ಮಂಗಳೂರು: ಶಾಗೆ ಭರ್ಜರಿ ಸ್ವಾಗತ


Team Udayavani, Feb 20, 2018, 12:07 PM IST

Sha.jpg

ಮಂಗಳೂರು: ಕರಾವಳಿಯಲ್ಲಿ ಪಕ್ಷದ ಬಲವರ್ಧನೆ, ಪಕ್ಷದ ವಿವಿಧ ಕಾರ್ಯಕ್ರಮ, ಸಮಾವೇಶಗಳಲ್ಲಿ ಭಾಗವಹಿ ಸುವುದಕ್ಕಾಗಿ ಸೋಮವಾರ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪಕ್ಷದ ವತಿಯಿಂದ ಭರ್ಜರಿಯಾಗಿ ಸ್ವಾಗತಿಸಲಾಯಿತು. ಹೊಸದಿಲ್ಲಿಯಿಂದ ಸಂಜೆ 7 ಗಂಟೆಗೆ ಹೊರಟು ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್‌ ಶಾ ಅವರನ್ನು ನಿಲ್ದಾಣದಲ್ಲಿ ಸಂಸದ ನಳಿನ್‌ ಕುಮಾರ್‌ ಕಟೀಲು, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಬರಮಾಡಿಕೊಂಡರು.

ಕೆಂಜಾರಿನಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತ ನಾಡುವುದಕ್ಕೆ ನಿರ್ಮಿಸಿದ್ದ ವೇದಿಕೆಗೆ ಆಗಮಿಸಿದ ಅಮಿತ್‌ ಶಾ ಅವರು ಕಾರ್ಯಕರ್ತರತ್ತ ಕೈಬೀಸಿದಾಗ ಅಲ್ಲಿ ಸೇರಿದ್ದ ಸಾವಿರಕ್ಕೂ ಅಧಿಕ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು. ವೇದಿಕೆಯಲ್ಲಿ ಅಮಿತ್‌ ಶಾ ಅವರಿಗೆ ಪಕ್ಷದ ಮುಖಂಡರು ಹಾರ ಹಾಕಿ, ಪೇಟಾ ತೊಡಿಸಿ ಸಮ್ಮಾನಿಸಿದರು.

ಭಾಷಣ ರದ್ದು
ಕೆಂಜಾರಿನಲ್ಲಿ 15 ನಿಮಿಷಗಳ ಕಾಲ ಕಾರ್ಯಕರ್ತರನ್ನು ಉದ್ದೇಶಿಸಿ ಮಾತ ನಾಡುವುದಕ್ಕೆ ಜಿಲ್ಲಾ ಬಿಜೆಪಿಯಿಂದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಅಮಿತ್‌ ಶಾ ಕಾರ್ಯಕರ್ತರತ್ತ ಕೈಬೀಸಿ ಹೂಗುತ್ಛಗಳನ್ನು ಸ್ವೀಕರಿಸಿ ವೇದಿಕೆ ಯಿಂದ ನಿರ್ಗಮಿಸಿದರು. ಇದರಿಂದ ಕಾರ್ಯಕರ್ತರಿಗೆ ಕೊಂಚ ನಿರಾಶೆಯಾಯಿತು. ಶಾ ಆರೋಗ್ಯದಲ್ಲಿ ಅಲ್ಪ ಏರುಪೇರು ಉಂಟಾಗಿರುವುದರಿಂದ ಅವರು ಭಾಷಣ ಮಾಡುವುದು ಸಾಧ್ಯವಾಗುತ್ತಿಲ್ಲ ಎಂದು ಆಯೋ ಜಕರು ಘೋಷಿಸಿದರು. ಬಳಿಕ ಅಮಿತ್‌ ಶಾ ಕಾರಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ದತ್ತ ತೆರಳಿದರು.

ಮಾಜಿ ಸಚಿವ ಜೆ. ಕೃಷ್ಣಪಾಲೆಮಾರ್‌, ಮಂಗಳೂರು ದಕ್ಷಿಣ ಬಿಜೆಪಿ ಅಧ್ಯಕ್ಷ ವೇದವ್ಯಾಸ ಕಾಮತ್‌, ಮಾಜಿ ಶಾಸಕ ಎನ್‌. ಯೋಗೀಶ್‌ ಭಟ್‌, ವಿಧಾನಪರಿಷತ್‌ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ದ.ಕ. ಜಿಲ್ಲಾ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ, ಮೀನುಗಾರಿಕೆ ಮಹಾಮಂಡಲದ ಅಧ್ಯಕ್ಷ ಯಶಪಾಲ್‌ ಸುವರ್ಣ, ಮುಖಂಡರಾದ ಬದ್ರಿನಾಥ ಕಾಮತ್‌, ಸುಲೋಚನಾ ಜಿ.ಕೆ. ಭಟ್‌, ಡಾ| ವೈ. ಭರತ್‌ ಶೆಟ್ಟಿ, ಕಿಶೋರ್‌ ರೈ, ಈಶ್ವರ ಕಟೀಲು, ರವಿಶಂಕರ ಮಿಜಾರು, ಸತ್ಯಜಿತ್‌ ಸುರತ್ಕಲ್‌, ಸುದರ್ಶನ್‌ ಮೂಡಬಿದಿರೆ, ಜಿತೇಂದ್ರ ಕೊಟ್ಟಾರಿ, ಹರಿಕೃಷ್ಣ ಬಂಟ್ವಾಳ, ಕ್ಯಾ| ಬೃಜೇಶ್‌ ಚೌಟ, ಪೂಜಾ ಪೈ, ಶೋಭೇಂದ್ರ ಸಸಿಹಿತ್ಲು, ಸುಧೀರ್‌ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು.

ಯುವ ಮತದಾರರತ್ತ ಶಾ ಚಿತ್ತ ಯುವ ಮತದಾರರನ್ನು ಬಿಜೆಪಿ ತೆಕ್ಕೆಗೆ ಸೆಳೆದುಕೊಳ್ಳುವ ಕಾರ್ಯತಂತ್ರವನ್ನು ರೂಪಿಸಲಾಗಿದೆ. ಈ ನಿಟ್ಟಿನಲ್ಲಿ ಅಮಿತ್‌ ಶಾ ಅವರು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಮಂಗಳವಾರ ಬೆಳಗ್ಗೆ 10.15ರಿಂದ 11.40ರ ವರೆಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಮಧ್ಯಾಹ್ನ 12.30ರಿಂದ ಬಂಟ್ವಾಳದಲ್ಲಿ ಬಂಟ್ವಾಳ, ಪುತ್ತೂರು ಹಾಗೂ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಗಳ ನವಶಕ್ತಿ ಸಮಾವೇಶದಲ್ಲಿ ಬೂತ್‌ ಮಟ್ಟದ ಪ್ರಮುಖರನ್ನು ಉದ್ದೇಶಿಸಿ ಮಾತನಾಡಿ ಪಕ್ಷ ಸಂಘಟನೆಗೆ ಪ್ರೇರೇಪಣೆ, ಮಾರ್ಗದರ್ಶನ ನೀಡಲಿದ್ದಾರೆ. ಇಲ್ಲಿ 3 ಕ್ಷೇತ್ರಗಳ 600 ಬೂತ್‌ಗಳಿಂದ ಸುಮಾರು 5,400 ಬೂತ್‌ ಪ್ರಮುಖರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಪರಾಹ್ನ 3 ಗಂಟೆಗೆ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ದೀಪಕ್‌ ರಾವ್‌ ಮನೆಗೆ ಭೇಟಿ ನೀಡುವರು. 3.30ಕ್ಕೆ ಸುರತ್ಕಲ್‌ನಲ್ಲಿ ಪತ್ರಿಕಾಗೋಷ್ಠಿ, ಸಂಜೆ 5 ಗಂಟೆಗೆ ಮಲ್ಪೆಯಲ್ಲಿ ಮೀನುಗಾರರ ಸಮಾವೇಶವನ್ನುದ್ದೇಶಿಸಿ ಮಾತನಾಡುವರು. 7 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವರು. ಮಂಗಳವಾರ ರಾತ್ರಿ ಉಡುಪಿ ಬನ್ನಂಜೆಯ ಪ್ರವಾಸಿ ಬಂಗಲೆಯಲ್ಲಿ  ತಂಗುವರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.