ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶ: ಕೇಂದ್ರಕ್ಕೆ ಶೀಘ್ರ ವರದಿ
Team Udayavani, Feb 21, 2018, 6:15 AM IST
ವಿಧಾನ ಪರಿಷತ್ತು: ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ಆರೋಪದಿಂದ ನಿಷೇಧದ ಭೀತಿ ಬಗ್ಗೆ ಪತ್ರಿಕಾ ವರದಿ ಹಿನ್ನೆಲೆಯಲ್ಲಿ ಸದ್ಯದಲ್ಲೇ ಅಡಿಕೆ ಬೆಳೆಗಾರರ ಮಂಡಳಿ ರಚಿಸಲಾಗುವುದು. ಜತೆಗೆ ತೋಟಗಾರಿಕೆ ವಿಜ್ಞಾನ ವಿವಿಯ ವರದಿ ಪಡೆದು ಕೇಂದ್ರ ಸರ್ಕಾರಕ್ಕೆ ರವಾನಿಸಲಾಗುವುದು ಎಂದು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ಮಂಗಳವಾರ ಶೂನ್ಯವೇಳೆಯಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕ ಐವಾನ್ ಡಿಸೋಜಾ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿ, “ಈಗಾಗಲೇ ಮೂರ್‍ನಾಲ್ಕು ಬಾರಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಅಡಿಕೆ ಬೆಲೆ ಕುಸಿದಾಗ ಪ್ರೋತ್ಸಾಹ ಧನ ನೀಡುವಂತೆಯೂ ಕೇಂದ್ರಕ್ಕೆ ಮನವಿ ಮಾಡಲಾಗಿದೆ’ ಎಂದು ಹೇಳಿದರು.
ಅಡಿಕೆಯಲ್ಲಿ ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ಆರೋಪದಿಂದ ನಿಷೇಧಕ್ಕೆ ಒಳಗಾಗುವ ಭೀತಿ ಕುರಿತ ಪತ್ರಿಕಾ ವರದಿ ಗಮನಿಸಿದ್ದೇನೆ. ಈ ಬಗ್ಗೆ ಮತ್ತೂಮ್ಮೆ ಪ್ರಯೋಗಾಲಯ ವರದಿ ಪಡೆದು ಪರಿಶೀಲಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ರಾಜ್ಯ ಸರ್ಕಾರದ ವತಿಯಿಂದಲೂ ಶಿಫಾರಸು ಕಳುಹಿಸಲಾಗುವುದು ಎಂದು ವಿವರಿಸಿದರು.
ಸಂಸದರ ಮೌನ: ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಐವಾನ್ ಡಿಸೋಜಾ, ಕ್ಯಾನ್ಸರ್ ಕಾರಕ ಅಂಶವಿದೆ ಎಂಬ ಆರೋಪದಿಂದಾಗಿ ಅಡಿಕೆಗೆ ನಿಷೇಧದ ಭೀತಿ ಕುರಿತು ಪತ್ರಿಕೆಯಲ್ಲಿ ವರದಿಯಾಗಿದ್ದು, ಅಡಿಕೆ ಬೆಳೆಗಾರರಲ್ಲಿ ಆತಂಕ ಸೃಷ್ಟಿಯಾಗಿದೆ. ಅಧಿಕಾರಿಗಳು ಕೊಟ್ಟ ತಪ್ಪು ಮಾಹಿತಿಯನ್ನೇ ನಂಬಿ ಕೇಂದ್ರ ಸರ್ಕಾರ ಎರಡು ತಿಂಗಳ ಹಿಂದೆಯೇ ಈ ವಿಚಾರ ಪ್ರಸ್ತಾಪಿಸಿದ್ದರೂ ರೈತರ ಪರ ನಿಲ್ಲಬೇಕಾದ ರಾಜ್ಯದ ಸಂಸದರು ಈವರೆಗೆ ಮಾತನಾಡಿರುವುದು ಅಚ್ಚರಿ ಮೂಡಿಸಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.