ಸುಪ್ರೀಂಕೋರ್ಟ್ ತೀರ್ಪಿಗೆ ಎಚ್.ಡಿ.ದೇವೇಗೌಡರ ಅತೃಪ್ತಿ
Team Udayavani, Feb 21, 2018, 6:50 AM IST
ಹಾಸನ: ಕಾವೇರಿ ಜಲ ವಿವಾದ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅತೃಪ್ತಿ ವ್ಯಕ್ತಪಡಿಸಿದ್ದಾರೆ.
ಚನ್ನರಾಯಪಟ್ಟಣ ತಾಲೂಕು ಎ.ಕಾಳೇನಹಳ್ಳಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಕರ್ನಾಟಕಕ್ಕೆ ಕಾವೇರಿ ನ್ಯಾಯಾಧಿಕರಣ ಹಂಚಿಕೆ ಮಾಡಿದ್ದಕ್ಕಿಂತ ಸುಮಾರು 15 ಟಿಎಂಸಿ ಅಡಿ ಹೆಚ್ಚುವರಿಯಾಗಿ ಹಂಚಿಕೆ ಮಾಡಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎಂದರು.
ಅದರಲ್ಲಿ ಬೆಂಗಳೂರಿಗೆ ಕುಡಿಯುವ ನೀರಿಗೆ ಸುಮಾರು 5 ಟಿಎಂಸಿ ಅಡಿ ಹಂಚಿಕೆ ಮಾಡಿದೆ. ಅಂದರೆ ಕರ್ನಾಟಕ ಪ್ರತಿ ವರ್ಷ ತಮಿಳುನಾಡಿಗೆ 192 ಟಿಎಂಸಿ ಅಡಿ ಬಿಡಬೇಕೆಂದು ನೀಡಿದ್ದ ನೀರಿನಲ್ಲಿ ಕೇವಲ 14.75 ಟಿಎಂಸಿ ಅಡಿ ಕಡಿಮೆ ಮಾಡಿದೆ. ಅದರಲ್ಲಿಯೇ ಬೆಂಗಳೂರು ಮಹಾ ನಗರಕ್ಕೆ ಕುಡಿಯುವ ನೀರಿಗಾಗಿ 4.25 ಟಿಎಂಸಿ ನಿಗದಿಪಡಿಸಿದೆ.
ಅಂದರೆ ತಮಿಳುನಾಡಿಗೆ ಈ ಹಿಂದೆ ಬಿಡಬೇಕಾಗಿದ್ದ 192 ಟಿಎಂಸಿ ಅಡಿ ನೀರಿನಲ್ಲಿ ಕೇವಲ 14.75 ಟಿಎಂಸಿ ಅಡಿ ಕಡಿಮೆಯಾಗಿದೆ ಅಷ್ಟೇ. ನ್ಯಾಯಾಧೀಕರಣವು ಕರ್ನಾಟಕದಿಂದ ತಮಿಳುನಾಡಿಗೆ ಬಿಡಬೇಕೆಂದು 2007ರಲ್ಲಿ ನೀಡಿದ್ದ ತೀರ್ಪಿನಲ್ಲಿ ನಿಗದಿಪಡಿಸಿದ್ದ 192 ಟಿಎಂಸಿ ಅಡಿಗಳಲ್ಲಿ 40 ಟಿಎಂಸಿಗೂ ಅಧಿಕ ನೀರು ಕಡಿತ ಮಾಡಬೇಕಾಗಿತ್ತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.