ಕರ್ತವ್ಯದಲ್ಲಿ ನಿರ್ಲಕ್ಷ್ಯ ಕಂಡರೆ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ

Team Udayavani, Feb 20, 2018, 3:35 PM IST

t-39.jpg

ಯಾದಗಿರಿ: ವಿಧಾನಸಭಾ ಚುನಾವಣೆ ನಡೆಸುವ ಹಿನ್ನೆಲೆಯಲ್ಲಿ ಆಯಾ ಇಲಾಖೆಗೆ ವಹಿಸಿರುವ ಕರ್ತವ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಇಲ್ಲದಿದ್ದರೆ ನಿರ್ಲಕ್ಷ್ಯವಹಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ಎಚ್ಚರಿಕೆ ನೀಡಿದರು. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಚುನಾವಣೆ ನಿಮಿತ್ತ ಕರೆದಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯಲ್ಲಿನ ಪ್ರತಿಯೊಂದು ಮತ ಗಟ್ಟೆಗಳಲ್ಲಿ ಸಕಲ ಮೂಲಭೂತ ಸೌಲಭ್ಯ ಕಲ್ಪಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ 1127 ಮತಗಟ್ಟೆಗಳು ಇದ್ದು, ಅವುಗಳ ಪೈಕಿ ಕೆಲವು ಮತಗಟ್ಟೆಗಳಿಗೆ ವಿದ್ಯುತ್‌, ಕುಡಿಯುವ ನೀರು, ಶೌಚಾಲಯ, ರ್‍ಯಾಂಪ್‌ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳು ಕೊರತೆ ಇವೆ. ಮತದಾರರ ಹಿತದೃಷ್ಟಿಯಿಂದ ಎಲ್ಲಾ ಸೌಕರ್ಯಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ಪ್ರತಿಯೊಂದು ಮತಗಟ್ಟೆಯ ವ್ಯಾಪ್ತಿಯಲ್ಲಿ ಬರುವ ಅಂಗವಿಕಲ ಮತದಾರರ ವರದಿ ಪಡೆದು ಅವರಿಗೆ ಮತದಾನ ಮಾಡಲು ಸೂಕ್ತ ಅನುಕೂಲ ಮಾಡಬೇಕು. ಅವರಿಗಾಗಿ ಪ್ರತಿ ಮತಗಟ್ಟೆಯಲ್ಲಿ ರ್‍ಯಾಂಪ್‌ ನಿರ್ಮಿಸಬೇಕು. 18 ವರ್ಷ ಮೇಲ್ಪಟ್ಟು ವಯಸ್ಸಿನ ವಿಕಲಚೇತನರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿದೆಯೋ ಇಲ್ಲವೋ ಎಂಬುದರ ಬಗ್ಗೆ ಪರಿಶೀಲಿಸಿ, ಹೆಸರು ನೋಂದಣಿ ಮಾಡದಿದ್ದರೆ, ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮತದಾರರಿಗೆ ತಿಳಿಯುವಂತೆ ಬಹುತೇಕ ಮತಗಟ್ಟೆಗಳ ವಿಳಾಸವನ್ನು ಸ್ಪಷ್ಟವಾಗಿ ನಮೂದಿಸಬೇಕು. ಮತಗಟ್ಟೆಗಳಲ್ಲಿ ನೆಟ್‌ವರ್ಕ್‌, ಇಂಟರ್‌ನೆಟ್‌ ಇನ್ನಿತರೆ ಸೌಲಭ್ಯಗಳ ಕುರಿತು ಮಾಹಿತಿ ತಿಳಿದುಕೊಂಡು ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಮಂಜುನಾಥ ಸ್ವಾಮಿ ಹಾಗೂ ಇತರೆ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.