಿಗಳ ಮೇಲೆ ಸರ್ಕಾರ ಹಾಗೂ ಖಾಸಗಿ ವಲಯ ವಿಶೇಷ ಗಮನ ನೀಡುವ ಅಗತ್ಯವಿದೆ ಎಂದರು. ಕೈಗಾರಿಕೆಗಳು ಮತ್ತು ಶಿಕ್ಷಣ ಸಂಸ್ಥೆಗಳು ಜತೆಯಾಗಿ ತಾಂತ್ರಿಕ ಶಿಕ್ಷಣ ಪಠ್ಯಕ್ರಮ ಸಿದ್ಧಪಡಿಸುವ ಮೂಲಕ ತಾಂತ್ರಿಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕೌಶಲ್ಯಕ್ಕೆ ವೇದಿಕೆ ಸೃಷ್ಟಿಸಬೇಕು ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಎಂಜಿನಿಯರಿಂಗ್‌ ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳಲ್ಲಿ ಉದ್ಯೋಗ ಮಾಹಿತಿ ಕೋಶದ ಉನ್ನತೀಕರಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಇದರ ಮಾಹಿತಿಯನ್ನು ಸಮರ್ಪಕವಾಗಿ ನೀಡುವ ಕೆಲಸ ಮಾಡಬೇಕು. ಪದವಿ ಮತ್ತು ಸ್ನಾತಕೋತ್ತರ ಪದವಿ ಬಳಿಕ ಲಭ್ಯವಿರುವ ಉದ್ಯೋಗವಕಾಶದ ಮಾಹಿತಿ ಈ ಕೇಂದ್ರದಿಂದಲೇ ಲಭ್ಯವಾಗಲಿದೆ ಎಂದು ಹೇಳಿದರು.

ಹೈರ್‌ಮಿ ಸಂಸ್ಥಾಪಕ ಚೊಕ್ಕಲಿಂಗಂ ವಲ್ಲಿಯಪ್ಪಮಾತನಾಡಿ, ಕಾಲೇಜುಗಳಲ್ಲಿ ನಡೆಯುವ ಕ್ಯಾಂಪಸ್‌ ಸಂದರ್ಶನಲ್ಲಿ 10ರಲ್ಲಿ ಒಬ್ಬ ವಿದ್ಯಾರ್ಥಿಗೆ ಉದ್ಯೋಗ ದೊರೆತರೆ, ಕ್ಯಾಂಪಸ್‌ ಹೊರಗೆ ನಡೆಯುವ ಸಂದರ್ಶನಗಳಲ್ಲಿ 5 ಸಾವಿರಕ್ಕೆ ಒಬ್ಬ ವಿದ್ಯಾರ್ಥಿ ಉದ್ಯೋಗ ಪಡೆಯುತ್ತಿದ್ದಾನೆ.

ಅಭ್ಯರ್ಥಿಯೊಬ್ಬ ಉದ್ಯೋಗ ಪಡೆಯಲು ಕನಿಷ್ಠ 25 ರಿಂದ 30 ಕಂಪನಿಗಳ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕಾದ ಸ್ಥಿತಿ ಇದೆ. ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ 1 ಲಕ್ಷಕ್ಕೂ ಹೆಚ್ಚು ಪಾಲಿಟೆಕ್ನಿಕ್‌ ವಿದ್ಯಾರ್ಥಿಗಳನ್ನು ಮೌಲ್ಯಮಾಪನ ಮಾಡಲಿದ್ದೇವೆ.

ಇದಕ್ಕಾಗಿ 1 ಸಾವಿರ ಜನರ ತಂಡ ಸಿದ್ಧಗೊಂಡಿದೆ ಎಂದು ಮಾಹಿತಿ ನೀಡಿದರು. ಟೊಯೊಟೊ ಸಂಸ್ಥೆಯ ಉಪ ವ್ಯವಸ್ಥಾಪಕ ಪರಶುರಾಮನ್‌, ಎಫ್ಕೆಸಿಸಿಐ ಅಧ್ಯಕ್ಷ ಕೆ. ರಘು, ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಭೋಜೆದರ್‌ ಮೊದಲಾದವರು ಇದ್ದರು.

ಟಾಪ್ ನ್ಯೂಸ್

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.